ಶಿವಮೊಗ್ಗ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯವು, ಮೇ 13 ರಂದು ಶಿವಮೊಗ್ಗ ನಗರದ ಸಹ್ಯಾದ್ರಿ ಕಲಾ ಕಾಲೇಜ್ ನಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮೇ 13 ರಂದು ನಗರದ ವಿವಿಧೆಡೆ ವಾಹನಗಳ ಸಂಚಾರ ಮಾರ್ಗ ಬದಲಾವಣೆಗೊಳಿಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ. ವಿವರ: ಸಹ್ಯಾದ್ರಿ ಕಾಲೇಜ್ ಸುತ್ತಮುತ್ತ 100 ಮೀಟರ್ ಅಂತರದಲ್ಲಿ ಎಲ್ಲ ವಾಹನಗಳ ಸಂಚಾರ, ನಿಲುಗಡೆ ನಿಷೇಧಿಸಲಾಗಿದೆ. ಎಂ.ಆರ್.ಎಸ್ ಸರ್ಕಲ್ ನಿಂದ ಬಿ.ಹೆಚ್ ರಸ್ತೆ, ವಿದ್ಯಾನಗರ, ಮತ್ತೂರು ಕ್ರಾಸ್ ವರೆಗೆ ಸಾರ್ವಜನಿಕರ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.

ವಿಧಾನಸಭೆ ಚುನಾವಣೆ ಮತ ಎಣಿಕೆ : ಮೇ 13 ರಂದು ಶಿವಮೊಗ್ಗ ನಗರದ ವಿವಿಧೆಡೆ ವಾಹನಗಳ ಸಂಚಾರ ಮಾರ್ಗ ಬದಲಾವಣೆ

ಶಿವಮೊಗ್ಗ, ಮೇ 12: ಶಿವಮೊಗ್ಗ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯವು, ಮೇ 13 ರಂದು ಶಿವಮೊಗ್ಗ ನಗರದ ಸಹ್ಯಾದ್ರಿ ಕಲಾ ಕಾಲೇಜ್ ನಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮೇ 13 ರಂದು ನಗರದ ವಿವಿಧೆಡೆ  ವಾಹನಗಳ ಸಂಚಾರ ಮಾರ್ಗ ಬದಲಾವಣೆಗೊಳಿಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ವಿವರ: ಸಹ್ಯಾದ್ರಿ ಕಾಲೇಜ್ ಸುತ್ತಮುತ್ತ 100 ಮೀಟರ್ ಅಂತರದಲ್ಲಿ ಎಲ್ಲ ವಾಹನಗಳ ಸಂಚಾರ, ನಿಲುಗಡೆ ನಿಷೇಧಿಸಲಾಗಿದೆ. ಎಂ.ಆರ್.ಎಸ್ ಸರ್ಕಲ್ ನಿಂದ ಬಿ.ಹೆಚ್ ರಸ್ತೆ, ವಿದ್ಯಾನಗರ, ಮತ್ತೂರು ಕ್ರಾಸ್ ವರೆಗೆ ಸಾರ್ವಜನಿಕರ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.

ಬೆಂಗಳೂರು, ಭದ್ರಾವತಿ, ಎನ್.ಆರ್ ಪುರ ಕಡೆಯಿಂದ ಬರುವ ಭಾರೀ ವಾಹನ, ಬಸ್, ಕಾರು, ದ್ವಿಚಕ್ರ, ತ್ರಿಚಕ್ರ ವಾಹನಗಳು ಬೈಪಾಸ್ ರಸ್ತೆ ಮುಖಾಂತರ ಸಂಚರಿಸಬೇಕು.

ಚಿತ್ರದುರ್ಗ, ಹೊಳೆಹೊನ್ನೂರಿನಿಂದ ಬರುವ ಮತ್ತು ಹೋಗುವ ಎಲ್ಲ ಭಾರೀ ವಾಹನ ಮತ್ತು

ಬಸ್ ಗಳು ಬಿ.ಹೆಚ್ ರಸ್ತೆ ಮೂಲಕ ಹಾಗೂ ಹೊನ್ನಾಳಿ ದಾವಣಗೆರೆಯಿಂದ ಬರುವ ವಾಹನಗಳು ವಿನೋಬನಗರ 100 ಅಡಿ ರಸ್ತೆ ಮಾರ್ಗವಾಗಿ ಸಂಚರಿಸಲು ಸೂಚಿಸಲಾಗಿದೆ.  

