
ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ
ಶಿವಮೊಗ್ಗ, ಮೇ 20: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ, ಶಿವಮೊಗ್ಗ ನಗರದ ಗಾಡಿಕೊಪ್ಪದಲ್ಲಿ ಶನಿವಾರ ಸಂಜೆ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.
ಪಟಾಕಿ ಸಿಡಿಸಿ, ಸಾರ್ವಜನಿಕರಿಗೆ ಸಿಹಿ ವಿತರಣೆ ಮಾಡಿದ ಕಾರ್ಯಕರ್ತರು ಪಕ್ಷದ ನಾಯಕರ ಪರವಾಗಿ ಘೋಷಣೆ ಕೂಗಿ ಸಂತಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ನ ಉತ್ತರ ಬ್ಲಾಕ್ ನ ಅಧ್ಯಕ್ಷ ಗಿರೀಶ್ ಗಾಡಿಕೊಪ್ಪ,, ವಾರ್ಡ್ ಅಧ್ಯಕ್ಷ ಭೀಮಣ್ಣ, ಮುಖಂಡರಾದ ಮನೋಜ್, ಗಣೇಶ್, ದೇವರಾಜ್, ಚರಣ್, ಗಾಡಿಕೊಪ್ಪ ಬಸವರಾಜ್, ಜಯಣ್ಣ, ಕುಮಾರ್ ಸೇರಿದಂತೆ ಮೊದಲಾದವರಿದ್ದರು.