
ಸಾಗರ : ಕರ್ಕಶ ಶಬ್ದ ಹೊರಹೊಮ್ಮಿಸುವ ಸೈಲೆನ್ಸರ್ ಗಳ ಮೇಲೆ ಬುಲ್ಡೋಜರ್ ಹರಿಸಿ ನಾಶ!
ಸಾಗರ, ಎ. 28: ಕರ್ಕಶ ಶಬ್ದ ಹೊರಹೊಮ್ಮಿಸುವ ಸೈಲೆನ್ಸರ್ ಅಳವಡಿಸಿಕೊಂಡು, ಶಬ್ದ ಮಾಲಿನ್ಯ ಹಾಗೂ ಸಾರ್ವಜನಿಕರಿಗೆ ತೀವ್ರ ಕಿರಿಕಿರಿ ಉಂಟು ಮಾಡುತ್ತಿದ್ದ, ಬೈಕ್ ಸವಾರರಿಗೆ ಶಾಕ್ ನೀಡುವ ಕಾರ್ಯಕ್ಕೆ ಸಾಗರ ಪೊಲೀಸರು ಚಾಲನೆ ನೀಡಿದ್ದಾರೆ..!

ಡಿಫೆಕ್ಟಿವ್ (ದೋಷಪೂರಿತ), ಮಾಡಿಫೈಡ್ (ಮಾರ್ಪಾಡು) ಸೈಲೆನ್ಸರ್ ಅಳವಡಿಸಿಕೊಂಡು ಸಾಗರ ಪಟ್ಟಣದಲ್ಲಿ ಓಡಾಡುತ್ತಿದ್ದ ಬೈಕ್ ಗಳನ್ನು ವಶಕ್ಕೆ ಪಡೆದು ವಾಹನ ಚಾಲಕರ ವಿರುದ್ದ ಕೇಸ್ ದಾಖಲಿಸಲಾರಂಭಿಸಿದ್ದಾರೆ.
ಜೊತೆಗೆ ಬೈಕ್ ಗಳಲ್ಲಿ ಅಳವಡಿಸಲಾಗಿದ್ದ ದೋಷಪೂರಿತ – ಮಾರ್ಪಾಡು ಸೈಲೆನ್ಸರ್ ಗಳನ್ನು ಸಾರ್ವಜನಿಕರ ಸಮ್ಮುಖದಲ್ಲಿಯೇ ಬುಲ್ಡೋಜರ್ ಹರಿಸಿ ನಾಶಗೊಳಿಸುತ್ತಿದ್ದಾರೆ.

ಏ.27 ರಂದು ಒಟ್ಟಾರೆ 27 ಸೈಲೆನ್ಸರ್ ಗಳ ಮೇಲೆ ಬುಲ್ಡೋಜರ್ ಹರಿಸಿ ನಾಶಗೊಳಿಸಲಾಗಿದೆ. ಈ ಸಂದರ್ಭದಲ್ಲಿ ಸಾಗರ ಪೊಲೀಸ್ ಉಪ ವಿಭಾಗದ ಹಿರಿಯ ಸಹಾಯಕ ಪೊಲೀಸ್ ಅಧೀಕ್ಷಕರಾದ ರೋಹನ್ ಜಗದೀಶ್, ಇನ್ಸ್’ಪೆಕ್ಟರ್ ಪ್ರವೀಣ್ ಕುಮಾರ್, ಸಬ್ ಇನ್ಸ್’ಪೆಕ್ಟರ್ ಹೊಳೆಬಸಪ್ಪ ಹೋಳಿ, ಶ್ರೀಪತಿ ಗಿನ್ನಿ, ಆರ್.ಕೆ.ನಿಂಗಜ್ಜೇರ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

