ತೀರ್ಥಹಳ್ಳಿಯಲ್ಲಿ ಡಬ್ಬಲ್ ಮರ್ಡರ್ : ಕೂಲಿಕಾರ್ಮಿಕರಿಬ್ಬರ ಬರ್ಬರ ಹತ್ಯೆ!

ತೀರ್ಥಹಳ್ಳಿಯಲ್ಲಿ ಡಬ್ಬಲ್ ಮರ್ಡರ್ : ಕೂಲಿ ಕಾರ್ಮಿಕರಿಬ್ಬರ ಬರ್ಬರ ಹತ್ಯೆ!

ತೀರ್ಥಹಳ್ಳಿ, ಮೇ 18: ತೀರ್ಥಹಳ್ಳಿ ಪಟ್ಟಣದಲ್ಲಿ ಕೂಲಿಕಾರ್ಮಿಕರಿಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದ್ದು, ಗುರುವಾರ ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ.

ಕೊಲೆಗೀಡಾದ ಕೂಲಿ ಕಾರ್ಮಿಕರಿಬ್ಬರು ಉತ್ತರ ಕರ್ನಾಟಕ ಮೂಲದವರೆಂದು ಗುರುತಿಸಲಾಗಿದೆ. ತೀರ್ಥಹಳ್ಳಿ ಪಟ್ಟಣದ ಕುರುವಳ್ಳಿಯ ವಿಠ್ಠಲನಗರಕ್ಕೆ ಹೋಗುವ ರಸ್ತೆಯಲ್ಲಿನ ಪುತ್ತಿಗೆ ಮಠ ಸಮೀಪದ, ನಿರ್ಮಾಣ ಹಂತದಲ್ಲಿರುವ ವಿಶ್ವಕರ್ಮ ಸಮುದಾಯ ಭವನದೊಳಗೆ ಕೊಲೆ ನಡೆದಿದೆ.

ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕಾರ್ಮಿಕರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ವಿಷಯ ತಿಳಿಯುತ್ತಿದ್ದಂತೆ ತೀರ್ಥಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಕಾರ್ಮಿಕರ ಹತ್ಯೆಗೆ ಸ್ಪಷ್ಟ ಕಾರಣಗಳು ತಿಳಿದುಬಂದಿಲ್ಲ. ಹೆಚ್ಚಿನ ವಿವರಗಳು ಇನ್ನಷ್ಟೆ ತಿಳಿದುಬರಬೇಕಾಗಿದೆ.

ದೆಹಲಿ/ಬೆಂಗಳೂರು, ಮೇ 17: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚನೆ ತಯಾರಿಯಲ್ಲಿರುವ ಕಾಂಗ್ರೆಸ್ ಪಕ್ಷದಲ್ಲಿ, ಮುಖ್ಯಮಂತ್ರಿ ಆಯ್ಕೆ ವಿಚಾರ ಕಗ್ಗಂಟಾಗಿ ಪರಿಣಮಿಸಿದೆ. ಟಿ-20 ಕ್ರಿಕೆಟ್ ಮ್ಯಾಚ್ ನಷ್ಟೆ ರೋಚಕತೆ ಕೆರಳಿಸಿದ್ದು, ಕ್ಷಣಕ್ಕೊಂದು ತಿರುವು ಪಡೆದುಕೊಳ್ಳಲಾರಂಭಿಸಿದೆ! ಸಿಎಂ ಹುದ್ದೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ತಮ್ಮ ನಿಲುವಿಗೆ ಅಂಟಿಕೊಂಡಿರುವುದು, ವರಿಷ್ಠರಿಗೆ ತಲೆನೋವಾಗಿ ಪರಿಣಮಿಸಿದೆ. ಈಗಾಗಲೇ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್ ವರಿಷ್ಠರು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರ ಜೊತೆ ಪ್ರತ್ಯೇಕವಾಗಿ ಹಲವು ಸುತ್ತಿನ ಸಭೆ ನಡೆಸಿದ್ದಾರೆ. ಅಭಿಪ್ರಾಯ ಆಲಿಸಿದ್ದಾರೆ. ಜೊತೆಗೆ ಅಧಿಕಾರ ಹಂಚಿಕೆ ಸೂತ್ರಗಳನ್ನು ಮುಂದಿಟ್ಟಿದ್ದಾರೆ. ‘ಮೊದಲ ಅವಧಿಯ ಸಿಎಂ ಹುದ್ದೆ ತಮಗೆ ನೀಡಬೇಕು..’ ಎಂದು ಈ ಇಬ್ಬರೂ ನಾಯಕರು ಪಟ್ಟು ಹಿಡಿದಿದ್ದಾರೆ. ಯಾರೊಬ್ಬರು ತಮ್ಮ ನಿಲುವಿನಲ್ಲಿ ಬದಲಾವಣೆ ಮಾಡಿಕೊಳ್ಳುತ್ತಿಲ್ಲ. ಇದು ವರಿಷ್ಠರಿಗೆ ಕಗ್ಗಂಟಾಗಿ ಪರಿಣಮಿಸುವಂತೆ ಮಾಡಿದೆ. Previous post ಯಾರಾಗಲಿದ್ದಾರೆ ಸಿಎಂ..? : ಸಿದ್ದರಾಮಯ್ಯ – ಡಿ.ಕೆ.ಶಿವಕುಮಾರ್ ನಡುವೆ ಮುಂದುವರಿದ ಹಗ್ಗಜಗ್ಗಾಟ!
ಶಿವಮೊಗ್ಗ, ಮೇ 18: ರಾತ್ರಿ ವೇಳೆ ನಿರ್ಜನ ಪ್ರದೇಶಗಳಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಹಾಗೂ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪದ ಮೇರೆಗೆ, ಪೊಲೀಸರು 11 ಜನರನ್ನು ವಶಕ್ಕೆ ಪಡೆದ ಘಟನೆ ಗುರುವಾರ ರಾತ್ರಿ ಶಿವಮೊಗ್ಗ ನಗರದಲ್ಲಿ ನಡೆದಿದೆ. ತುಂಗಾ ನಗರ ಠಾಣೆ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಠಾಣಾ ವ್ಯಾಪ್ತಿಯ ಸೂಳೇಬೈಲು, ಮದಾರಿಪಾಳ್ಯ, ಎಂ.ಆರ್.ಎಸ್. ವೃತ್ತ, ಪ್ರಿಯಾಂಕ ಲೇಔಟ್, ವಡ್ಡಿನಕೊಪ್ಪ ಸುತ್ತಮುತ್ತಲಿನ ಸ್ಥಳಗಳಲ್ಲಿ ವಿಶೇಷ ಗಸ್ತು ನಡೆಸಲಾಗಿದೆ. ಒಟ್ಟಾರೆ 11 ಜನರನ್ನು ವಶಕ್ಕೆ ಪಡೆದು ಠಾಣೆಗೆ ಕರೆ ತಂದಿದ್ದಾರೆ. ಸದರಿ ವ್ಯಕ್ತಿಗಳ ಪೂರ್ವಾಪರ ಪರಿಶೀಲಿಸಿದ್ದಾರೆ. ಜೊತೆಗೆ 8 ಲಘು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. Next post ನಿರ್ಜನ ಪ್ರದೇಶಗಳಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದವರು ಪೊಲೀಸ್ ವಶಕ್ಕೆ!