ಮಾಜಿ ಸಿಎಂ ದಿವಂಗತ ಎಸ್.ಬಂಗಾರಪ್ಪ ಪುತ್ರರಿಬ್ಬರ ಸ್ಪರ್ಧೆಯಿಂದ ಗಮನ ಸೆಳೆದಿದ್ದ, ನೇರ ಹಣಾಹಣಿಗೆ ಸಾಕ್ಷಿಯಾಗಿದ್ದ ಸೊರಬ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪ ಭಾರೀ ಮತಗಳ ಅಂತರದಲ್ಲಿ ವಿಜಯದ ನಗೆ ಬೀರಿದ್ದಾರೆ. ಹಾಲಿ ಶಾಸಕ ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ ಪರಾಭವಗೊಂಡಿದ್ದು, ತೀವ್ರ ಮುಖಭಂಗಕ್ಕೀಡಾಗಿದ್ದಾರೆ! ಮಧು ಬಂಗಾರಪ್ಪ ಅವರು 98,232 ಮತ ಪಡೆದಿದ್ದಾರೆ. ಅವರ ಪ್ರತಿಸ್ಪರ್ಧಿ ಕುಮಾರ್ ಬಂಗಾರಪ್ಪ ಅವರು 54,311 ಮತ ಪಡೆಯಲಷ್ಟೆ ಶಕ್ತರಾಗಿದ್ದಾರೆ. ಮಧು ಬಂಗಾರಪ್ಪ ಅವರು 43,921 ಮತಗಳ ಅಂತರದಲ್ಲಿ ಕುಮಾರ್ ಬಂಗಾರಪ್ಪರನ್ನು ಮಣಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ಬಾಸೂರು ಚಂದ್ರೇಗೌಡ ಅವರು 6428 ಮತ ಪಡೆದಿದ್ದಾರೆ. ಅಖಾಡದಲ್ಲಿದ್ದ ಉಳಿದ ಅಭ್ಯರ್ಥಿಗಳ ಮತ ಗಳಿಕೆ ಪ್ರಮಾಣ ಸಾವಿರದ ಗಡಿ ದಾಟಿಲ್ಲ.

ಸೊರಬ : ಭಾರೀ ಮತಗಳ ಅಂತರದಲ್ಲಿ ಜಯ ಸಾಧಿಸಿದ ಮಧು ಬಂಗಾರಪ್ಪ!

-ಬಿ.ರೇಣುಕೇಶ್

ಸೊರಬ, ಮೇ 13: ಮಾಜಿ ಸಿಎಂ ದಿವಂಗತ ಎಸ್.ಬಂಗಾರಪ್ಪ ಪುತ್ರರಿಬ್ಬರ ಸ್ಪರ್ಧೆಯಿಂದ ಗಮನ ಸೆಳೆದಿದ್ದ, ನೇರ ಹಣಾಹಣಿಗೆ ಸಾಕ್ಷಿಯಾಗಿದ್ದ ಸೊರಬ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪ ಭಾರೀ ಮತಗಳ ಅಂತರದಲ್ಲಿ ವಿಜಯದ ನಗೆ ಬೀರಿದ್ದಾರೆ. ಹಾಲಿ ಶಾಸಕ ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ ಪರಾಭವಗೊಂಡಿದ್ದು, ತೀವ್ರ ಮುಖಭಂಗಕ್ಕೀಡಾಗಿದ್ದಾರೆ!

ಮಧು ಬಂಗಾರಪ್ಪ ಅವರು 98,232 ಮತ ಪಡೆದಿದ್ದಾರೆ. ಅವರ ಪ್ರತಿಸ್ಪರ್ಧಿ ಕುಮಾರ್ ಬಂಗಾರಪ್ಪ ಅವರು 54,311 ಮತ ಪಡೆಯಲಷ್ಟೆ ಶಕ್ತರಾಗಿದ್ದಾರೆ. ಮಧು ಬಂಗಾರಪ್ಪ ಅವರು 43,921 ಮತಗಳ ಅಂತರದಲ್ಲಿ ಕುಮಾರ್ ಬಂಗಾರಪ್ಪರನ್ನು ಮಣಿಸಿದ್ದಾರೆ.

ಜೆಡಿಎಸ್ ಅಭ್ಯರ್ಥಿ ಬಾಸೂರು ಚಂದ್ರೇಗೌಡ ಅವರು 6428 ಮತ ಪಡೆದಿದ್ದಾರೆ. ಅಖಾಡದಲ್ಲಿದ್ದ ಉಳಿದ ಅಭ್ಯರ್ಥಿಗಳ ಮತ ಗಳಿಕೆ ಪ್ರಮಾಣ ಸಾವಿರದ ಗಡಿ ದಾಟಿಲ್ಲ.

