ಅತಿವೃಷ್ಟಿಯಿಂದ ತೊಂದರೆಗೆ ಒಳಗಾಗಬಹುದಾದ ಪ್ರದೇಶಗಳನ್ನು ಮೊದಲೇ ಗುರುತಿಸಿ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಮಂಗಳವಾರ ಪ್ರಕೃತಿ ವಿಕೋಪ ನಿರ್ವಹಣೆ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ವಿಡಿಯೋ ಕಾನ್ಫರೆನ್ಸ್ ಬಳಿಕ, ಶಿವಮೊಗ್ಗದ ಡಿಸಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸಭೆ ನಡೆಸಿ ಸಲಹೆ-ಸೂಚನೆಗಳನ್ನು ಅವರು ನೀಡಿದರು. ಮುಖ್ಯವಾಗಿ ನಗರ ಪ್ರದೇಶಗಳಲ್ಲಿ ಅತಿವೃಷ್ಟಿಯಿಂದ ನೀರು ನುಗ್ಗಬಹುದಾದ ತಗ್ಗು ಪ್ರದೇಶಗಳನ್ನು ಗುರುತಿಸಿ ಸೂಕ್ತ ಚರಂಡಿ ವ್ಯವಸ್ಥೆ ಇತ್ಯಾದಿ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು.

ಮಳೆಗಾಲ : ತಗ್ಗು ಪ್ರದೇಶಗಳು ಜಲಾವೃತವಾಗದಂತೆ ಮುನ್ನೆಚ್ಚರಿಕೆ ವಹಿಸಲು ಶಿವಮೊಗ್ಗ ಡಿಸಿ ಖಡಕ್ ಸೂಚನೆ!

ಶಿವಮೊಗ್ಗ/ಬೆಂಗಳೂರು, ಮೇ.24 : ಅತಿವೃಷ್ಟಿಯಿಂದ ತೊಂದರೆಗೆ ಒಳಗಾಗಬಹುದಾದ ಪ್ರದೇಶಗಳನ್ನು ಮೊದಲೇ ಗುರುತಿಸಿ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಮಂಗಳವಾರ ಪ್ರಕೃತಿ ವಿಕೋಪ ನಿರ್ವಹಣೆ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ವಿಡಿಯೋ ಕಾನ್ಫರೆನ್ಸ್ ಬಳಿಕ, ಶಿವಮೊಗ್ಗದ ಡಿಸಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸಭೆ ನಡೆಸಿ ಸಲಹೆ-ಸೂಚನೆಗಳನ್ನು ಅವರು ನೀಡಿದರು.

ಮುಖ್ಯವಾಗಿ ನಗರ ಪ್ರದೇಶಗಳಲ್ಲಿ ಅತಿವೃಷ್ಟಿಯಿಂದ ನೀರು ನುಗ್ಗಬಹುದಾದ ತಗ್ಗು ಪ್ರದೇಶಗಳನ್ನು ಗುರುತಿಸಿ ಸೂಕ್ತ ಚರಂಡಿ ವ್ಯವಸ್ಥೆ ಇತ್ಯಾದಿ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು.

ಎಲ್ಲಾ ಚರಂಡಿಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ ಕೃತಕ ನೆರೆ ಉಂಟಾಗದತೆ ಕ್ರಮ ಕೈಗೊಳ್ಳಬೇಕು. ಪ್ರಮುಖ ಕಾಲುವೆಗಳ ಹೂಳೆತ್ತುವ ಕಾರ್ಯವನ್ನು ಕೈಗೊಳ್ಳಬೇಕು ಎಂದು ಹೇಳಿದರು.

ಕಂಟ್ರೋಲ್ ರೂಂ: ಎಲ್ಲಾ ತಾಲೂಕುಗಳಲ್ಲಿ ಅತಿವೃಷ್ಟಿಗೆ ಸಂಬAಧಿಸಿದAತೆ ತುರ್ತು ನೆರವು, ಕ್ರಮಗೊಳ್ಳಲು ಅನುಕೂಲವಾಗುವಂತೆ 24×7 ನಿಯಂತ್ರಣ ಕೊಠಡಿಗಳನ್ನು ತಕ್ಷಣ ಆರಂಭಿಸಬೇಕು. ಅತಿ ಹೆಚ್ಚು ಮಳೆಯಾಗುವ ಕುರಿತಾದ ಮುನ್ಸೂಚನೆಗಳನ್ನು ಆಯಾ ಪ್ರದೇಶದ ಜನರಿಗೆ ಮೊದಲೇ ತಿಳಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಪ್ರವಾಹ ಪರಿಸ್ಥಿತಿಯಲ್ಲಿ ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಲು ಅಗ್ನಿಶಾಮಕ ದಳ, ಹೋಂಗಾರ್ಡ್ಗಳು ಸನ್ನದ್ಧ ಸ್ಥಿತಿಯಲ್ಲಿರಬೇಕು. ಎಲ್ಲಾ ತಾಲೂಕುಗಳಿಗೆ ಈಗಾಗಲೇ ರಕ್ಷಣಾ ಬೋಟ್‌ಗಳನ್ನು ನೀಡಲಾಗಿದ್ದು ಅವುಗಳ ಕಾರ್ಯಕ್ಷಮತೆಯನ್ನು ಪರಿಶೀಲಿಸಬೇಕು. ಅತಿವೃಷ್ಟಿಯಿಂದ ಯಾವುದೇ ಸಣ್ಣ ಅನಾಹುತವಾಗದಂತೆ ಗರಿಷ್ಟ ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.

