ಶಿವಮೊಗ್ಗ ನಗರದ ಹೊರವಲಯ ಕೇಂದ್ರ ಕಾರಾಗೃಹಕ್ಕೆ ಸೋಮವಾರ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ನೇತೃತ್ವದ ಪೊಲೀಸ್ ತಂಡವು, ದಿಢೀರ್ ಭೇಟಿ ನೀಡಿ ತಪಾಸಣೆ ನಡೆಸಿದ ಘಟನೆ ನಡೆಯಿತು. ಎಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ, ಡಿವೈಎಸ್ಪಿ ಬಾಲರಾಜ್, ಇನ್ಸ್’ಪೆಕ್ಟರ್ ಗಳಾದ ಮಂಜುನಾಥ್, ಅಂಜನ್ ಕುಮಾರ್, ಗಜೇಂದ್ರಪ್ಪ, ಜಯಶ್ರೀ ಮಾನೆ, ಸಂಜೀವ್ ಮಹಾಜನ್ ಹಾಗೂ 5 ಜನ ಸಬ್ ಇನ್ಸ್’ಪೆಕ್ಟರ್ ಸೇರಿದಂತೆ ಒಟ್ಟಾರೆ 50 ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಗಳು ತಪಾಸಣೆಯಲ್ಲಿ ಭಾಗಿಯಾಗಿದ್ದರು.

ಶಿವಮೊಗ್ಗ ಸೆಂಟ್ರಲ್ ಜೈಲ್ ಮೇಲೆ ಪೊಲೀಸರ ರೈಡ್ : ತಪಾಸಣೆ!

ಶಿವಮೊಗ್ಗ, ಎ. 24: ಶಿವಮೊಗ್ಗ ನಗರದ ಹೊರವಲಯ ಕೇಂದ್ರ ಕಾರಾಗೃಹಕ್ಕೆ ಸೋಮವಾರ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ನೇತೃತ್ವದ ಪೊಲೀಸ್ ತಂಡವು, ದಿಢೀರ್ ಭೇಟಿ ನೀಡಿ ತಪಾಸಣೆ ನಡೆಸಿದ ಘಟನೆ ನಡೆಯಿತು.

ಎಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ, ಡಿವೈಎಸ್ಪಿ ಬಾಲರಾಜ್, ಇನ್ಸ್’ಪೆಕ್ಟರ್ ಗಳಾದ ಮಂಜುನಾಥ್, ಅಂಜನ್ ಕುಮಾರ್, ಗಜೇಂದ್ರಪ್ಪ, ಜಯಶ್ರೀ ಮಾನೆ, ಸಂಜೀವ್ ಮಹಾಜನ್ ಹಾಗೂ 5 ಜನ ಸಬ್ ಇನ್ಸ್’ಪೆಕ್ಟರ್ ಸೇರಿದಂತೆ ಒಟ್ಟಾರೆ 50 ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಗಳು ತಪಾಸಣೆಯಲ್ಲಿ ಭಾಗಿಯಾಗಿದ್ದರು.

ಪೊಲೀಸರು ಪ್ರತಿಯೊಂದು ಬ್ಯಾರಕ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಪಾಸಣೆ ವೇಳೆ ಲಭ್ಯವಾದ ವಸ್ತುಗಳ ಬಗ್ಗೆ ಇನ್ನಷ್ಟೆ ಹೆಚ್ಚಿನ ವಿವರಗಳು ಲಭ್ಯವಾಗಬೇಕಾಗಿದೆ.

ಆರೋಪ: ಸೆಂಟ್ರಲ್ ಜೈಲ್ ನಲ್ಲಿದ್ದ ವಿಚಾರಣಾಧೀನ ಕೈದಿಯೋರ್ವರು ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಮೃತಪಟ್ಟಿದ್ದರು. ಇವರ ಸಾವಿಗೆ ಕಾರಾಗೃಹದಲ್ಲಿನ ಕೆಲ ಕೈದಿಗಳು ನಡೆಸಿದ್ದ ಹಲ್ಲೆ ಕಾರಣವಾಗಿದೆ ಎಂದು ಮೃತನ ಕುಟುಂಬದವರು ಆರೋಪಿಸಿದ್ದರು.

