ಶಿವಮೊಗ್ಗ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಚುನಾವಣೆ ಮತ ಎಣಿಕೆ ನಡೆಯಲಿರುವ ಶಿವಮೊಗ್ಗ ನಗರದ ಸಹ್ಯಾದ್ರಿ ಕಾಲೇಜ್ ಸುತ್ತಮುತ್ತ ಮೇ 13 ರ ಬೆಳಗ್ಗೆ 6 ರಿಂದ ಮೇ14 ರ ಬೆಳಿಗ್ಗೆ 6 ಗಂಟೆಯವರೆಗೆ ಸಿ.ಆರ್.ಪಿ.ಸಿ. ಕಲಂ 144 ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ. ನಿಬಂಧನೆಗಳ ವಿವರ: ನಿಷೇಧಾಜ್ಞೆ ಅವಧಿಯಲ್ಲಿ 5 ಜನ ಮೇಲ್ಪಟ್ಟು ಗುಂಪುಗೂಡುವಂತಿಲ್ಲ. ಮೆರವಣಿಗೆ, ಸಭೆ, ಸಮಾರಂಭ, ವಿಜಯೋತ್ಸವ ಹಾಗೂ ಇತರೆ ಸಾರ್ವಜನಿಕ ಸಮಾವೇಶ ನಡೆಸುವಂತಿಲ್ಲ.

ಮತ ಎಣಿಕೆ ಕೇಂದ್ರದ ಸುತ್ತಮುತ್ತ ಸಿ.ಆರ್.ಪಿ.ಸಿ. ಕಲಂ 144 ರ ಅನ್ವಯ ನಿಷೇಧಾಜ್ಞೆ

*ಮೇ 13 ರ ಬೆಳಿಗ್ಗೆ 6 ರಿಂದ ಮೇ 14 ರ ಬೆಳಿಗ್ಗೆ 6 ಗಂಟೆವರೆಗೆ ಪ್ರತಿಬಂಧಕಾಜ್ಞೆ

ಶಿವಮೊಗ್ಗ, ಮೇ 6: ಶಿವಮೊಗ್ಗ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಚುನಾವಣೆ ಮತ ಎಣಿಕೆ ನಡೆಯಲಿರುವ, ಶಿವಮೊಗ್ಗ ನಗರದ ಸಹ್ಯಾದ್ರಿ ಕಾಲೇಜ್ ಸುತ್ತಮುತ್ತ ಮೇ 13  ರ ಬೆಳಗ್ಗೆ 6 ರಿಂದ ಮೇ 14 ರ ಬೆಳಿಗ್ಗೆ 6 ಗಂಟೆಯವರೆಗೆ, ಸಿ.ಆರ್.ಪಿ.ಸಿ. ಕಲಂ 144 ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.

ನಿಬಂಧನೆಗಳ ವಿವರ: ನಿಷೇಧಾಜ್ಞೆ ಅವಧಿಯಲ್ಲಿ 5 ಜನ ಮೇಲ್ಪಟ್ಟು ಗುಂಪುಗೂಡುವಂತಿಲ್ಲ. ಮೆರವಣಿಗೆ, ಸಭೆ, ಸಮಾರಂಭ, ವಿಜಯೋತ್ಸವ ಹಾಗೂ ಇತರೆ ಸಾರ್ವಜನಿಕ ಸಮಾವೇಶ ನಡೆಸುವಂತಿಲ್ಲ.

ಶಸ್ತ್ರಾಸ್ತ್ರ ಅಥವಾ ದೇಹಕ್ಕೆ ಅಪಾಯ ಉಂಟು ಮಾಡಬಹುದಾದ ಮಾರಕಾಸ್ತ್ರಗಳನ್ನು ಒಯ್ಯುವಂತಿಲ್ಲ. ಯಾವುದೇ ವಿನಾಶಕಾರಿ ವಸ್ತು ಇಲ್ಲವೇ ಸ್ಪೋಟಕ ವಸ್ತು ಕೊಂಡೊಯ್ಯುವಂತಿಲ್ಲ.

ಕಲ್ಲು ಅಥವಾ ಎಸೆಯುವ ವಸ್ತುಗಳು ಅಥವಾ ಚಲಿಸುವ ಅಸ್ತ್ರಗಳನ್ನು ಸಂಗ್ರಹಿಸುವಂತಿಲ್ಲ. ಯಾವುದೇ ವ್ಯಕ್ತಿ ನಿಷೇಧಿತ ಮಾರಕಾಸ್ತ್ರ, ಸ್ಪೋಟಕ ವಸ್ತುಗಳು, ಬಂದೂಕುಗಳನ್ನು ಹೊಂದಿದ್ದಲ್ಲಿ ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಅಧಿಕಾರವಿರುತ್ತದೆ. ವಶಕ್ಕೆ ಪಡೆದ ಮಾರಕಾಸ್ತ್ರಗಳನ್ನು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳಲಾಗುವುದು.

