
ಮೇ 8 ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ
ಬೆಂಗಳೂರು, ಮೇ 7: ರಾಜ್ಯದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶವು ಮೇ 8 ರಂದು ಬೆಳಿಗ್ಗೆ 10 ಗಂಟೆಗೆ ಪ್ರಕಟವಾಗಲಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಸುದ್ಧಿಗೋಷ್ಠಿಯ ಮೂಲಕ ಪರೀಕ್ಷಾ ಫಲಿತಾಂಶ ಪ್ರಕಟಣೆ ಮಾಡಲಿದೆ. ಬೆಳಿಗ್ಗೆ11 ಗಂಟೆಯ ಬಳಿಕ ಜಾಲತಾಣದಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ ಎಂದು ತಿಳಿದುಬಂದಿದೆ.
2022-23 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಕಳೆದ ಹಲವು ದಿನಗಳ ಹಿಂದೆಯೇ ಮುಕ್ತಾಯವಾಗಿತ್ತು. ವಿದ್ಯಾರ್ಥಿಗಳು ಗಳಿಸಿದ ಅಂಕಗಳ ಕೂಡುವಿಕೆಯ ಕಾರ್ಯ ನಡೆಸಲಾಗುತ್ತಿತ್ತು.
ಈ ಪ್ರಕ್ರಿಯೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪರೀಕ್ಷಾ ಫಲಿತಾಂಶ ಪ್ರಕಟಣೆ ಮಾಡಲಾಗುತ್ತಿದೆ. ಈ ಬಾರಿಯ ಎಸ್ಎಸ್ಎಲ್ ಸಿ ಪರೀಕ್ಷೆಯೂ ಮಾರ್ಚ್ 31 ರಿಂದ ಏಪ್ರಿಲ್ 15ರವರೆಗೆ ನಡೆದಿತ್ತು.
ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ಗಳಾದ www.karresults.nic.in ಮತ್ತು https://kseab.karnataka.gov.in/ ನಲ್ಲಿ ಬಿಡುಗಡೆ ಮಾಡಲಾಗುತ್ತದೆ.