ಸಾಗರ, ಶಿಕಾರಿಪುರ, ಸೊರಬದಲ್ಲಿ ಕೋಟಿ ಕೋಟಿ ರೂಪಾಯಿ ವಶಕ್ಕೆ!

ಶಿವಮೊಗ್ಗ, ಆಗುಂಬೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಸೀರೆ ವಶಕ್ಕೆ

ಶಿವಮೊಗ್ಗ, ಎ. 25: ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ತೆರೆಯಲಾಗಿರುವ ಚೆಕ್ ಪೋಸ್ಟ್ ಗಳಲ್ಲಿ, ಸೂಕ್ತ ದಾಖಲೆಯಿಲ್ಲದೆ ವಾಹನಗಳಲ್ಲಿ ಕೊಂಡೊಯ್ಯಲಾಗುತ್ತಿದ್ದ ಕೋಟ್ಯಾಂತರ ರೂಪಾಯಿ ಹಾಗೂ ಲಕ್ಷಾಂತರ ರೂ. ಮೌಲ್ಯದ ಸೀರೆಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಕುರಿತಂತೆ ಜಿಲ್ಲಾ ಪೊಲೀಸ್ ಇಲಾಖೆಯು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ವಿವರ ಮುಂದಿನಂfತಿದೆ. 

ಸಾಗರ ವರದಿ: ಮಂಗಳವಾರ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ವಾಹನವೊಂದರಲ್ಲಿ ಕೊಂಡೊಯ್ಯಲಾಗುತ್ತಿದ್ದ 3.75 ಕೋಟಿ ರೂ. ವಶಕ್ಕೆ ಪಡೆಯಲಾಗಿದೆ. ಹಣದ ಮೂಲದ ಕುರಿತಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇನ್ನಷ್ಟೇ ಹೆಚ್ಚಿನ ವಿವರಗಳು ತಿಳಿದು ಬರಬೇಕಾಗಿದೆ.

ಎಸ್ಪಿ ಜಿ.ಕೆ.ಮಿಥುನ್ ಕುಮಾರ್, ಎಎಸ್ಪಿ ಅನಿಲ್ ಕುಮಾರ್‌ ಭೂಮರಡ್ಡಿ, ಸಾಗರದ ಹಿರಿಯ ಸಹಾಯಕ ಪೊಲೀಸ್ ಅಧೀಕ್ಷಕರಾದ ರೋಹನ್ ಜಗದೀಶ್ ರವರ ಮಾರ್ಗದರ್ಶನದಲ್ಲಿ ಇನ್ಸ್‌ಪೆಕ್ಟರ್ ಗಳಾದ ಪ್ರವೀಣ್ ಕುಮಾರ್, ಸೀತಾರಾಮ್, ಪಿಎಸ್ಐ ಹೊಳೆಬಸವ ಮತ್ತವರ ಸಿಬ್ಬಂದಿಗಳು ಭಾರೀ ಪ್ರಮಾಣದ ನಗದು ವಶಕ್ಕೆ ಪಡೆದಿದೆ.

ವಿವಿಧೆಡೆ ವಶಕ್ಕೆ : ಎ.24 ರಂದು ಶಿಕಾರಿಪುರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಯಿಲ್ಲದೆ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ 98,00,000 ಹಣ ವಶ ಪಡಿಸಿಕೊಳ್ಳಲಾಗಿದೆ.

ಸೊರಬ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಹನದಲ್ಲಿ ಕೊಂಡೊಯ್ಯುತ್ತಿದ್ದ 12,00,000 ನಗದು ಅಮಾನತ್ತು ಪಡಿಸಿಕೊಳ್ಳಲಾಗಿದೆ.

ತೀರ್ಥಹಳ್ಳಿ ತಾಲೂಕಿನ ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಯಿಲ್ಲದೆ ವಾಹನದಲ್ಲಿ ಕೊಂಡೊಯ್ಯುತ್ತಿದ್ದ 59,00,000 ರೂ. ಮೌಲ್ಯದ ಸೀರೆಗಳನ್ನು ವಶಕ್ಕೆ ಪಡೆಯಲಾಗಿದೆ.

ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಯಿಲ್ಲದೆ ಸಂಗ್ರಹಿಸಿಟ್ಟಿದ್ದ 5,40,000 ರೂ. ಮೌಲ್ಯದ ಸೀರೆ ವಶಕ್ಕೆ ಪಡೆಯಲಾಗಿದೆ.

ಶಿವಮೊಗ್ಗ, ಏ. 24: ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ ಏ.24 ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿತ್ತು. ಒಟ್ಟಾರೆ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ ಅಂತಿಮವಾಗಿ 74 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಉಳಿದಿದ್ದಾರೆ. ಕ್ಷೇತ್ರವಾರು ವಿವರ ಈ ಮುಂದಿನಂತಿದೆ. Previous post ಶಿವಮೊಗ್ಗ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರ : ಅಖಾಡದಲ್ಲಿ 74 ಅಭ್ಯರ್ಥಿಗಳು
ವಿಧಾನಸಭೆ ಚುನಾವಣೆ : ಚೆಕ್’ಪೋಸ್ಟ್ ಗಳಲ್ಲಿ ಕೋಟಿ ಕೋಟಿ ರೂಪಾಯಿ ವಶ..! ಲಕ್ಷಾಂತರ ರೂ. ಮೌಲ್ಯದ ಸೀರೆ ದಾಸ್ತಾನು ಪತ್ತೆ : ಮುಂದುವರಿದ ಕಟ್ಟುನಿಟ್ಟಿನ ತಪಾಸಣೆ Next post ಚೆಕ್’ಪೋಸ್ಟ್ ಗಳಲ್ಲಿ ಕೋಟಿ ಕೋಟಿ ರೂಪಾಯಿ ವಶ..!