ಸಾಂಕ್ರಾಮಿಕ ರೋಗ ತಡೆ: ಮಳೆಗಾಲದಲ್ಲಿ ಸಾಮಾನ್ಯವಾಗಿ ಕಾಣಿಸಿಕೊಳ್ಳುವ ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು. ಎಲ್ಲಾ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿ ದಾಸ್ತಾನು ಖಾತ್ರಿಪಡಿಸಬೇಕು. ಹಾವು ಕಡಿತದ ಇಂಜೆಕ್ಷನ್ ಲಭ್ಯವಿರುವಂತೆ ನೋಡಿಕೊಳ್ಳಬೇಕು. ಎಲ್ಲಾ ವೈದ್ಯಾಧಿಕಾರಿಗಳು ಕಡ್ಡಾಯವಾಗಿ ಆಸ್ಪತ್ರೆಗಳಲ್ಲಿ ಲಭ್ಯವಿರಬೇಕು ಎಂದು ಹೇಳಿದರು.

ಗಾಳಿ ಮಳೆಯಿಂದಾಗಿ ಮರಗಳು ಬಿದ್ದ ಸಂದರ್ಭದಲ್ಲಿ ತಕ್ಷಣ ಅವುಗಳನ್ನು ತೆರವುಗೊಳಿಸಿ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಬೇಕು. ರಸ್ತೆ ಸಂಪರ್ಕ ಕಡಿತವಾಗುವ ಸಂದರ್ಭದಲ್ಲಿ ಪರ್ಯಾಯ ಮಾರ್ಗಗಳನ್ನು ತಕ್ಷಣ ಕಲ್ಪಿಸಬೇಕು. ವಿದ್ಯುತ್ ಕಂಬಗಳು ಮತ್ತು ಟ್ರಾನ್ಸ್ಫಾರ್ಮರ್‌ಗಳು ಮುರಿದು ಬಿದ್ದಾಗ ತಕ್ಷಣ ಅವುಗಳನ್ನು ಬದಲಾಯಿಸಿ ವಿದ್ಯುತ್ ಸಂಪರ್ಕ ಪುನರಾರಂಭಿಸಲು ವ್ಯವಸ್ಥೆ ಮಾಡಬೇಕು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ, ಅಪರ ಜಿಲ್ಲಾಧಿಕಾರಿ ಎಸ್.ಎಸ್.ಬಿರಾದಾರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಡಿಸಿಗಳಿಗೆ ಸಿಎಂ ನೀಡಿದ ಸೂಚನೆಯೇನು?

ಮಂಗಳವಾರ ಪ್ರಕೃತಿ ವಿಕೋಪ ನಿರ್ವಹಣೆ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಎಲ್ಲ ಜಿಲ್ಲೆಗಳ ಡಿಸಿ, ಸಿಇಓಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಮಾಲೋಚನೆ ನಡೆಸಿದರು. ಅತಿವೃಷ್ಟಿಯಿಂದ ಅನಾಹುತ ಸಂಭವಿಸುವ ಮೊದಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು.

ಮಂಗಳವಾರ ಪ್ರಕೃತಿ ವಿಕೋಪ ನಿರ್ವಹಣೆ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಎಲ್ಲ ಜಿಲ್ಲೆಗಳ ಡಿಸಿ, ಸಿಇಓಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಮಾಲೋಚನೆ ನಡೆಸಿದರು. ಅತಿವೃಷ್ಟಿಯಿಂದ ಅನಾಹುತ ಸಂಭವಿಸುವ ಮೊದಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು.

