
ಶಿವಮೊಗ್ಗ – ಭದ್ರಾವತಿಯಲ್ಲಿ 24 ಜನರು ಪೊಲೀಸ್ ವಶಕ್ಕೆ
ಶಿವಮೊಗ್ಗ/ಭದ್ರಾವತಿ, ಎ. 27: ಸಾರ್ವಜನಿಕ ಸ್ಥಳಗಳಲ್ಲಿ ತೊಂದರೆ ಉಂಟು ಮಾಡುತ್ತಿದ್ದ ಹಾಗೂ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಆರೋಪದ ಮೇರೆಗೆ, ಶಿವಮೊಗ್ಗದ ತುಂಗಾ ನಗರ ಹಾಗೂ ಭದ್ರಾವತಿ ಹೊಸಮನೆ ಠಾಣೆ ಪೊಲೀಸರು ತಮ್ಮ ಠಾಣಾ ವ್ಯಾಪ್ತಿಗಳಲ್ಲಿ ನಡೆಸಿದ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ, 24 ಜನರನ್ನು ವಶಕ್ಕೆ ಪಡೆದ ಘಟನೆ ಎ.26 ರ ರಾತ್ರಿ ನಡೆದಿದೆ.
ಶಿವಮೊಗ್ಗ ವರದಿ : ತುಂಗಾ ನಗರ ಪೊಲೀಸ್ ಠಾಣೆ ಸಬ್ ಇನ್ಸ್’ಪೆಕ್ಟರ್ ಗಳಾದ ದೂದ್ಯನಾಯ್ಕ್, ಬಳಿಗಾರ್ ನೇತೃತ್ವದ ತಂಡವು ಠಾಣಾ ವ್ಯಾಪ್ತಿಯ ಹೊರವಲಯ ಮತ್ತು ನಿರ್ಜನ ಪ್ರದೇಶಗಳಲ್ಲಿ ದಿಢೀರ್ ಕಾರ್ಯಾಚರಣೆ ನಡೆಸಿದೆ.

ಈ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ತೊಂದರೆ ಉಂಟು ಮಾಡುತ್ತಿದ್ದ ಹಾಗೂ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ 12 ಜನರನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದಾರೆ. ಪೂರ್ವಾಪರ ಪರಿಶೀಲಿಸಿದ್ದಾರೆ. 7 ಜನರ ವಿರುದ್ದ ಲಘು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಭದ್ರಾವತಿ ವರದಿ: ಭದ್ರಾವತಿ ಹೊಸಮನೆ ಠಾಣೆ ಸಬ್ ಇನ್ಸ್’ಪೆಕ್ಟರ್ ನಿಂಗರಾಜ್ ಮತ್ತವರ ಸಿಬ್ಬಂದಿಗಳು ಠಾಣಾ ವ್ಯಾಪ್ತಿಯ ವಿವಿಧೆಡೆ ಕಾರ್ಯಾಚರಣೆ ನಡೆಸಿ, ಸಾರ್ವಜನಿಕ ಸ್ಥಳಗಳಲ್ಲಿ ತೊಂದರೆ ಉಂಟು ಮಾಡುತ್ತಿದ್ದ

ಹಾಗೂ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ 12 ಜನರನ್ನು ವಶಕ್ಕೆ ಪಡೆದಿದೆ. ಸದರಿ ವ್ಯಕ್ತಿಗಳ ಪೂರ್ವಾಪರ ಪರಿಶೀಲನೆ ನಡೆಸಿ, 12 ಲಘು ಪ್ರಕರಣಗಳನ್ನು ದಾಖಲಿಸಿಕೊಂಡಿದೆ.