
ಸೀರೆ, ಬಟ್ಟೆ, ಅಡಕೆ, ಹಾರ್ಡ್ ವೇರ್ ವಸ್ತುಗಳು ವಶ!
ಶಿವಮೊಗ್ಗ, ಎ. 21: ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ತೆರೆಯಲಾಗಿರುವ ಚೆಕ್ ಪೋಸ್ಟ್ ಗಳಲ್ಲಿ, ದಾಖಲೆಯಿಲ್ಲದೆ ವಾಹನಗಳಲ್ಲಿ ಸಾಗಾಣೆ ಮಾಡುತ್ತಿದ್ದ ಲಕ್ಷಾಂತರ ರೂ. ಮೌಲ್ಯದ ವಿವಿಧ ವಸ್ತುಗಳನ್ನು ವಶಕ್ಕೆ ಪಡೆದ ಘಟನೆ ಎ.21 ರಂದು ನಡೆದಿದೆ.
ಈ ಕುರಿತಂತೆ ಜಿಲ್ಲಾ ಪೊಲೀಸ್ ಇಲಾಖೆ ಪತ್ರಿಕಾ ಪ್ರಕಟಣೆ ನೀಡಿದೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ವಾಹನದಲ್ಲಿ ಸಾಗಿಸುತ್ತಿದ್ದ 65.56 ಲಕ್ಷ ರೂ. ಮೌಲ್ಯದ 144 ಕ್ವಿಂಟಾಲ್ ತೂಕದ 206 ಚೀಲ ಅಡಕೆ ವಶಕ್ಕೆ ಪಡೆಯಲಾಗಿದೆ.
ಹಾಗೆಯೇ ಇದೇ ಠಾಣಾ ವ್ಯಾಪ್ತಿಯಲ್ಲಿ ವಾಹನದಲ್ಲಿ ಕೊಂಡೊಯ್ಯುತ್ತಿದ್ದ 3.72 ಲಕ್ಷ ರೂ. ಮೌಲ್ಯದ ಹಾರ್ಡ್ ವೇರ್ ವಸ್ತುಗಳನ್ನು ವಶ ಪಡಿಸಿಕೊಳ್ಳಲಾಗಿದೆ.
ಶಿಕಾರಿಪುರ ತಾಲೂಕು ಶಿರಾಳಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲೆಗಳಿಲ್ಲದೆ ಸಂಗ್ರಹಿಸಿಟ್ಟಿದ್ದ 14 ಲಕ್ಷ ರೂ. ಮೌಲ್ಯದ ಸೀರೆ ಮತ್ತು ಬಟ್ಟೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ಇಲಾಖೆಯು ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.
More Stories
shimoga | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಏ. 18 ರ ತರಕಾರಿ ಬೆಲೆಗಳ ವಿವರ
ಶಿವಮೊಗ್ಗ (shivamogga), ಏ. 18: ಶಿವಮೊಗ್ಗದ ವಿನೋಬನಗರ ಎಪಿಎಂಸಿ ಸಗಟು ತರಕಾರಿ ಮಾರುಕಟ್ಟೆ ಪ್ರಾಂಗಣದಲ್ಲಿನ, ಏ. 18 ರಂದು ವಿವಿಧ ತರಕಾರಿಗಳ ಸಗಟು (wholesale) ಮಾರಾಟದ ದರಗಳ...