ಕೆ.ಎಸ್.ಆರ್.ಟಿ.ಸಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಹೊನ್ನಾಳಿ ಹರಿಹರ, ದಾವಣಗೆರೆಗೆ ಹೋಗುವ ಬಸ್ ಗಳು ಎ.ಎ ಸರ್ಕಲ್, ಗೋಪಿ ಸರ್ಕಲ್, ಮಹಾವೀರ ಸರ್ಕಲ್, ಕೆಇಬಿ ಸರ್ಕಲ್ ಮುಖಾಂತರವಾಗಿ ಸಂಚರಿಸಬೇಕು.

ಕೆಎಸ್.ಆರ್.ಟಿ.ಸಿ ಮತ್ತು ಖಾಸಗಿ ಬಸ್ ನಿಲ್ದಾಣ ದಿಂದ ಬೆಂಗಳೂರು ಭದ್ರಾವತಿ ಎನ್.ಆರ್. ಪುರ ಕಡೆಗೆ ಹೋಗುವ ವಾಹನಗಳು ಬೈಪಾಸ್ ರಸ್ತೆ ಮುಖಾಂತರ ಎಂ.ಆರ್.ಎಸ್ ಸರ್ಕಲ್ ಕಡೆಗೆ ಹೋಗಬೇಕು.

ಏಜೆಂಟರು ಮತ್ತು ಎಲ್ಲ ಇಲಾಖೆಯ ಅಧಿಕಾರಿಗಳ ವಾಹನಗಳನ್ನು ಸಹ್ಯಾದ್ರಿ ಸೈನ್ಸ್ ಕಾಲೇಜು ಎದುರು, ವಜ್ರ ಮಹೋತ್ಸವ ಕಟ್ಟಡದ ಎದುರು ಮತ್ತು ಬಿ.ಹೆಚ್. ರಸ್ತೆಗೆ ಹೊಂದಿಕೊಂಡಂತಿರುವ ಮ್ಯಾಚ್ ಫ್ಯಾಕ್ಟರಿಗೆ ಸೇರಿದ ಮೈದಾನದಲ್ಲಿ ಪಾರ್ಕಿಂಗ್ ಮಾಡಬೇಕು.

ಸಾರ್ವಜನಿಕರ ಕಾರುಗಳು ಮತ್ತು ದ್ವಿ ಚಕ್ರ ವಾಹನಗಳನ್ನು ಮಾತ್ರ ಎಂ.ಆರ್.ಎಸ್ ನಿಂದ ಎನ್.ಆರ್ ಪುರ ರಸ್ತೆಯ ಎಡಭಾಗದಲ್ಲಿ ಪಾರ್ಕಿಂಗ್ ಗೆ ಅವಕಾಶ ಕಲ್ಪಿಸಲಾಗಿದೆ.

ಎಲ್ಲ ತರದ ವಾಹನಗಳನ್ನುಎಂ.ಆರ್.ಎಸ್. ಸರ್ಕಲ್ ನ ಹತ್ತಿರವಿರುವ ಕೆ.ಇ.ಬಿ ಸಮುದಾಯ ಭವನದ ಹಿಂಭಾಗ ಮತ್ತು ಬೈಪಾಸ್ ರಸ್ತೆಗೆ ಹೊಂದಿಕೊಂಡಂತಿರುವ ಸಹ್ಯಾದ್ರಿ ಕಾಲೇಜಿನ ಸ್ಟೇಡಿಯಂ ಹತ್ತಿರ ಪಾರ್ಕಿಂಗ್ ಮಾಡಬೇಕು ಎಂದು ಪ್ರಕಟಣೆಯಲ್ಲಿ ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.

