
ಚುನಾವಣಾ ಪ್ರಚಾರದಲ್ಲಿ ಮಕ್ಕಳ ಬಳಕೆ : ಪ್ರಕರಣ ದಾಖಲು!
ಶಿವಮೊಗ್ಗ, ಮೇ 5: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಚುನಾವಣಾ ಪ್ರಚಾರದಲ್ಲಿ ಮಕ್ಕಳ ಬಳಕೆ ಮಾಡಿಕೊಂಡಿರುವ ಕುರಿತಂತೆ, ಇಲ್ಲಿಯವರೆಗೂ ಶಿವಮೊಗ್ಗ ನಗರ ಹಾಗೂ ಗ್ರಾಮಾಂತರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಒಟ್ಟಾರೆ ಮೂರು ಎಫ್.ಐ.ಆರ್. ದಾಖಲಾಗಿದೆ.
ಕೇಂದ್ರ ಸಚಿವ ಅಮಿತ್ ಶಾ ಅವರು ಶಿವಮೊಗ್ಗ ನಗರದಲ್ಲಿ ರೋಡ್ ಶೋ ನಡೆಸಿದ ಸಂದರ್ಭದಲ್ಲಿ, ಶಿವಪ್ಪ ನಾಯಕ ವೃತ್ತದ ಬಳಿ ಮಕ್ಕಳನ್ನು ಪ್ರಚಾರಕ್ಕಾಗಿ ಬಳಸಿಕೊಂಡಿರುವ ಕುರಿತು ದೂರಿನ ಹಿನ್ನೆಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ ಕಲಂ 14 ಅನ್ವಯ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯು, ಚುನಾವಣಾ ಪ್ರಚಾರ ಕಾರ್ಯದಲ್ಲಿ ಮಕ್ಕಳನ್ನು ಬಳಸಿಕೊಂಡಿರುವ ಬಗ್ಗೆ ಫ್ಲೈಯಿಂಗ್ ಸ್ಕ್ವಾಡ್ ತಂಡದವರು ನೀಡಿದ ದೂರಿನ ಹಿನ್ನೆಲೆಯಲ್ಲಿ, ಬಾಲಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ 1986 ಅಡಿ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದೇ ರೀತಿ ಇನ್ನೊಂದು ಪ್ರಕರಣದಲ್ಲಿ ಶಿವಮೊಗ್ಗ ನಗರ ಕ್ಷೇತ್ರದ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿ ಮಕ್ಕಳೊಂದಿಗೆ ಚುನಾವಣಾ ಪ್ರಚಾರ ಮಾಡುತ್ತಿರುವ ಬಗ್ಗೆ ಫ್ಲೈಯಿಂಗ್ ಸ್ಕ್ವಾಡ್ ತಂಡದವರು ನೀಡಿದ ದೂರಿನ ಹಿನ್ನೆಲೆಯಲ್ಲಿ, ಬಾಲಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ ಕಲಂ 14 ಅನ್ವಯ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಸಲಿಸಲಾಗಿತ್ತು.
More Stories
shimoga | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಏ. 18 ರ ತರಕಾರಿ ಬೆಲೆಗಳ ವಿವರ
ಶಿವಮೊಗ್ಗ (shivamogga), ಏ. 18: ಶಿವಮೊಗ್ಗದ ವಿನೋಬನಗರ ಎಪಿಎಂಸಿ ಸಗಟು ತರಕಾರಿ ಮಾರುಕಟ್ಟೆ ಪ್ರಾಂಗಣದಲ್ಲಿನ, ಏ. 18 ರಂದು ವಿವಿಧ ತರಕಾರಿಗಳ ಸಗಟು (wholesale) ಮಾರಾಟದ ದರಗಳ...