ಒಟ್ಟಾರೆ ಸೊರಬ ಕ್ಷೇತ್ರದ ಮತ ಎಣಿಕೆ ಕಾರ್ಯವು18 ಸುತ್ತುಗಳಲ್ಲಿ ನಡೆಯಿತು. ಮೊದಲ ಸುತ್ತಿನಿಂದ ಕೊನೆಯ ಸುತ್ತಿನವರೆಗೆ ಮಧು ಬಂಗಾರಪ್ಪರವರು ಮುನ್ನಡೆ ಕಾಯ್ದುಕೊಂಡು ಬಂದಿದ್ದು ವಿಶೇಷವಾಗಿತ್ತು.

ಭಿನ್ನಮತ: ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ ಅವರ ಪರಾಭವಕ್ಕೆ ಸ್ವಪಕ್ಷೀಯ ಮುಖಂಡರ ಭಿನ್ನಮತ ಮುಖ್ಯ ಕಾರಣವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಕುಮಾರ್ ಬಂಗಾರಪ್ಪ ವಿರುದ್ದ ಬಿಜೆಪಿ ಪಕ್ಷದ ಮೂಲ ಕಾರ್ಯಕರ್ತರು ಹಾಗೂ ಮುಖಂಡರು ಮುನಿಸಿಕೊಂಡಿದ್ದರು. ಅವರಿಗೆ ಟಿಕೆಟ್ ನೀಡದಂತೆ ಒತ್ತಾಯಿಸಿದ್ದರು. ಇದು ಕುಮಾರ್ ಮತಗಳಿಕೆಯ ಮೇಲೆ ಪರಿಣಾಮ ಬೀರುವಂತಾಗಿದೆ.

ಮಾಜಿ ಸಿಎಂ ದಿವಂಗತ ಎಸ್.ಬಂಗಾರಪ್ಪ ಪುತ್ರರಿಬ್ಬರ ಸ್ಪರ್ಧೆಯಿಂದ ಗಮನ ಸೆಳೆದಿದ್ದ, ನೇರ ಹಣಾಹಣಿಗೆ ಸಾಕ್ಷಿಯಾಗಿದ್ದ ಸೊರಬ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪ ಭಾರೀ ಮತಗಳ ಅಂತರದಲ್ಲಿ ವಿಜಯದ ನಗೆ ಬೀರಿದ್ದಾರೆ. ಹಾಲಿ ಶಾಸಕ ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ ಪರಾಭವಗೊಂಡಿದ್ದು, ತೀವ್ರ ಮುಖಭಂಗಕ್ಕೀಡಾಗಿದ್ದಾರೆ!
ಮಧು ಬಂಗಾರಪ್ಪ ಅವರು 98,232 ಮತ ಪಡೆದಿದ್ದಾರೆ. ಅವರ ಪ್ರತಿಸ್ಪರ್ಧಿ ಕುಮಾರ್ ಬಂಗಾರಪ್ಪ ಅವರು 54,311 ಮತ ಪಡೆಯಲಷ್ಟೆ ಶಕ್ತರಾಗಿದ್ದಾರೆ. ಮಧು ಬಂಗಾರಪ್ಪ ಅವರು 43,921 ಮತಗಳ ಅಂತರದಲ್ಲಿ ಕುಮಾರ್ ಬಂಗಾರಪ್ಪರನ್ನು ಮಣಿಸಿದ್ದಾರೆ. 
ಜೆಡಿಎಸ್ ಅಭ್ಯರ್ಥಿ ಬಾಸೂರು ಚಂದ್ರೇಗೌಡ ಅವರು 6428 ಮತ ಪಡೆದಿದ್ದಾರೆ. ಅಖಾಡದಲ್ಲಿದ್ದ ಉಳಿದ ಅಭ್ಯರ್ಥಿಗಳ ಮತ ಗಳಿಕೆ ಪ್ರಮಾಣ ಸಾವಿರದ ಗಡಿ ದಾಟಿಲ್ಲ.

ಹಾಗೆಯೇ ಮಧು ಬಂಗಾರಪ್ಪ ಅವರಿಗೆ ಕಾಂಗ್ರೆಸ್ ಪರವಾದ ಒಲವು, ಬಿಜೆಪಿ ಸರ್ಕಾರದ ಆಡಳಿತ ವಿರೋಧಿ ಅಲೆ, ಬಗರ್ ಹುಕುಂ ಸಾಗುವಳಿ ಸೇರಿದಂತೆ ಸ್ಥಳೀಯ ಸಮಸ್ಯೆಗಳು, ಸಹೋದರ ಕುಮಾರ್ ವಿರುದ್ದದ ವಿರೋಧಿ ಮತಗಳು ಕೈ ಹಿಡಿಯುವಂತಾಗಿದೆ. ಈ ಕಾರಣದಿಂದ ಭಾರೀ ಮತಗಳ ಅಂತರದಲ್ಲಿ ಅವರು ಜಯದ ನಗೆ ಬೀರುವಂತಾಗಿದೆ.

