ಶಿವಮೊಗ್ಗ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ, ವಿಧಾನಸಭಾ ಚುನಾವಣಾ ಕಣ ರಂಗೇರಲಾರಂಭಿಸಿದೆ. ಈ ನಡುವೆ ಪಕ್ಷದ ಅಭ್ಯರ್ಥಿಗಳ ಪ್ರಚಾರಕ್ಕಾಗಿ, ಜಿಲ್ಲೆಗೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರು ಆಗಮಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಅವರ ಸಹೋದರಿ ಪ್ರಿಯಾಂಕ ಗಾಂಧಿ ಅವರು ಎ. 27 ರಂದು ಶಿವಮೊಗ್ಗ ನಗರಕ್ಕೆ ಆಗಮಿಸುತ್ತಿದ್ದಾರೆ. ಹೆಲಿಕ್ಯಾಪ್ಟರ್ ಮೂಲಕ ಶಿವಮೊಗ್ಗ ನಗರಕ್ಕೆ ಆಗಮಿಸಲಿರುವ ಈ ಇಬ್ಬರು ನಾಯಕರು, ಪಕ್ಷದ ಅಭ್ಯರ್ಥಿಗಳು ಹಾಗೂ ಮುಖಂಡರ ಜೊತೆ ಸಮಾಲೋಚನೆ ನಡೆಸಲಿದ್ದಾರೆ. ನಂತರ ಹೆಲಿಕ್ಯಾಪ್ಟರ್ ಮೂಲಕ ಉಡುಪಿ ಜಿಲ್ಲೆಗೆ ತೆರಳುತ್ತಿದ್ದಾರೆ. ಮತ್ತೊಂದೆಡೆ, ಮೇ ತಿಂಗಳಲ್ಲಿ ಬಿಜೆಪಿ ನಾಯಕರ ಪ್ರಧಾನಿ ನರೇಂದ್ರ, ಗೃಹ ಸಚಿವ ಅಮಿತ್ ಶಾ, ಆ ಪಕ್ಷದ ರಾಷ್ಟ್ರಾಧ್ಯಕ್ಷ ನಡ್ಡಾ ಅವರು ಪ್ರತ್ಯೇಕವಾಗಿ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಪ್ರಚಾರ ಕಾರ್ಯ ನಡೆಸಲಿದ್ದಾರೆ ಎಂದು ತಿಳಿದುಬಂದಿದ್ದು, ಅಧಿಕೃತ ದಿನಾಂಕಗಳು ಇನ್ನಷ್ಟೆ ಖಚಿತವಾಗಬೇಕಾಗಿದೆ.

ಚುನಾವಣಾ ಪ್ರಚಾರ : ಶಿವಮೊಗ್ಗ ಜಿಲ್ಲೆಗೆ ಆಗಮಿಸುತ್ತಿದ್ದಾರೆ ಬಿಜೆಪಿ, ಕಾಂಗ್ರೆಸ್ ಪಕ್ಷಗಳ ರಾಷ್ಟ್ರೀಯ ನಾಯಕರು!

ಎ. 27 ರಂದು ಶಿವಮೊಗ್ಗಕ್ಕೆ ರಾಹುಲ್, ಪ್ರಿಯಾಂಕ ಗಾಂಧಿ : ಶಿಕಾರಿಪುರಕ್ಕೆ ಜೆ.ಪಿ.ನಡ್ಡಾ

ಶಿವಮೊಗ್ಗ, ಎ. 26: ಶಿವಮೊಗ್ಗ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ, ವಿಧಾನಸಭಾ ಚುನಾವಣಾ ಕಣ ರಂಗೇರಲಾರಂಭಿಸಿದೆ. ಈ ನಡುವೆ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರಕ್ಕಾಗಿ, ಜಿಲ್ಲೆಗೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರು ಆಗಮಿಸುತ್ತಿದ್ದಾರೆ.

ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಅವರ ಸಹೋದರಿ ಪ್ರಿಯಾಂಕ ಗಾಂಧಿ ಅವರು ಎ. 27 ರಂದು ಶಿವಮೊಗ್ಗ ನಗರಕ್ಕೆ ಆಗಮಿಸುತ್ತಿದ್ದಾರೆ.

ಹೆಲಿಕ್ಯಾಪ್ಟರ್ ಮೂಲಕ ಶಿವಮೊಗ್ಗ ನಗರಕ್ಕೆ ಆಗಮಿಸಲಿರುವ ಈ ಇಬ್ಬರು ನಾಯಕರು, ಪಕ್ಷದ ಅಭ್ಯರ್ಥಿಗಳು ಹಾಗೂ ಮುಖಂಡರ ಜೊತೆ ಸಮಾಲೋಚನೆ ನಡೆಸಲಿದ್ದಾರೆ. ನಂತರ ಹೆಲಿಕ್ಯಾಪ್ಟರ್ ಮೂಲಕ ಉಡುಪಿ ಜಿಲ್ಲೆಗೆ ತೆರಳುತ್ತಿದ್ದಾರೆ.

