
ಶಿವಮೊಗ್ಗದಲ್ಲಿ ರಾಹುಲ್ ಗಾಂಧಿ : ಕಾಂಗ್ರೆಸ್ ನಾಯಕರಿಗೆ ನೀಡಿದ ಸೂಚನೆಯೇನು?
ಶಿವಮೊಗ್ಗ, ಏ. 27: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ಮಧ್ಯಾಹ್ನ ವಿಶೇಷ ವಿಮಾನದಲ್ಲಿ ದೆಹಲಿಯಿಂದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಹಿರಿಯ ಮುಖಂಡ ಕೆ.ಸಿ.ವೇಣುಗೋಪಾಲ್ ಸೇರಿದಂತೆ ಸ್ಥಳೀಯ ಕಾಂಗ್ರೆಸ್ ಪಕ್ಷದ ಮುಖಂಡರು ರಾಹುಲ್ ಗಾಂಧಿ ಅವರಿಗೆ ಸ್ವಾಗತ ಕೋರಿದರು.
ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಹಾಗೂ ಮುಖಂಡರ ಜೊತೆ ರಾಹುಲ್ ಗಾಂಧಿ ಅವರು ಸಮಾಲೋಚನೆ ನಡೆಸಿದರು. ನಂತರ ಹೆಲಿಕ್ಯಾಪ್ಟರ್ ನಲ್ಲಿ ಉಡುಪಿ ಜಿಲ್ಲೆಗೆ ಪ್ರಯಾಣ ಬೆಳೆಸಿದರು.
ಚರ್ಚೆ: ರಾಹುಲ್ ಗಾಂಧಿ ಅವರು ವಿಧಾನಸಭಾ ಚುನಾವಣಾ ಕಣಕ್ಕಿಳಿದ ಅಭ್ಯರ್ಥಿಗಳ ಜೊತೆ ಸಮಾಲೋಚಿಸಿದ್ದಾರೆ. ಜೊತೆಗೆ ಪಕ್ಷದ ವಿವಿಧ ವಿಭಾಗಗಳ ಮುಖಂಡರ ಜೊತೆ ಸಂವಾದ ನಡೆಸಿದ್ದಾರೆ.
ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷಗಳ ಅಭ್ಯರ್ಥಿಗಳು ಜಯ ಸಾಧಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಣೆ ಮಾಡುವಂತೆ ರಾಹುಲ್ ಗಾಂಧಿ ಅವರು ಸಲಹೆ ನೀಡಿದ್ದಾರೆ.
More Stories
shimoga | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಏ. 18 ರ ತರಕಾರಿ ಬೆಲೆಗಳ ವಿವರ
ಶಿವಮೊಗ್ಗ (shivamogga), ಏ. 18: ಶಿವಮೊಗ್ಗದ ವಿನೋಬನಗರ ಎಪಿಎಂಸಿ ಸಗಟು ತರಕಾರಿ ಮಾರುಕಟ್ಟೆ ಪ್ರಾಂಗಣದಲ್ಲಿನ, ಏ. 18 ರಂದು ವಿವಿಧ ತರಕಾರಿಗಳ ಸಗಟು (wholesale) ಮಾರಾಟದ ದರಗಳ...