
ಪ್ರಮಾಣ ವಚನ ಸ್ವೀಕಾರ : ಕಾಂಗ್ರೆಸ್ ಸರ್ಕಾರದ ಅಧಿಕಾರ!
ಬೆಂಗಳೂರು, ಮೇ 20: ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಹಾಗೂ 8 ಶಾಸಕರು ಸಚಿವರಾಗಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ರಾಜ್ಯದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ.
ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣ ವಚನ ಬೋಧಿಸಿದರು.
ಸಚಿವರಾದವರು: ಸಚಿವರಾಗಿ ಡಾ.ಜಿ.ಪರಮೇಶ್ವರ್, ಕೆ.ಹೆಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೋಳಿ, ಪ್ರಿಯಾಂಕ ಖರ್ಗೆ ಹಾಗೂ ಜಮೀರ್ ಅಹಮದ್ ಖಾನ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಶಾಸಕರಾಗಿದ್ದಾರೆ.
ಪ್ರಮುಖರು ಭಾಗಿ: ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ರಾಜಸ್ಥಾನ ಸಿಎಂ ಅಶೋಕ್ ಗಹ್ಲೋಟ್,
ಬಿಹಾರ ಸಿಎಂ ನಿತೀಶ್ ಕುಮಾರ್, ಛತ್ತೀಸ್ ಘಡ ಸಿಎಂ ಭೂಪೇಶ್ ಬಫೇಲ್, ಹಿಮಾಚಲ ಪ್ರದೇಶ ಸಿಎಂ ಸುಖೀಂದರ್ ಸಿಂಗ್, ಪುದುಚೇರಿ ಸಿಎಂ ರಂಗಸ್ವಾಮಿ, ಜಾರ್ಖಾಂಡ್ ಸಿಎಂ ಹೇಮಂತ್ ಸೋರೆನ್, ಮಾಜಿ ಸಿಎಂ ಫಾರೂಕ್ ಅಬ್ದುಲ್, ಮೆಹಬೂಬ ಮುಫ್ತಿ ಸೇರಿದಂತೆ ಗಣ್ಯರು ಭಾಗವಹಿಸಿದ್ದರು. ರಾಜ್ಯದ ವಿವಿಧೆಡೆಯಿಂದ ಸಾವಿರಾರು ಸಂಖ್ಯೆಯ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸಮಾರಂಭಕ್ಕೆ ಆಗಮಿಸಿದ್ದರು.
2 thoughts on “ಪ್ರಮಾಣ ವಚನ ಸ್ವೀಕಾರ : ಕಾಂಗ್ರೆಸ್ ಸರ್ಕಾರದ ಅಧಿಕಾರ!”
Comments are closed.
All D best Hon’ble Chief minister of Karnataka siddaramaiah very proud and very powerful person.
Namma Athy machina nayawantha,pramanika,dheryawntha, Karnatakada Holy Sri Maan shree Siddaramaiah Awargge Muqiya Manthriya Hardika Shubhashiegalu…..All the best