ಅನಾಹುತ ಸಂಭವಿಸಬಹುದಾದ ಶಾಲಾ ಕೊಠಡಿಗಳು, ಸೇತುವೆಗಳನ್ನು ಗುರುತಿಸಿ ಪರ್ಯಾಯ ವ್ಯವಸ್ಥೆಗಳನ್ನು ಕಲ್ಪಿಬೇಕು. ಜಾನುವಾರು ಹಾನಿ ಮತ್ತು ಮಾನವ ಪ್ರಾಣ ಹಾನಿ ಸಂಭವಿಸಿದ ತಕ್ಷಣ ಸೂಕ್ತ ಪರಿಹಾರವನ್ನು ಒದಗಿಸಬೇಕು. ಪ್ರಕೃತಿ ವಿಕೋಪ ಕಾರ್ಯಗಳಿಗೆ ಸಾಕಷ್ಟು ಅನುದಾನ ಲಭ್ಯವಿದೆ ಎಂದು ಮುಖ್ಯಮಂತ್ರಿ ಅವರು ವಿಡಿಯೋ ಕಾನ್ಫರೆನ್ಸ್ನಲ್ಲಿ ಸೂಚನೆಗಳನ್ನು ಸಿಎಂ ನೀಡಿದ್ದಾರೆ.

ಶಿವಮೊಗ್ಗ, ಮೇ 23: ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ತೊರೆದಿದ್ದ ಕೆಲ ನಾಯಕರು, ಇದೀಗ ಆ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಸದ್ದುಗದ್ದಲವಿಲ್ಲದೆ ಮತ್ತೇ ‘ಕೈ’ ಹಿಡಿಯುವ ಕಸರತ್ತು ನಡೆಸಲಾರಂಭಿಸಿದ್ದಾರೆ. ಆದರೆ ಪಕ್ಷಾಂತರ ನಾಯಕರ ಪುನಾರಾಗಮನಕ್ಕೆ, ಕಾಂಗ್ರೆಸ್ ಮುಖಂಡರು ತೀವ್ರ ಆಕ್ಷೇಪ ವ್ಯಕ್ತಪಡಿಸಲಾರಂಭಿಸಿದ್ದಾರೆ! ಈ ಸಂಬಂಧ ಕಾಂಗ್ರೆಸ್ ಪಕ್ಷದ ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಮಧು ಕುಮಾರ್ ಅವರು ಮಂಗಳವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ‘ಇತ್ತೀಚೆಗೆ ಜೆಡಿಎಸ್ ಪಕ್ಷ ಸೇರ್ಪಡೆಯಾಗಿದ್ದ ಪಕ್ಷದ ಮುಖಂಡರನ್ನು ಯಾವುದೇ ಕಾರಣಕ್ಕೂ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಬಾರದು’ ಎಂದು ಪಕ್ಷದ ವರಿಷ್ಠರಿಗೆ ಆಗ್ರಹಿಸಿದ್ದಾರೆ. Previous post ಮತ್ತೇ ಕಾಂಗ್ರೆಸ್ ನತ್ತ ‘ಪಕ್ಷಾಂತರ’ ನಾಯಕರು : ಮರುಸೇರ್ಪಡೆಗೆ ಮುಖಂಡರ ಆಕ್ರೋಶ!
ಶಿವಮೊಗ್ಗ, ಮೇ 25: ಶಿವಮೊಗ್ಗ ನಗರದ ಫ್ಯಾಮಿಲಿ ಸಲೂನ್ – ಸ್ಪಾ ಕೇಂದ್ರದಲ್ಲಿ ನಡೆಯುತ್ತಿದ್ದ, ಹೈಟೆಕ್ ವೇಶ್ಯಾವಾಟಿಕೆ ದಂಧೆ ಬಯಲಿಗೆ ಬಂದಿದೆ. ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇರೆಗೆ, ಪತಿ-ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. 6 ಯುವತಿಯರನ್ನು ರಕ್ಷಿಸಿದ್ದಾರೆ. ಕುವೆಂಪು ರಸ್ತೆಯ ಕಟ್ಟಡವೊಂದರಲ್ಲಿ ನಡೆಯುತ್ತಿದ್ದ, ಫ್ಯಾಮಿಲಿ ಸಲೂನ್ ಮತ್ತು ಸ್ಪಾ ಕೇಂದ್ರದ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಖಚಿತ ವರ್ತಮಾನದ ಮೇರೆಗೆ ಪೊಲೀಸರು ಮೇ 24 ರಂದು ಈ ಕಾರ್ಯಾಚರಣೆ ನಡೆಸಿದ್ದಾರೆ. Next post ಫ್ಯಾಮಿಲಿ ಸಲೂನ್ – ಸ್ಪಾದಲ್ಲಿ ವೇಶ್ಯಾವಾಟಿಕೆ ದಂಧೆ : ದಂಪತಿ ಅರೆಸ್ಟ್ – 6 ಯುವತಿಯರ ರಕ್ಷಣೆ!