ಶಿವಮೊಗ್ಗ, ಮೇ 25: ಶಿವಮೊಗ್ಗ ನಗರದ ಫ್ಯಾಮಿಲಿ ಸಲೂನ್ – ಸ್ಪಾ ಕೇಂದ್ರದಲ್ಲಿ ನಡೆಯುತ್ತಿದ್ದ, ಹೈಟೆಕ್ ವೇಶ್ಯಾವಾಟಿಕೆ ದಂಧೆ ಬಯಲಿಗೆ ಬಂದಿದೆ. ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇರೆಗೆ, ಪತಿ-ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. 6 ಯುವತಿಯರನ್ನು ರಕ್ಷಿಸಿದ್ದಾರೆ. ಕುವೆಂಪು ರಸ್ತೆಯ ಕಟ್ಟಡವೊಂದರಲ್ಲಿ ನಡೆಯುತ್ತಿದ್ದ, ಫ್ಯಾಮಿಲಿ ಸಲೂನ್ ಮತ್ತು ಸ್ಪಾ ಕೇಂದ್ರದ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಖಚಿತ ವರ್ತಮಾನದ ಮೇರೆಗೆ ಪೊಲೀಸರು ಮೇ 24 ರಂದು ಈ ಕಾರ್ಯಾಚರಣೆ ನಡೆಸಿದ್ದಾರೆ.

ಫ್ಯಾಮಿಲಿ ಸಲೂನ್ – ಸ್ಪಾದಲ್ಲಿ ವೇಶ್ಯಾವಾಟಿಕೆ ದಂಧೆ : ದಂಪತಿ ಅರೆಸ್ಟ್ – 6 ಯುವತಿಯರ ರಕ್ಷಣೆ!

ಶಿವಮೊಗ್ಗ, ಮೇ 25: ಶಿವಮೊಗ್ಗ ನಗರದ ಫ್ಯಾಮಿಲಿ ಸಲೂನ್ – ಸ್ಪಾ ಕೇಂದ್ರವೊಂದರಲ್ಲಿ ನಡೆಯುತ್ತಿದ್ದ, ಹೈಟೆಕ್ ವೇಶ್ಯಾವಾಟಿಕೆ ದಂಧೆ ಬಯಲಿಗೆ ಬಂದಿದೆ. ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇರೆಗೆ, ಪತಿ-ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. 6 ಯುವತಿಯರನ್ನು ರಕ್ಷಿಸಿದ್ದಾರೆ.

ಈ ಕುರಿತಂತೆ ಗುರುವಾರ ಜಿಲ್ಲಾ ಪೊಲೀಸ್ ಇಲಾಖೆ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ, ದಾಳಿಯ ವಿವರ ನೀಡಿದೆ. ಖಚಿತ ವರ್ತಮಾನದ ಮೇರೆಗೆ ಮೇ 24 ರಂದು ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ತಿಳಿಸಿದೆ.

ಹೊರ ಊರಿನ ಯುವತಿಯರು: ಕುವೆಂಪು ರಸ್ತೆಯ ಕಟ್ಟಡವೊಂದರಲ್ಲಿ ನಡೆಯುತ್ತಿದ್ದ, ಫ್ಯಾಮಿಲಿ ಸಲೂನ್ ಮತ್ತು ಸ್ಪಾ ಕೇಂದ್ರದ ಮೇಲೆ ಪೊಲೀಸರು ಈ ದಾಳಿ ನಡೆಸಿದ್ದಾರೆ.

ಈ ವೇಳೆ ಸ್ಪಾದಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಬಯಲಿಗೆ ಬಂದಿದೆ. ಸ್ಪಾ ನಡೆಸುತ್ತಿದ್ದ ದಂಪತಿಯು, ಬೇರೆಡೆಯಿಂದ ಯುವತಿಯರನ್ನು ಕರೆಯಿಸಿ, ಹಣದ ಆಮಿಷ ತೋರ್ಪಡಿಸಿ ವೇಶ್ಯಾವಾಟಿಕೆಯಲ್ಲಿ ತೊಡಗಿಸಿದ್ದು ಬೆಳಕಿಗೆ ಬಂದಿದೆ.

ಡಿವೈಎಸ್ಪಿ ನೇತೃತ್ವ: ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಎಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಎಂ. ಸುರೇಶ್ ನೇತೃತ್ವದಲ್ಲಿ ಮಹಿಳಾ ಪೊಲೀಸ್ ಠಾಣೆ ಇನ್ಸ್’ಪೆಕ್ಟರ್ ಹಾಗೂ ಸಿಬ್ಬಂದಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ.

