ಶಿವಮೊಗ್ಗ, ಮೇ 18: ರಾತ್ರಿ ವೇಳೆ ನಿರ್ಜನ ಪ್ರದೇಶಗಳಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಹಾಗೂ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪದ ಮೇರೆಗೆ, ಪೊಲೀಸರು 11 ಜನರನ್ನು ವಶಕ್ಕೆ ಪಡೆದ ಘಟನೆ ಗುರುವಾರ ರಾತ್ರಿ ಶಿವಮೊಗ್ಗ ನಗರದಲ್ಲಿ ನಡೆದಿದೆ. ತುಂಗಾ ನಗರ ಠಾಣೆ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಠಾಣಾ ವ್ಯಾಪ್ತಿಯ ಸೂಳೇಬೈಲು, ಮದಾರಿಪಾಳ್ಯ, ಎಂ.ಆರ್.ಎಸ್. ವೃತ್ತ, ಪ್ರಿಯಾಂಕ ಲೇಔಟ್, ವಡ್ಡಿನಕೊಪ್ಪ ಸುತ್ತಮುತ್ತಲಿನ ಸ್ಥಳಗಳಲ್ಲಿ ವಿಶೇಷ ಗಸ್ತು ನಡೆಸಲಾಗಿದೆ. ಒಟ್ಟಾರೆ 11 ಜನರನ್ನು ವಶಕ್ಕೆ ಪಡೆದು ಠಾಣೆಗೆ ಕರೆ ತಂದಿದ್ದಾರೆ. ಸದರಿ ವ್ಯಕ್ತಿಗಳ ಪೂರ್ವಾಪರ ಪರಿಶೀಲಿಸಿದ್ದಾರೆ. ಜೊತೆಗೆ 8 ಲಘು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

ನಿರ್ಜನ ಪ್ರದೇಶಗಳಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದವರು ಪೊಲೀಸ್ ವಶಕ್ಕೆ!

ಶಿವಮೊಗ್ಗ, ಮೇ 18: ರಾತ್ರಿ ವೇಳೆ ನಿರ್ಜನ ಪ್ರದೇಶಗಳಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಹಾಗೂ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪದ ಮೇರೆಗೆ, 11 ಜನರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಬುಧವಾರ ರಾತ್ರಿ ಶಿವಮೊಗ್ಗ ನಗರದಲ್ಲಿ ನಡೆದಿದೆ.

ತುಂಗಾ ನಗರ ಠಾಣೆ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಠಾಣಾ ವ್ಯಾಪ್ತಿಯ ಸೂಳೇಬೈಲು, ಮದಾರಿಪಾಳ್ಯ, ಎಂ.ಆರ್.ಎಸ್. ವೃತ್ತ, ಪ್ರಿಯಾಂಕ ಲೇಔಟ್, ವಡ್ಡಿನಕೊಪ್ಪ ಸುತ್ತಮುತ್ತಲಿನ ಸ್ಥಳಗಳಲ್ಲಿ ವಿಶೇಷ ಗಸ್ತು ನಡೆಸಲಾಗಿದೆ.

ಒಟ್ಟಾರೆ 11 ಜನರನ್ನು ವಶಕ್ಕೆ ಪಡೆದು ಠಾಣೆಗೆ ಕರೆ ತಂದು, ಸದರಿ ವ್ಯಕ್ತಿಗಳ ಪೂರ್ವಾಪರ ಪರಿಶೀಲಿಸಿದ್ದಾರೆ. 8 ಲಘು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

ತೀರ್ಥಹಳ್ಳಿಯಲ್ಲಿ ಡಬ್ಬಲ್ ಮರ್ಡರ್ : ಕೂಲಿಕಾರ್ಮಿಕರಿಬ್ಬರ ಬರ್ಬರ ಹತ್ಯೆ! Previous post ತೀರ್ಥಹಳ್ಳಿಯಲ್ಲಿ ಡಬ್ಬಲ್ ಮರ್ಡರ್ : ಕೂಲಿ ಕಾರ್ಮಿಕರಿಬ್ಬರ ಬರ್ಬರ ಹತ್ಯೆ!
‘ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ’ : ಸಿದ್ದರಾಮಯ್ಯ ಹೇಳಿಕೆ Next post ‘ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ’ : ಸಿದ್ದರಾಮಯ್ಯ ಹೇಳಿಕೆ