ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ, ಶಿವಮೊಗ್ಗ ತಾಲೂಕಿನ ಆಯನೂರು ಗ್ರಾಮದಲ್ಲಿ ಭಾನುವಾರ ಬಿಜೆಪಿ ಪಕ್ಷ ಆಯೋಜಿಸಿದ್ದ ಸಮಾವೇಶದಲ್ಲಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದರು.

ಕಾಂಗ್ರೆಸ್ ವಿರುದ್ದ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ!

ಶಿವಮೊಗ್ಗ, ಮೇ 7: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ, ಶಿವಮೊಗ್ಗ ತಾಲೂಕಿನ ಆಯನೂರು ಗ್ರಾಮದಲ್ಲಿ ಭಾನುವಾರ ಬಿಜೆಪಿ ಪಕ್ಷ ಆಯೋಜಿಸಿದ್ದ ಸಮಾವೇಶದಲ್ಲಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದರು.

‘ಕಾಂಗ್ರೆಸ್ ಪಕ್ಷ ಹಾರಿ ಬಿಡುತ್ತಿರುವ ಸುಳ್ಳು ಭರವಸೆಯ ಬಲೂನ್ ಗಳನ್ನು ಕರ್ನಾಟಕದ ಜನತೆ ಚೂರುಚೂರು ಮಾಡಿದ್ದಾರೆ. ಈ ಕಾರಣದಿಂದ ಕಾಂಗ್ರೆಸ್ ಪಕ್ಷಕ್ಕೆ ಭಯ ಶುರುವಾಗಿದೆ. ಚುನಾವಣಾ ಪ್ರಚಾರದಿಂದ ದೂರ ಉಳಿದಿದ್ದವರನ್ನು ಮತ್ತೆ ಕರೆತಂದು ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ’ ಎಂದು ಪರೋಕ್ಷವಾಗಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಪ್ರಚಾರದ ಕುರಿತಂತೆ ವ್ಯಂಗ್ಯವಾಡಿದ್ದಾರೆ.

ಕರ್ನಾಟಕದಲ್ಲಿ ಎಲ್ಲಿಯೇ ಹೋದರು ಬಿಜೆಪಿಗೆ ಬೆಂಬಲ ಸಿಗುತ್ತಿದೆ. ಮತ್ತೊಮ್ಮೆ ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಆತ್ಮ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಭಾನುವಾರ ಬೆಳಿಗ್ಗೆ ತಾವು ಬೆಂಗಳೂರಿನಲ್ಲಿ ನಡೆಸಿದ ರೋಡ್ ಶೋಗೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಯಿತು. ನೀಟ್ ಪರೀಕ್ಷೆಯಿದ್ದ ಕಾರಣ ಬೆಳಿಗ್ಗೆಯೇ ರೋಡ್ ಶೋ ನಡೆಸಲಾಯಿತು. ವಿದ್ಯಾರ್ಥಿಗಳಿಗೆ ಅನಾನುಕೂಲವಾಗದಂತೆ ಎಚ್ಚರವಹಿಸಲಾಯಿತು ಎಂದು ಇದೇ ವೇಳೆ ನರೇಂದ್ರ ಮೋದಿ ಅವರು ಹೇಳಿದರು.  

ಸಮಾರಂಭದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ವಿಧಾನಸಭಾ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳು, ಬಮುಖಂಡರು ಉಪಸ್ಥಿತರಿದ್ದರು.

ರಾಜ್ಯದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶವು ಮೇ 8 ರಂದು ಬೆಳಿಗ್ಗೆ 10 ಗಂಟೆಗೆ ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಸುದ್ಧಿಗೋಷ್ಠಿಯ ಮೂಲಕ ಪರೀಕ್ಷಾ ಫಲಿತಾಂಶ ಪ್ರಕಟಣೆ ಮಾಡಲಿದೆ. 11 ಗಂಟೆಯ ಬಳಿಕ ಜಾಲತಾಣದಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ ಎಂದು ತಿಳಿದುಬಂದಿದೆ. Previous post ಮೇ 8 ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ
ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ ರಿಸಲ್ಟ್ : ರಾಜ್ಯದಲ್ಲಿ 625 ಕ್ಕೆ 625 ಅಂಕ ಗಳಿಸಿದ ನಾಲ್ವರು ವಿದ್ಯಾರ್ಥಿಗಳು! ಬೆಂಗಳೂರು, ಮೇ 8: 2022-23 ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶ ಸೋಮವಾರ ಪ್ರಕಟವಾಗಿದೆ. ಪ್ರಸ್ತುತ ವರ್ಷ ಶೇ. 83.89 ರಷ್ಟು ಫಲಿತಾಂಶ ಬಂದಿದೆ. ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಶೇ. 83.89 ರಷ್ಟು ವಿದ್ಯಾರ್ಥಿನಿಯರು ತೇರ್ಗಡೆ ಹೊಂದಿದ್ದು, ಶೇ. 80.08 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟಾರೆ 8,35,102 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 7,00,619 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ನಾಲ್ವರು ವಿದ್ಯಾರ್ಥಿಗಳು 625 ಕ್ಕೆ 625 ಅಂಕ ಗಳಿಸಿ ಗಮನ ಸೆಳೆದಿದ್ದಾರೆ. ಬೆಂಗಳೂರಿನ ಭೂಮಿಕಾ ಪೈ, ವಿಜಯಪುರ ಜಿಲ್ಲೆಯ ಭೀಮನಗೌಡ ಪಾಟೀಲ್, ಬೆಳಗಾವಿ ಜಿಲ್ಲೆ ಅನುಪಮಾ ಶ್ರೀಶೈಲ್ ಹಿರೆಹೊಳಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಯಶಸ್ ಗೌಡ ಈ ಸಾಧನೆ ಮಾಡಿದವರಾಗಿದ್ದಾರೆ. ಇಡೀ ರಾಜ್ಯದಲ್ಲಿ ಚಿತ್ರದುರ್ಗ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ. ಮಂಡ್ಯ 2 ನೇ ಸ್ಥಾನ, ಹಾಸನ 3 ನೇ ಸ್ಥಾನ ಪಡೆದುಕೊಂಡಿದೆ. ಯಾದಗಿರಿ ಜಿಲ್ಲೆಯು ಕೊನೆ ಸ್ಥಾನ ಪಡೆದುಕೊಂಡಿದೆ. ಶಿವಮೊಗ್ಗ 29 ನೇ ಸ್ಥಾನದಲ್ಲಿದೆ. Next post ಎಸ್​ಎಸ್​ಎಲ್​ಸಿ ರಿಸಲ್ಟ್ : 625 ಕ್ಕೆ 625 ಅಂಕ ಗಳಿಸಿದ ನಾಲ್ವರು ವಿದ್ಯಾರ್ಥಿಗಳು!