ಮೊಬೈಲ್ ಫೋನ್, ಎಲೆಕ್ಟ್ರಾನಿಕ್ಸ್ ವಾಚ್ ನಿರ್ಬಂಧ

*** ಮತ ಎಣಿಕಾ ಕೇಂದ್ರದ ಒಳಗಡೆ ಮೊಬೈಲ್ ಫೋನ್‌, ಡಿಜಿಟಲ್‌ ವಾಚ್‌ ಮತ್ತು ಇತರೆ ಎಲೆಕ್ಟ್ರಾನಿಕ್ಸ್ ಉಪಕರಣ ಕೊಂಡೊಯ್ಯುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಮತ ಎಣಿಕಾ ಕೇಂದ್ರಕ್ಕೆ  ಬರುವ ಚುನಾವಣಾ ಏಜೆಂಟರ್ ಗಳು ಮತ್ತು ಇತರೆ ವ್ಯಕ್ತಿಗಳು  ಮೊಬೈಲ್ ಫೋನ್, ಡಿಜಿಟಲ್‌ ವಾಚ್‌  ಮತ್ತು ಇತರೆ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ಯಾವುದೇ ಕಾರಣಕ್ಕೂ ತರುವಂತಿಲ್ಲ ಎಂದು ಪೊಲೀಸ್ ಇಲಾಖೆಯು ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

ಶಿವಮೊಗ್ಗ, ಮೇ.11: ‘ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ಶಿವಮೊಗ್ಗ ನಗರದ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಮೇ 13ರಂದು ಶನಿವಾರ ಬೆಳಿಗ್ಗೆ 8ಗಂಟೆಯಿಂದ ಪ್ರಾರಂಭವಾಗಲಿದ್ದು, ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ’ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ತಿಳಿಸಿದ್ದಾರೆ. Previous post ವಿಧಾನಸಭೆ ಚುನಾವಣೆ : ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಲಿದೆ ಮತ ಎಣಿಕೆ!
ಮಾಜಿ ಸಿಎಂ ದಿವಂಗತ ಎಸ್.ಬಂಗಾರಪ್ಪ ಪುತ್ರರಿಬ್ಬರ ಸ್ಪರ್ಧೆಯಿಂದ ಗಮನ ಸೆಳೆದಿದ್ದ, ನೇರ ಹಣಾಹಣಿಗೆ ಸಾಕ್ಷಿಯಾಗಿದ್ದ ಸೊರಬ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪ ಭಾರೀ ಮತಗಳ ಅಂತರದಲ್ಲಿ ವಿಜಯದ ನಗೆ ಬೀರಿದ್ದಾರೆ. ಹಾಲಿ ಶಾಸಕ ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ ಪರಾಭವಗೊಂಡಿದ್ದು, ತೀವ್ರ ಮುಖಭಂಗಕ್ಕೀಡಾಗಿದ್ದಾರೆ! ಮಧು ಬಂಗಾರಪ್ಪ ಅವರು 98,232 ಮತ ಪಡೆದಿದ್ದಾರೆ. ಅವರ ಪ್ರತಿಸ್ಪರ್ಧಿ ಕುಮಾರ್ ಬಂಗಾರಪ್ಪ ಅವರು 54,311 ಮತ ಪಡೆಯಲಷ್ಟೆ ಶಕ್ತರಾಗಿದ್ದಾರೆ. ಮಧು ಬಂಗಾರಪ್ಪ ಅವರು 43,921 ಮತಗಳ ಅಂತರದಲ್ಲಿ ಕುಮಾರ್ ಬಂಗಾರಪ್ಪರನ್ನು ಮಣಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ಬಾಸೂರು ಚಂದ್ರೇಗೌಡ ಅವರು 6428 ಮತ ಪಡೆದಿದ್ದಾರೆ. ಅಖಾಡದಲ್ಲಿದ್ದ ಉಳಿದ ಅಭ್ಯರ್ಥಿಗಳ ಮತ ಗಳಿಕೆ ಪ್ರಮಾಣ ಸಾವಿರದ ಗಡಿ ದಾಟಿಲ್ಲ. Next post ಸೊರಬ : ಭಾರೀ ಮತಗಳ ಅಂತರದಲ್ಲಿ ಜಯ ಸಾಧಿಸಿದ ಮಧು ಬಂಗಾರಪ್ಪ!