ಹೈಟೆಕ್ ದಂಧೆ: ಶಿವಮೊಗ್ಗದಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ಭಾರೀ ದೊಡ್ಡ ಮಟ್ಟದಲ್ಲಿ ನಡೆಯುತ್ತಿರುವ ಮಾಹಿತಿಗಳು ಸಾರ್ವಜನಿಕ ವಲಯದಿಂದ ಕೇಳಿಬರುತ್ತಿವೆ. ಇದೀಗ ಸಲೂನ್ – ಸ್ಪಾ ಕೇಂದ್ರದಲ್ಲಿ ನಡೆಯುತ್ತಿದ್ದ ದಂಧೆಯು ಪೊಲೀಸರ ತನಿಖೆಯಿಂದ ಬಯಲಿಗೆ ಬರುವಂತಾಗಿದೆ.

ಅತಿವೃಷ್ಟಿಯಿಂದ ತೊಂದರೆಗೆ ಒಳಗಾಗಬಹುದಾದ ಪ್ರದೇಶಗಳನ್ನು ಮೊದಲೇ ಗುರುತಿಸಿ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಮಂಗಳವಾರ ಪ್ರಕೃತಿ ವಿಕೋಪ ನಿರ್ವಹಣೆ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ವಿಡಿಯೋ ಕಾನ್ಫರೆನ್ಸ್ ಬಳಿಕ, ಶಿವಮೊಗ್ಗದ ಡಿಸಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸಭೆ ನಡೆಸಿ ಸಲಹೆ-ಸೂಚನೆಗಳನ್ನು ಅವರು ನೀಡಿದರು. ಮುಖ್ಯವಾಗಿ ನಗರ ಪ್ರದೇಶಗಳಲ್ಲಿ ಅತಿವೃಷ್ಟಿಯಿಂದ ನೀರು ನುಗ್ಗಬಹುದಾದ ತಗ್ಗು ಪ್ರದೇಶಗಳನ್ನು ಗುರುತಿಸಿ ಸೂಕ್ತ ಚರಂಡಿ ವ್ಯವಸ್ಥೆ ಇತ್ಯಾದಿ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. Previous post ಮಳೆಗಾಲ : ತಗ್ಗು ಪ್ರದೇಶಗಳು ಜಲಾವೃತವಾಗದಂತೆ ಮುನ್ನೆಚ್ಚರಿಕೆ ವಹಿಸಲು ಶಿವಮೊಗ್ಗ ಡಿಸಿ ಖಡಕ್ ಸೂಚನೆ!
ಶಿವಮೊಗ್ಗ, ಮೇ 25: ಶಿವಮೊಗ್ಗ ನಗರಕ್ಕೆ ಕುಡಿಯುವ ನೀರು ಪೂರೈಕೆಯಾಗುವ ಗಾಜನೂರಿನ ತುಂಗಾ ಜಲಾಶಯದಲ್ಲಿ ದಿನದಿಂದ ದಿನಕ್ಕೆ ನೀರಿನ ಸಂಗ್ರಹ ಪ್ರಮಾಣ ಕಡಿಮೆಯಾಗುತ್ತಿದೆ! ಇದರ ನೇರ ಪರಿಣಾಮ ಶಿವಮೊಗ್ಗ ನಗರದ ಕುಡಿಯುವ ನೀರು ಪೂರೈಕೆ ಮೇಲೆ ಬೀರಿದೆ. ಹೌದು. ಕಳೆದ ಕೆಲ ದಿನಗಳಿಂದ ನಗರದ ಹಲವೆಡೆ ಕುಡಿಯುವ ನೀರಿಗೆ ತೀವ್ರ ಸ್ವರೂಪದ ಹಾಹಾಕಾರ ಕಂಡುಬರಲಾರಂಭಿಸಿದೆ. ಕೆಲ ಪ್ರದೇಶಗಳಿಗೆ ಸಮರ್ಪಕವಾಗಿ ನೀರು ಪೂರೈಕೆಯಾಗುತ್ತಿಲ್ಲ.! Next post ತುಂಗಾ ಡ್ಯಾಂನಲ್ಲಿ ಕಡಿಮೆಯಾಗುತ್ತಿರುವ ನೀರಿನ ಸಂಗ್ರಹ : ಶಿವಮೊಗ್ಗದಲ್ಲಿ ಕುಡಿಯುವ ನೀರಿಗೆ ಶುರುವಾಗಿದೆ ಹಾಹಾಕಾರ!