ಪೊಲೀಸ್ ಇಲಾಖೆ ನೀಡಿದ ಎಚ್ಚರಿಕೆಯೇನು?
‘ಯಾವುದೇ ಕಾರಣಕ್ಕೂ ದ್ವಿ ಚಕ್ರ ವಾಹನಗಳಲ್ಲಿ ದೋಷಪೂರಿತ, ಮಾರ್ಪಾಡುಗೊಳಿಸಿದ ಸೈಲೆನ್ಸರ್ ಗಳನ್ನು ಅಳವಡಿಸಿಕೊಳ್ಳಬಾರದು. ನಿರಂತರವಾಗಿ ದೋಷಪೂರಿತ ಸೈಲೆನ್ಸರ್ ಗಳನ್ನು ಪತ್ತೆ ಹಚ್ಚುವ ಕಾರ್ಯಾಚರಣೆ ನಡೆಸಲಾಗುವುದು. ನಿಯಮ ಉಲ್ಲಂಘಿಸುವವರ ವಿರುದ್ದ ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು’ ಎಂದು ಸಾಗರ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
More Stories
ಶಿಕ್ಷಣ ಸಚಿವರ ತವರೂರಲ್ಲಿ ಶಾಲೆ ಆರಂಭವಾಗಿ ತಿಂಗಳುಗಳೇ ಉರುಳಿದರೂ ಆರಂಭವಾಗದ ಬಿಸಿಯೂಟ!
ಶಿವಮೊಗ್ಗ, ಸೆ. 13: ಸರ್ಕಾರಿ ಶಾಲೆ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಪೌಷ್ಠಿಕಾಂಶಯುಕ್ತ ಆಹಾರ ನೀಡುವ ಯೋಜನೆ ಜಾರಿಗೊಳಿಸಲಾಗಿದೆ. ಆದರೆ ಶಿವಮೊಗ್ಗ ನಗರದ ಸರ್ಕಾರಿ ಶಾಲೆಯೊಂದರ ಮಕ್ಕಳಿಗೆ ಪೌಷ್ಠಿಕಾಂಶಯುಕ್ತ ಆಹಾರವಿರಲಿ, ಶಾಲೆ ಆರಂಭವಾಗಿ ನಾಲ್ಕು ತಿಂಗಳಾಗುತ್ತಾ ಬಂದರೂ ಬಿಸಿಯೂಟ ವ್ಯವಸ್ಥೆಯೇ ಆರಂಭವಾಗಿಲ್ಲ..!
ಹೌದು. ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿ 1 ನೇ ವಾರ್ಡ್ ಸೋಮಿನಕೊಪ್ಪದಲ್ಲಿರುವ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಮಾದರಿ ಸರ್ಕಾರಿ ಶಾಲೆಯಲ್ಲಿ ಇಲ್ಲಿಯವರೆಗೂ ಬಿಸಿಯೂಟ ವ್ಯವಸ್ಥೆ ಆರಂಭವಾಗಿಲ್ಲ. ಇದರಿಂದ ಬಡ – ಮಧ್ಯಮ ವರ್ಗದ ಮಕ್ಕಳು ತಮ್ಮ ನ್ಯಾಯಬದ್ಧ ಹಕ್ಕಿನಿಂದ ವಂಚಿತವಾಗುವಂತಾಗಿದೆ.
‘ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟದ ವಿರುದ್ದ ಕಠಿಣ ಕ್ರಮ’ : ಶಿವಮೊಗ್ಗ ಎಸ್ಪಿ ಜಿ.ಕೆ.ಮಿಥುನ್ ಕುಮಾರ್
‘ಹಳ್ಳಿಗಳಲ್ಲಿ ಕಾನೂನುಬಾಹಿರವಾಗಿ ಮದ್ಯ ಮಾರಾಟ ಮಾಡುವವರ ವಿರುದ್ದ ಕಠಿಣ ಕ್ರಮ ಜರುಗಿಸಲಾಗುವುದು’ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಸಾಗರ ತಾಲೂಕಿನ ಆನಂದಪುರದ ಸೀತಾರಾಮ ಕಲ್ಯಾಣ ಮಂಟಪದಲ್ಲಿ ಜು. 18 ರಂದು ಪೊಲೀಸ್ ಇಲಾಖೆಯಿಂದ ಆಯೋಜಿಸಿದ್ದ ಜನ ಸಂಪರ್ಕ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಸಾಗರ : ಬೆಂಬಲಿಗರ ಬಲದ ಮೇಲೆ ವಿಜಯದ ನಗೆ ಬೀರಿದ ಬೇಳೂರು ಗೋಪಾಲಕೃಷ್ಣ!
‘ಹಳೇ ದೋಸ್ತಿ’ಗಳ ನಡುವೆ ಭಾರೀ ಹಣಾಹಣಿಗೆ ವೇದಿಕೆಯಾಗಿದ್ದ ಸಾಗರ ವಿಧಾನಸಭಾ ಕ್ಷೇತ್ರದಲ್ಲಿ, ಕೊನೆಗೂ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಜಯದ ನಗೆ ಬೀರಿದ್ದಾರೆ. ಕ್ಷೇತ್ರದ ಹಾಲಿ ಶಾಸಕ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ಪರಾಭವಗೊಂಡಿದ್ದಾರೆ!
ವಿಜೇತ ಬೇಳೂರು ಗೋಪಾಲಕೃಷ್ಣ ಅವರು 88,179 ಮತ ಪಡೆದಿದ್ದಾರೆ. ಸಮೀಪದ ಪ್ರತಿಸ್ಪರ್ಧಿ ಬೇಳೂರು ಗೋಪಾಲಕೃಷ್ಣ ಅವರು 72,263 ಮತ ಗಳಿಸಿದ್ದಾರೆ. ಬೇಳೂರು ಅವರು 15,916 ಮತಗಳ ಅಂತರದಲ್ಲಿ ಜಯ ಸಾಧಿಸಿದ್ದಾರೆ. ಉಳಿದಂತೆ ಜೆಡಿಎಸ್ ಅಭ್ಯರ್ಥಿ ಸೈಯದ್ ಜಾಕೀರ್ ಕೇವಲ 345 ಮತ ಪಡೆದರೆ, ಎಎಪಿ ಅಭ್ಯರ್ಥಿ ಕೆ.ದಿವಾಕರ್’ಗೆ 1029 ಮತ ಸಂದಾಯವಾಗಿದೆ.