ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ರಾಜಕಾರಣ ಕಾವೇರಲಾರಂಭಿಸಿದೆ. ನಾಮಪತ್ರ ಸಲ್ಲಿಸಲು ಅಂತಿಮ ದಿನವಾದ ಗುರುವಾರ ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳು ಉಮೇದುವಾರಿಕೆ ಅರ್ಜಿ ಸಲ್ಲಿಸಿದ್ದಾರೆ.

ಕಾವೇರಿದ ಶಿವಮೊಗ್ಗ ನಗರ ಕ್ಷೇತ್ರದ ರಾಜಕಾರಣ! : ಬಿಜೆಪಿ-ಕಾಂಗ್ರೆಸ್-ಜೆಡಿಎಸ್ ಹುರಿಯಾಳುಗಳಿಂದ ನಾಮಪತ್ರ ಸಲ್ಲಿಕೆ

 -ಬಿ.ರೇಣುಕೇಶ್-

ಶಿವಮೊಗ್ಗ, ಎ. 20: ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ರಾಜಕಾರಣ ಕಾವೇರಲಾರಂಭಿಸಿದೆ. ನಾಮಪತ್ರ ಸಲ್ಲಿಸಲು ಅಂತಿಮ ದಿನವಾದ ಗುರುವಾರ ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳು ಉಮೇದುವಾರಿಕೆ ಅರ್ಜಿ ಸಲ್ಲಿಸಿದ್ದಾರೆ.

ಬಿಜೆಪಿಯಿಂದ ಎಸ್.ಎನ್.ಚನ್ನಬಸಪ್ಪ, ಕಾಂಗ್ರೆಸ್ ನಿಂದ ಹೆಚ್.ಸಿ.ಯೋಗೇಶ್ ಹಾಗೂ ಜೆಡಿಎಸ್ ನಿಂದ ಆಯನೂರು ಮಂಜುನಾಥ್ ಅವರು ಚುನಾವಣಾಧಿಕಾರಿಗಳಿಗೆ ಉಮೇದುವಾರಿಕೆ ಅರ್ಜಿ ಸಲ್ಲಿಸಿದ್ದಾರೆ.

ಮೆರವಣಿಗೆ: ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ತಮ್ಮ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಗೂ ಮುನ್ನ ಬೃಹತ್ ಮೆರವಣಿಗೆ ನಡೆಸಿ, ಶಕ್ತಿ ಪ್ರದರ್ಶನ ಮಾಡಿದವು.

ಬಿಜೆಪಿ ಪಕ್ಷದ ಮೆರವಣಿಗೆ ಕೋಟೆ ಆಂಜನೇಯ ಸ್ವಾಮಿ ದೇವಾಲಯದಿಂದ ಆರಂಭವಾದರೆ, ಕಾಂಗ್ರೆಸ್ ಪಕ್ಷದ ಮೆರವಣಿಗೆಯು ರಾಮಣ್ಣ ಶ್ರೇಷ್ಠಿ ಪಾರ್ಕ್ ನಿಂದ ಪ್ರಾರಂಭವಾಯಿತು. ಎರಡೂ ಕಡೆ ಭಾರೀ ಸಂಖ್ಯೆಯ ಕಾರ್ಯಕರ್ತರು ಭಾಗಿಯಾಗಿದ್ದರು.

ಉಳಿದಂತೆ ಜೆಡಿಎಸ್ ಪಕ್ಷವು ಕಚೇರಿಯಲ್ಲಿ ಕಾರ್ಯಕರ್ತರ ಸಭೆ ನಡೆಸಿದ ನಂತರ, ಅಭ್ಯರ್ಥಿಯು ಪಕ್ಷದ ಮುಖಂಡರೊಂದಿಗೆ ಪಾಲಿಕೆ ಕಚೇರಿಗೆ ಆಗಮಿಸಿ ಉಮೇದುವಾರಿಕೆ ಅರ್ಜಿ ಸಲ್ಲಿಸಿದರು.

ಬಿರುಸು: ಮೂರು ಪಕ್ಷಗಳ ಅಭ್ಯರ್ಥಿಗಳ ಆಯ್ಕೆ ವಿಳಂಬವಾಗಿತ್ತು. ಕಳೆದ ವಾರ ಕಾಂಗ್ರೆಸ್ ಪಕ್ಷ ತನ್ನ ಹುರಿಯಾಳು ಹೆಸರು ಪ್ರಕಟಿಸಿದ್ದರೆ, ಎ.19 ರಂದು ಜೆಡಿಎಸ್ ಹಾಗೂ ಬಿಜೆಪಿ ಅಭ್ಯರ್ಥಿಗಳ ಹೆಸರುಗಳು ಬಹಿರಂಗವಾಗಿತ್ತು. ಈ ಕಾರಣದಿಂದ ಶಿವಮೊಗ್ಗ ಕ್ಷೇತ್ರದಲ್ಲಿ ಪ್ರಚಾರ ಕಣ ಕಾವೇರಿರಲಿಲ್ಲ.