ಲಾಭ ತಂದ ಕಾಂಗ್ರೆಸ್ ಸೇರ್ಪಡೆ!

*** 2013 ರಲ್ಲಿ ಮಧು ಬಂಗಾರಪ್ಪ ಜೆಡಿಎಸ್ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಿ ಆಯ್ಕೆಯಾಗಿದ್ದರು. ತದನಂತರ 2018 ರಲ್ಲಿ ಅದೇ ಪಕ್ಷದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು. ನಂತರ ಜೆಡಿಎಸ್ ತೊರೆದ ಮಧು ಬಂಗಾರಪ್ಪ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದರು. ಆ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು ಮಧು ಬಂಗಾರಪ್ಪಗೆ ಲಾಭವಾಗಿ ಪರಿಣಮಿಸಿದೆ. ಮತ್ತೆ ವಿಧಾನಸಭೆ ಪ್ರವೇಶಿಸಲು ಸಹಕಾರಿಯಾಗಿದೆ.

ಶಿವಮೊಗ್ಗ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯವು, ಮೇ 13 ರಂದು ಶಿವಮೊಗ್ಗ ನಗರದ ಸಹ್ಯಾದ್ರಿ ಕಲಾ ಕಾಲೇಜ್ ನಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮೇ 13 ರಂದು ನಗರದ ವಿವಿಧೆಡೆ ವಾಹನಗಳ ಸಂಚಾರ ಮಾರ್ಗ ಬದಲಾವಣೆಗೊಳಿಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ. ವಿವರ: ಸಹ್ಯಾದ್ರಿ ಕಾಲೇಜ್ ಸುತ್ತಮುತ್ತ 100 ಮೀಟರ್ ಅಂತರದಲ್ಲಿ ಎಲ್ಲ ವಾಹನಗಳ ಸಂಚಾರ, ನಿಲುಗಡೆ ನಿಷೇಧಿಸಲಾಗಿದೆ. ಎಂ.ಆರ್.ಎಸ್ ಸರ್ಕಲ್ ನಿಂದ ಬಿ.ಹೆಚ್ ರಸ್ತೆ, ವಿದ್ಯಾನಗರ, ಮತ್ತೂರು ಕ್ರಾಸ್ ವರೆಗೆ ಸಾರ್ವಜನಿಕರ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. Previous post ವಿಧಾನಸಭೆ ಚುನಾವಣೆ ಮತ ಎಣಿಕೆ : ಮೇ 13 ರಂದು ಶಿವಮೊಗ್ಗ ನಗರದ ವಿವಿಧೆಡೆ ವಾಹನಗಳ ಸಂಚಾರ ಮಾರ್ಗ ಬದಲಾವಣೆ
ನಿರೀಕ್ಷಿಸಿದಂತೆ ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಅವರು ಪ್ರಯಾಸದ ಜಯ ಸಂಪಾದಿಸಿದ್ದಾರೆ. ಅವರ ಸಮೀಪದ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ನಾಗರಾಜಗೌಡ ಅವರು ಭಾರೀ ಹೋರಾಟ ನೀಡಿದ್ದು, ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟಿಕೊಂಡಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೋಣಿ ಮಾಲತೇಶ್ ಅವರು ಠೇವಣಿ ಕಳೆದುಕೊಂಡು ಹೀನಾಯ ಸೋಲನುಭವಿಸಿದ್ದಾರೆ! ವಿಜೇತ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಅವರು 81,015 ಮತ ಪಡೆದಿದ್ದಾರೆ. ಅವರ ಸಮೀಪದ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ನಾಗರಾಜಗೌಡ ಅವರು 70,371 ಮತ ಪಡೆದಿದ್ದಾರೆ. ಬಿ.ವೈ. ವಿಜಯೇಂದ್ರ ಅವರು ನಾಗರಾಜಗೌಡ ಎದುರು 10,644 ಮತಗಳ ಅಂತರದಲ್ಲಿ ಜಯ ಸಾಧಿಸಿದ್ದಾರೆ. ಉಳಿದಂತೆ ಕಾಂಗ್ರೆಸ್ ಅಭ್ಯರ್ಥಿ ಗೋಣಿ ಮಾಲತೇಶ್ ಅವರು 8038 ಮತ ಗಳಿಸಲಷ್ಟೆ ಶಕ್ತರಾಗಿದ್ದಾರೆ. Next post ಶಿಕಾರಿಪುರ : ಬಿ.ವೈ.ವಿಜಯೇಂದ್ರಗೆ ಪ್ರಯಾಸದ ಗೆಲುವು!