ಅಣುಕು ಶವಗಳ ಪ್ರದರ್ಶನ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳ ಪ್ರದರ್ಶನ ಮಾಡುವುದು, ಪಟಾಕಿ ಸಿಡಿಸಿ ಸಂಭ್ರಮಿಸುವುದನ್ನು ನಿಷೇಧಿಸಲಾಗಿದೆ. ಬಹಿರಂಗವಾಗಿ ಘೋಷಣೆ ಕೂಗುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನ, ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಅತಿಕ್ರಮಿಸಬಹುದಾದ ಕೃತ್ಯಗಳನ್ನು ನಿಷೇಧಿಸಲಾಗಿದೆ.

ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದಾತ್ಮಕವಾಗಿ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ

ಹಾಗೂ ಸಾರ್ವಜನಿಕ ಗಾಂಭಿರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡುಗುವುದನ್ನು ನಿಷೇಧಿಸಲಾಗಿದೆ. ಆದೇಶ ಉಲ್ಲಂಘಿಸುವವರ ವಿರುದ್ದ ಐಪಿಸಿ ಕಲಂ 188 ರ ಅನ್ವಯ ಕ್ರಮ ಜರುಗಿಸುವ ಎಚ್ಚರಿಕೆ ನೀಡಲಾಗಿದೆ.

ಶವಸಂಸ್ಕಾರ, ಮದುವೆ, ಧಾರ್ಮಿಕ ಆಚರಣೆ ನಡೆಸಲು, ದೇವಸ್ಥಾನ, ಚರ್ಚ್ ಹಾಗೂ ಮಸೀದಿಗಳಿಗೆ ಪ್ರಾರ್ಥನೆಗೆ ತೆರುಳುವವರಿಗೆ ಮತ್ತು ಇನ್ನಿತರ ಸಮಾರಂಭಗಳನ್ನು ನಡೆಸಲು ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಿಂದ ಅನುಮತಿ ಪಡೆದವರಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವತ್ರಿಕ ವಿಧಾನಸಭೆ ಚುನಾವಣೆ ಬಹಿರಂಗ ಪ್ರಚಾರಕ್ಕೆ ಸೋಮವಾರ ಅಂತಿಮ ತೆರೆ ಬೀಳಲಿದ್ದು, ದಿನಗಣನೆ ಆರಂಭವಾಗಿದೆ. ಮತ್ತೊಂದೆಡೆ, ಪ್ರಚಾರ ಕಣ ಸಂಪೂರ್ಣ ರಂಗೇರಿದೆ. ಪ್ರಚಾರದ ಅಬ್ಬರ ಮುಗಿಲುಮುಟ್ಟಿಲಾರಂಭಿಸಿದೆ. ಮತ ಬೇಟೆ ಜೋರಾಗಿದೆ. ಮತದಾರರ ಮನವೊಲಿಕೆಗೆ ಭಾರೀ ಕಸರತ್ತು ನಡೆಸಲಾಗುತ್ತಿದೆ! ವಿವಿಧ ರಾಜಕೀಯ ಪಕ್ಷಗಳ ನಾಯಕರು ರೋಡ್ ಶೋ, ಮೆರವಣಿಗೆ, ಪಾದಯಾತ್ರೆ, ಸಮಾವೇಶ ಹಾಗೂ ಸಾರ್ವಜನಿಕರ ಸಭೆಗಳ ಮೂಲಕ ಬಿರುಸಿನ ಮತಯಾಚನೆಯಲ್ಲಿ ತೊಡಗಿದ್ದಾರೆ. ಹಾಗೆಯೇ ಆರೋಪ – ಪ್ರತ್ಯಾರೋಪಗಳ ಸುರಿಮಳೆಯಾಗುತ್ತಿದೆ. Previous post ಮುಗಿಲುಮುಟ್ಟಿದ ಪ್ರಚಾರದ ಅಬ್ಬರ : ಮತ ಬೇಟೆ ಜೋರು..!
‘ವಿಧಾನಸಭೆ ಚುನಾವಣೆ ಮತದಾನದಂದು ಎಲ್ಲ ತಾಲ್ಲೂಕುಗಳ ಇಓ ಮತ್ತು ಪಿಡಿಓ ಗಳು, ತಮ್ಮ ವ್ಯಾಪ್ತಿಯ ಮತಗಟ್ಟೆಗಳಲ್ಲಿ ಅತ್ಯಂತ ಕಾಳಜಿ ವಹಿಸಿ ಮತಗಟ್ಟೆ ಅಧಿಕಾರಿಗಳು ಮತ್ತು ಮತದಾರರಿಗೆ ಅಗತ್ಯವಾದ ಮೂಲಸೌಲಭ್ಯ ವ್ಯವಸ್ಥೆ ಕಲ್ಪಿಸಬೇಕು’ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಹಾಗೂ ಜಿಲ್ಲಾ ಪಂಚಾಯ್ತಿ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ಸೂಚಿಸಿದ್ದಾರೆ. Next post ಮತದಾನ ಕೇಂದ್ರಗಳಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಲು ಡಿಸಿ – ಸಿಇಓ ಖಡಕ್ ಸೂಚನೆ!