ಇದೀಗ ಮೂರು ಪಕ್ಷಗಳ ಅಭ್ಯರ್ಥಿಗಳು ಉಮೇದುವಾರಿಕೆ ಅರ್ಜಿ ಸಲ್ಲಿಸಿದ್ದಾರೆ. ಇದರಿಂದ ಕ್ಷೇತ್ರದಲ್ಲಿ ಪ್ರಚಾರ ಕಣ ರಂಗೇರಲಾರಂಭಿಸಿದೆ. ಮುಂದಿನ ದಿನಗಳಲ್ಲಿ ಮೂರು ಪಕ್ಷಗಳ ಘಟಾನುಘಟಿ ನಾಯಕರು, ತಮ್ಮ ಪಕ್ಷಗಳ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯಕ್ಕೆ ಆಗಮಿಸುತ್ತಿದ್ದು, ಪ್ರಚಾರ ಕಣ ಮತಷ್ಟು ಕಾವೇರುವುದು ನಿಶ್ಚಿತವಾಗಿದೆ.

ಅತ್ಯಧಿಕ ಮತಗಳ ಅಂತರದಲ್ಲಿ ಜಯ : ಚನ್ನಬಸಪ್ಪ

*** ‘ನನ್ನಂತಹ ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ ಪಕ್ಷ ಟಿಕೆಟ್ ನೀಡಿದೆ. ಇದು ಸಾಕಷ್ಟು ಸಂತೋಷವುಂಟು ಮಾಡಿದೆ. ನಮ್ಮ ನಾಯಕರಾದ ಕೆ.ಎಸ್.ಈಶ್ವರಪ್ಪರ ನೇತೃತ್ವದಲ್ಲಿಯೇ ಚುನಾವಣೆ ಎದುರಿಸುತ್ತೆವೆ’ ಎಂದು ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ ತಿಳಿಸಿದ್ದಾರೆ.

*** ‘ನನ್ನಂತಹ ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ ಪಕ್ಷ ಟಿಕೆಟ್ ನೀಡಿದೆ. ಇದು ಸಾಕಷ್ಟು ಸಂತೋಷವುಂಟು ಮಾಡಿದೆ. ನಮ್ಮ ನಾಯಕರಾದ ಕೆ.ಎಸ್.ಈಶ್ವರಪ್ಪರ ನೇತೃತ್ವದಲ್ಲಿಯೇ ಚುನಾವಣೆ ಎದುರಿಸುತ್ತೆವೆ’ ಎಂದು ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ ತಿಳಿಸಿದ್ದಾರೆ.

ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಪ್ರಸ್ತುತ ಚುನಾವಣೆಯಲ್ಲಿ ಕೆ.ಎಸ್.ಈಶ್ವರಪ್ಪರವರು ಹೇಳಿದಂತೆ, 60 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಜಯ ಸಾಧಿಸುವ ವಿಶ್ವಾಸವಿದೆ. ಶಿವಮೊಗ್ಗದಲ್ಲಿ ಬಿಜೆಪಿ ಪಕ್ಷ ಬಲಿಷ್ಠವಾಗಿದೆ ಎಂದರು ಹೇಳಿದರು.

ಮತದಾರರು ಕೈ ಹಿಡಿಯುವ ವಿಶ್ವಾಸವಿದೆ : ಹೆಚ್.ಸಿ.ಯೋಗೀಶ್

*** ‘ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದಿಂದ ಬಂದ ತಾವು ಮೂರು ಬಾರಿ ಕಾರ್ಪೋರೇಟರ್ ಆಗಿದ್ದೆನೆ. ನಾಗರೀಕರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುವ ಕಾರ್ಯ ನಡೆಸಿದ್ದೆನೆ’ ಎಂದು ಕಾಂಗ್ರೆಸ್ ಅಭ್ಯರ್ಥಿ ಹೆಚ್.ಸಿ.ಯೋಗೀಶ್ ತಿಳಿಸಿದ್ದಾರೆ.

*** ‘ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದಿಂದ ಬಂದ ತಾವು ಮೂರು ಬಾರಿ ಕಾರ್ಪೋರೇಟರ್ ಆಗಿದ್ದೆನೆ. ನಾಗರೀಕರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುವ ಕಾರ್ಯ ನಡೆಸಿದ್ದೆನೆ’ ಎಂದು ಕಾಂಗ್ರೆಸ್ ಅಭ್ಯರ್ಥಿ ಹೆಚ್.ಸಿ.ಯೋಗೀಶ್ ತಿಳಿಸಿದ್ದಾರೆ.