ಮತ್ತೊಂದೆಡೆ,  ಎ. 27 ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾರವರು ಶಿಕಾರಿಪುರ ತಾಲೂಕಿನ ವಿವಿಧೆಡೆ ಪ್ರಚಾರ ಕಾರ್ಯದಲ್ಲಿ ಭಾಗಿಯಾಗುತ್ತಿದ್ದಾರೆ.

ಉಳಿದಂತೆ ಮೇ ತಿಂಗಳಲ್ಲಿ ಬಿಜೆಪಿ ನಾಯಕರಾದ ಪ್ರಧಾನಿ ನರೇಂದ್ರ, ಗೃಹ ಸಚಿವ ಅಮಿತ್ ಶಾ ಅವರು ಪ್ರತ್ಯೇಕವಾಗಿ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಪ್ರಚಾರ ಕಾರ್ಯ ನಡೆಸಲಿದ್ದಾರೆ ಎಂದು ತಿಳಿದುಬಂದಿದ್ದು, ಅಧಿಕೃತ ದಿನಾಂಕಗಳು ಇನ್ನಷ್ಟೆ ಖಚಿತವಾಗಬೇಕಾಗಿದೆ.

ಕಳೆದ ಸರಿಸುಮಾರು ನಾಲ್ಕು ದಶಕಗಳಿಂದ ಬಿ.ಎಸ್.ಯಡಿಯೂರಪ್ಪ ಸ್ಪರ್ಧೆಯಿಂದ ಗಮನ ಸೆಳೆಯುತ್ತಿದ್ದ ಶಿಕಾರಿಪುರ ವಿಧಾನಸಭಾ ಕ್ಷೇತ್ರ, ಪ್ರಸ್ತುತ ಅವರ ಪುತ್ರ ಬಿ.ವೈ.ವಿಜಯೇಂದ್ರ ಅಖಾಡದಿಂದ ಕುತೂಹಲ ಕೆರಳಿಸಿದೆ. ಹಾಗೆಯೇ ಬದಲಾದ ರಾಜಕೀಯ ವಾತಾವರಣ, ಕೆಲ ಘಟನೆಗಳ ಹಿನ್ನೆಲೆಯಲ್ಲಿ ಪ್ರಸ್ತುತ ಚುನಾವಣಾ ಕಣ ಕಾವೇರುವಂತೆ ಮಾಡಿದೆ! ಇದೇ ಮೊದಲ ಬಾರಿಗೆ ಅಖಾಡಕ್ಕಿಳಿದಿರುವ ಬಿ.ವೈ.ವಿಜಯೇಂದ್ರಗೆ, ಪ್ರಥಮ ಚುನಾವಣೆಯೇ ಅಕ್ಷರಶಃ ಅಗ್ನಿ ಪರೀಕ್ಷೆಯಾಗಿದೆ. ಪ್ರತಿಷ್ಠೆಯ ಪ್ರಶ್ನೆಯಾಗಿದೆ. ರಾಜಕೀಯ ಭವಿಷ್ಯದ ದೃಷ್ಟಿಯಿಂದ ಗೆಲ್ಲಲೇಬೇಕಾದ ಅನಿವಾರ್ಯ ಒತ್ತಡ ಅವರ ಮೇಲಿದೆ. Previous post ಶಿಕಾರಿಪುರ ವಿಧಾನಸಭಾ ಕ್ಷೇತ್ರ : ಯಾರಾಗಲಿದ್ದಾರೆ ಶಿಕಾರಿ..?!
ಶಿವಮೊಗ್ಗ/ಭದ್ರಾವತಿ, ಎ. 27: ಸಾರ್ವಜನಿಕ ಸ್ಥಳಗಳಲ್ಲಿ ತೊಂದರೆ ಉಂಟು ಮಾಡುತ್ತಿದ್ದ ಹಾಗೂ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಆರೋಪದ ಮೇರೆಗೆ, ಶಿವಮೊಗ್ಗದ ತುಂಗಾ ನಗರ ಹಾಗೂ ಭದ್ರಾವತಿ ಹೊಸಮನೆ ಠಾಣೆ ಪೊಲೀಸರು ತಮ್ಮ ಠಾಣಾ ವ್ಯಾಪ್ತಿಗಳಲ್ಲಿ ನಡೆಸಿದ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ, 24 ಜನರನ್ನು ವಶಕ್ಕೆ ಪಡೆದ ಘಟನೆ ಎ.26 ರ ರಾತ್ರಿ ನಡೆದಿದೆ.   Next post ಶಿವಮೊಗ್ಗ – ಭದ್ರಾವತಿಯಲ್ಲಿ 24 ಜನರು ಪೊಲೀಸ್ ವಶಕ್ಕೆ