ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ ರಿಸಲ್ಟ್ : ರಾಜ್ಯದಲ್ಲಿ 625 ಕ್ಕೆ 625 ಅಂಕ ಗಳಿಸಿದ ನಾಲ್ವರು ವಿದ್ಯಾರ್ಥಿಗಳು! ಬೆಂಗಳೂರು, ಮೇ 8: 2022-23 ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶ ಸೋಮವಾರ ಪ್ರಕಟವಾಗಿದೆ. ಪ್ರಸ್ತುತ ವರ್ಷ ಶೇ. 83.89 ರಷ್ಟು ಫಲಿತಾಂಶ ಬಂದಿದೆ. ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಶೇ. 83.89 ರಷ್ಟು ವಿದ್ಯಾರ್ಥಿನಿಯರು ತೇರ್ಗಡೆ ಹೊಂದಿದ್ದು, ಶೇ. 80.08 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟಾರೆ 8,35,102 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 7,00,619 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ನಾಲ್ವರು ವಿದ್ಯಾರ್ಥಿಗಳು 625 ಕ್ಕೆ 625 ಅಂಕ ಗಳಿಸಿ ಗಮನ ಸೆಳೆದಿದ್ದಾರೆ. ಬೆಂಗಳೂರಿನ ಭೂಮಿಕಾ ಪೈ, ವಿಜಯಪುರ ಜಿಲ್ಲೆಯ ಭೀಮನಗೌಡ ಪಾಟೀಲ್, ಬೆಳಗಾವಿ ಜಿಲ್ಲೆ ಅನುಪಮಾ ಶ್ರೀಶೈಲ್ ಹಿರೆಹೊಳಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಯಶಸ್ ಗೌಡ ಈ ಸಾಧನೆ ಮಾಡಿದವರಾಗಿದ್ದಾರೆ. ಇಡೀ ರಾಜ್ಯದಲ್ಲಿ ಚಿತ್ರದುರ್ಗ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ. ಮಂಡ್ಯ 2 ನೇ ಸ್ಥಾನ, ಹಾಸನ 3 ನೇ ಸ್ಥಾನ ಪಡೆದುಕೊಂಡಿದೆ. ಯಾದಗಿರಿ ಜಿಲ್ಲೆಯು ಕೊನೆ ಸ್ಥಾನ ಪಡೆದುಕೊಂಡಿದೆ. ಶಿವಮೊಗ್ಗ 29 ನೇ ಸ್ಥಾನದಲ್ಲಿದೆ.

ಎಸ್​ಎಸ್​ಎಲ್​ಸಿ ರಿಸಲ್ಟ್ : 625 ಕ್ಕೆ 625 ಅಂಕ ಗಳಿಸಿದ ನಾಲ್ವರು ವಿದ್ಯಾರ್ಥಿಗಳು!

ಬೆಂಗಳೂರು, ಮೇ 8: 2022-23 ನೇ ಸಾಲಿನ ಎಸ್​ಎಸ್​ಎಲ್​ಸಿ ಫಲಿತಾಂಶ ಸೋಮವಾರ ಪ್ರಕಟವಾಗಿದೆ. ಪ್ರಸ್ತುತ ವರ್ಷ ಶೇ. 83.89 ರಷ್ಟು ಫಲಿತಾಂಶ ಬಂದಿದೆ. ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

ಶೇ. 83.89 ರಷ್ಟು ವಿದ್ಯಾರ್ಥಿನಿಯರು ತೇರ್ಗಡೆ ಹೊಂದಿದ್ದು, ಶೇ. 80.08 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟಾರೆ 8,35,102 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 7,00,619 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.

ನಾಲ್ವರು ವಿದ್ಯಾರ್ಥಿಗಳು 625 ಕ್ಕೆ 625 ಅಂಕ ಗಳಿಸಿ ಗಮನ ಸೆಳೆದಿದ್ದಾರೆ. ಬೆಂಗಳೂರಿನ ಭೂಮಿಕಾ ಪೈ, ವಿಜಯಪುರ ಜಿಲ್ಲೆಯ ಭೀಮನಗೌಡ ಪಾಟೀಲ್, ಬೆಳಗಾವಿ ಜಿಲ್ಲೆಯ ಅನುಪಮಾ ಶ್ರೀಶೈಲ್ ಹಿರೆಹೊಳಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಯಶಸ್ ಗೌಡ ಈ ಸಾಧನೆ ಮಾಡಿದವರಾಗಿದ್ದಾರೆ.

ಇಡೀ ರಾಜ್ಯದಲ್ಲಿ ಚಿತ್ರದುರ್ಗ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ. ಮಂಡ್ಯ 2 ನೇ ಸ್ಥಾನ, ಹಾಸನ 3 ನೇ ಸ್ಥಾನ ಪಡೆದುಕೊಂಡಿದೆ. ಯಾದಗಿರಿ ಜಿಲ್ಲೆಯು ಕೊನೆ ಸ್ಥಾನ ಪಡೆದುಕೊಂಡಿದೆ. ಶಿವಮೊಗ್ಗ 29 ನೇ ಸ್ಥಾನದಲ್ಲಿದೆ.

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ, ಶಿವಮೊಗ್ಗ ತಾಲೂಕಿನ ಆಯನೂರು ಗ್ರಾಮದಲ್ಲಿ ಭಾನುವಾರ ಬಿಜೆಪಿ ಪಕ್ಷ ಆಯೋಜಿಸಿದ್ದ ಸಮಾವೇಶದಲ್ಲಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದರು. Previous post ಕಾಂಗ್ರೆಸ್ ವಿರುದ್ದ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ!
ದಿಢೀರ್ ಭುಗಿಲೆದ್ದ ಜನಾಂಗೀಯ ಹಿಂಸಾಚಾರದಿಂದ, ಮಣಿಪುರ ರಾಜ್ಯ ಅಕ್ಷರಶಃ ನುಲುಗಿ ಹೋಗಿದೆ. ಈ ನಡುವೆ ಮಣಿಪುರ ರಾಜ್ಯದಲ್ಲಿ ವಿದ್ಯಾಭ್ಯಾಸಕ್ಕೆಂದು ತೆರಳಿದ್ದ ಕರ್ನಾಟಕ ರಾಜ್ಯದ ನಾಲ್ವರು ವಿದ್ಯಾರ್ಥಿಗಳನ್ನು, ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವ ಕಾರ್ಯವನ್ನು ಕರ್ನಾಟಕ ವಿಪತ್ತು ನಿರ್ವಹಣಾ ಪ್ರಾಧಿಕಾರ ನಡೆಸಲಾರಂಭಿಸಿದೆ. Next post ಹಿಂಸಾಪೀಡಿತ ಮಣಿಪುರದಲ್ಲಿದ್ದ ಕರ್ನಾಟಕದ ನಾಲ್ವರು ವಿದ್ಯಾರ್ಥಿಗಳಿಗೆ ನೆರವಿನಹಸ್ತ!