ಕೇಂದ್ರ ಕಾರಾಗೃಹದಲ್ಲಿ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿರುವ ಆರೋಪಗಳು ಕೂಡ ಕೇಳಿಬಂದಿದ್ದವು. ಈ ಎಲ್ಲ ಕಾರಣಗಳ ಹಿನ್ನೆಲೆಯಲ್ಲಿ ಪೊಲೀಸರು ದಿಢೀರ್ ದಾಳಿ ನಡೆಸಿ ಶಾಕ್ ಮೂಡಿಸುವ ಕಾರ್ಯ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ವಿಧಾನಸಭೆ ಚುನಾವಣೆ ಪ್ರಚಾರ ದಿನದಿಂದ ದಿನಕ್ಕೆ ಕಾವೇರುತ್ತಿದೆ. ಪ್ರಮುಖ ಪಕ್ಷಗಳಲ್ಲಿ ಸ್ಟಾರ್ ಪ್ರಚಾರಕರ ಕ್ಯಾಂಪೇನ್ ಕೂಡ ಜೋರಾಗುತ್ತಿದೆ. ಈ ಕಾರಣದಿಂದ ಹೆಲಿಕ್ಯಾಪ್ಟರ್ ಗಳ ಹಾರಾಟವೂ ಹೆಚ್ಚಾಗಲಾರಂಭಿಸಿದೆ. ಈ ನಡುವೆ ಬಿಜೆಪಿ ಪಕ್ಷವು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಚುನಾವಣಾ ಪ್ರಚಾರ ಕಾರ್ಯಗಳಿಗೆ ತೆರಳಲು ಅನುಕೂಲ ಕಲ್ಪಿಸಿಕೊಡುವ ಉದ್ದೇಶದಿಂದ, ಪ್ರತ್ಯೇಕ ಹೆಲಿಕ್ಯಾಪ್ಟರ್ ವ್ಯವಸ್ಥೆ ಮಾಡಿದೆ ಎಂದು ತಿಳಿದುಬಂದಿದೆ! Previous post ಯಡಿಯೂರಪ್ಪಗೆ ಪ್ರತ್ಯೇಕ ಹೆಲಿಕ್ಯಾಪ್ಟರ್ ವ್ಯವಸ್ಥೆ ಮಾಡಿದ ಬಿಜೆಪಿ!
ಶಿವಮೊಗ್ಗ ಗ್ರಾಮಾಂತರ (ಪರಿಶಿಷ್ಟ ಜಾತಿ ಮೀಸಲು) ವಿಧಾನಸಭಾ ಕ್ಷೇತ್ರದ ಚುನಾವಣಾ ಕಣ, ಸುಡು ಬಿಸಿಲಿನಷ್ಟೆ ಕಾವೇರಿದೆ! ಈ ಕ್ಷೇತ್ರ ಅಸ್ತಿತ್ವಕ್ಕೆ ಬಂದ ನಂತರ ಮೂರು ಚುನಾವಣೆಗಳು ನಡೆದಿವೆ. ಎರಡು ಬಾರಿ ಬಿಜೆಪಿ, ಒಂದು ಬಾರಿ ಜೆಡಿಎಸ್ ಜಯ ಸಾಧಿಸಿದೆ. ಆದರೆ ಒಮ್ಮೆ ಜಯ ಸಾಧಿಸಿದವರು ಮತ್ತೊಮ್ಮೆ ಆಯ್ಕೆಯಾಗಿಲ್ಲ! ಕಳೆದ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ನಿಂದ ಕಣಕ್ಕಿಳಿದ ಅಭ್ಯರ್ಥಿಗಳೇ ಈ ಬಾರಿಯೂ ಎದುರಾಳಿಗಳಾಗಿದ್ದಾರೆ. ಬಿಜೆಪಿಯಿಂದ ಹಾಲಿ ಶಾಸಕ ಕೆ.ಬಿ.ಅಶೋಕನಾಯ್ಕ್, ಜೆಡಿಎಸ್ ನಿಂದ ಮಾಜಿ ಶಾಸಕಿ ಶಾರದಾ ಪೂರ್ಯಾನಾಯ್ಕ್ ಹಾಗೂ ಕಾಂಗ್ರೆಸ್ ನಿಂದ ಡಾ.ಶ್ರೀನಿವಾಸ್ ಕರಿಯಣ್ಣ ಸ್ಪರ್ಧಿಸಿದ್ದಾರೆ. Next post ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ : ಕಾವೇರಿದ ಚುನಾವಣಾ ಕಣ!