ಉಮೇದುವಾರಿಕೆ ಅರ್ಜಿ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ತಮ್ಮ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪುಚುಕ್ಕೆಗೆ ಆಸ್ಪದವಾಗದಂತೆ ಕಾರ್ಯನಿರ್ವಹಿಸಿದ್ದೆನೆ. ಇದು ಮತದಾರರ ಗಮನ ಸೆಳೆದಿದೆ. ಜನಪರವಾಗಿ ಕಾರ್ಯನಿರ್ವಹಣೆ ಮಾಡುತ್ತಿರುವ ತಮಗೆ ಮತದಾರರು ಬೆಂಬಲಿಸಲಿದ್ದಾರೆ. ಅತ್ಯಧಿಕ ಮತಗಳ ಅಂತರದಲ್ಲಿ ಗೆಲ್ಲಿಸಲಿದ್ದಾರೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು.

ಜನತೆ ಬದಲಾವಣೆ ಬಯಸಿದ್ದಾರೆ : ಆಯನೂರು ಮಂಜುನಾಥ್

*** ಶಿವಮೊಗ್ಗದ ಜನತೆ ಬದಲಾವಣೆ ಬಯಸಿದ್ದಾರೆ. ಶಾಂತಿ ಮತ್ತು ಸೌಹಾರ್ದತೆಗಾಗಿ ಜೆಡಿಎಸ್ ಪಕ್ಷ ಬೆಂಬಲಿಸುವ ವಿಶ್ವಾಸವಿದೆ ಎಂದು ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಅವರು ತಿಳಿಸಿದ್ದಾರೆ.

*** ಶಿವಮೊಗ್ಗದ ಜನತೆ ಬದಲಾವಣೆ ಬಯಸಿದ್ದಾರೆ. ಶಾಂತಿ ಮತ್ತು ಸೌಹಾರ್ದತೆಗಾಗಿ ಜೆಡಿಎಸ್ ಪಕ್ಷ ಬೆಂಬಲಿಸುವ ವಿಶ್ವಾಸವಿದೆ ಎಂದು ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಅವರು ತಿಳಿಸಿದ್ದಾರೆ.

ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಎರಡು ರಾಷ್ಟ್ರೀಯ ಪಕ್ಷಗಳ ಎದುರು ತಾವು ಸೆಣಸಬೇಕಾಗಿದೆ. ಶಿವಮೊಗ್ಗ ಜನತೆ ನೆಮ್ಮದಿ, ಶಾಂತಿ ಬಯಸುತ್ತಿದ್ದಾರೆ. ಈ ಕಾರಣದಿಂದ ಜೆಡಿಎಸ್ ಪರ ಒಲವು ವ್ಯಕ್ತಪಡಿಸುತ್ತಿದ್ದಾರೆ ಎಂದರು.

ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಎದುರಾಳಿಗಳಾಗಿರುವ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ Previous post ಸಾಗರ ವಿಧಾನಸಭಾ ಕ್ಷೇತ್ರ : ಹರತಾಳು ಹಾಲಪ್ಪ – ಬೇಳೂರು ಗೋಪಾಲಕೃಷ್ಣ ನಡುವೆ ಜಿದ್ದಾಜಿದ್ದಿನ ಹಣಾಹಣಿ!
: ಶಿವಮೊಗ್ಗ ಜಿಲ್ಲೆ ಕರ್ನಾಟಕ ರಾಜಕೀಯ ರಂಗದ ಶಕ್ತಿ ಕೇಂದ್ರಗಳಲ್ಲೊಂದು. ಇಲ್ಲಿನ ಹಲವು ನಾಯಕರು, ರಾಜ್ಯ ರಾಜಕೀಯ ಇತಿಹಾಸದಲ್ಲಿ ಹೆಸರುವಾಸಿಯಾಗಿದ್ದಾರೆ. ಆದರೆ ಪ್ರಸ್ತುತ ವಿಧಾನಸಭೆ ಚುನಾವಣೆಯಲ್ಲಿ, ಬಿಜೆಪಿ ಹಾಗೂ ಕಾಂಗ್ರೆಸ್ ನ ಪ್ರಮುಖ ನಾಯಕರು ಚುನಾವಣಾ ಕಣದಿಂದ ನಿವೃತ್ತಿ ಘೋಷಿಸಿದ್ದಾರೆ. ಇವರ ಹಲವು ದಶಕಗಳ ‘ಎಲೆಕ್ಷನ್ ಹೋರಾಟ’ಕ್ಕೆ ಪೂರ್ಣ ವಿರಾಮ ಬೀಳುವಂತಾಗಿದೆ! ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಕ್ರಿಯವಾಗಿದ್ದ ಬಿಜೆಪಿ ಪಕ್ಷದ ನಾಯಕರಾದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹಾಗೂ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಕಾಗೋಡು ತಿಮ್ಮಪ್ಪರವರು ಪ್ರಸ್ತುತ ಚುನಾವಣಾ ಕಣದಿಂದ ದೂರ ಉಳಿದಿದ್ದಾರೆ. Next post ಚುನಾವಣೆಗಳಿಂದ ನೇಪಥ್ಯಕ್ಕೆ ಸರಿದ ಯಡಿಯೂರಪ್ಪ – ಈಶ್ವರಪ್ಪ – ಕಾಗೋಡು ತಿಮ್ಮಪ್ಪ!