ಶಿವಮೊಗ್ಗ, ಮೇ 25: ಶಿವಮೊಗ್ಗ ನಗರಕ್ಕೆ ಕುಡಿಯುವ ನೀರು ಪೂರೈಕೆಯಾಗುವ ಗಾಜನೂರಿನ ತುಂಗಾ ಜಲಾಶಯದಲ್ಲಿ ದಿನದಿಂದ ದಿನಕ್ಕೆ ನೀರಿನ ಸಂಗ್ರಹ ಪ್ರಮಾಣ ಕಡಿಮೆಯಾಗುತ್ತಿದೆ! ಇದರ ನೇರ ಪರಿಣಾಮ ಶಿವಮೊಗ್ಗ ನಗರದ ಕುಡಿಯುವ ನೀರು ಪೂರೈಕೆ ಮೇಲೆ ಬೀರಿದೆ. ಹೌದು. ಕಳೆದ ಕೆಲ ದಿನಗಳಿಂದ ನಗರದ ಹಲವೆಡೆ ಕುಡಿಯುವ ನೀರಿಗೆ ತೀವ್ರ ಸ್ವರೂಪದ ಹಾಹಾಕಾರ ಕಂಡುಬರಲಾರಂಭಿಸಿದೆ. ಕೆಲ ಪ್ರದೇಶಗಳಿಗೆ ಸಮರ್ಪಕವಾಗಿ ನೀರು ಪೂರೈಕೆಯಾಗುತ್ತಿಲ್ಲ.!

ತುಂಗಾ ಡ್ಯಾಂನಲ್ಲಿ ಕಡಿಮೆಯಾಗುತ್ತಿರುವ ನೀರಿನ ಸಂಗ್ರಹ : ಶಿವಮೊಗ್ಗದಲ್ಲಿ ಕುಡಿಯುವ ನೀರಿಗೆ ಶುರುವಾಗಿದೆ ಹಾಹಾಕಾರ!

ವರದಿ : ಬಿ. ರೇಣುಕೇಶ್

ಶಿವಮೊಗ್ಗ, ಮೇ 25: ಶಿವಮೊಗ್ಗ ನಗರಕ್ಕೆ ಕುಡಿಯುವ ನೀರು ಪೂರೈಕೆಯಾಗುವ ಗಾಜನೂರಿನ ತುಂಗಾ ಜಲಾಶಯದಲ್ಲಿ ದಿನದಿಂದ ದಿನಕ್ಕೆ ನೀರಿನ ಸಂಗ್ರಹ ಪ್ರಮಾಣ ಕಡಿಮೆಯಾಗುತ್ತಿದೆ!

ಇದರ ನೇರ ಪರಿಣಾಮ ಶಿವಮೊಗ್ಗ ನಗರದ ಕುಡಿಯುವ ನೀರು ಪೂರೈಕೆ ಮೇಲೆ ಬೀರಿದೆ. ಹೌದು. ಕಳೆದ ಕೆಲ ದಿನಗಳಿಂದ ನಗರದ ಹಲವೆಡೆ ಕುಡಿಯುವ ನೀರಿಗೆ ತೀವ್ರ ಸ್ವರೂಪದ ಹಾಹಾಕಾರ ಕಂಡುಬರಲಾರಂಭಿಸಿದೆ. ಕೆಲ ಪ್ರದೇಶಗಳಿಗೆ ಸಮರ್ಪಕವಾಗಿ ನೀರು ಪೂರೈಕೆಯಾಗುತ್ತಿಲ್ಲ.!

ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಹಿಂಗಾರು ಮಳೆಯಾಗಿಲ್ಲ. ಮತ್ತೊಂದೆಡೆ, ಬಿಸಿಲ ಬೇಗೆ ಹೆಚ್ಚಿದೆ. ಇದರಿಂದ ತುಂಗಾ ಡ್ಯಾಂನ ನೀರಿನ ಸಂಗ್ರಹ ಪ್ರಮಾಣ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ.

ಪ್ರತಿನಿತ್ಯ ಡ್ಯಾಂನಿಂದ, ಶಿವಮೊಗ್ಗ ನೀರು ಶುದ್ಧೀಕರಣ ಘಟಕಕ್ಕೆ ಪೂರೈಕೆಯಾಗುವ ನೀರಿನ ಪ್ರಮಾಣ ಕೂಡ ಕಡಿಮೆಯಾಗಲಾರಂಭಿಸಿದೆ. ಈ ಕಾರಣದಿಂದ ದೈನಂದಿನ ನೀರು ಪೂರೈಕೆ ಮೇಲೆ ಗಂಭೀರ ಪರಿಣಾಮ ಬೀರುವಂತಾಗಿದೆ.

‘ಎಲ್ಲವೂ ಮಳೆಯ ಮೇಲೆ ಅವಲಂಬಿತವಾಗಿದೆ. ಜಲಾನಯ ಪ್ರದೇಶದಲ್ಲಿ ಮಳೆಯಾಗಿ, ಡ್ಯಾಂನಲ್ಲಿ ನೀರಿನ ಸಂಗ್ರಹ ಪ್ರಮಾಣ ಹೆಚ್ಚಾದರೆ ನೀರು ಪೂರೈಕೆ ಸಹಜ ಸ್ಥಿತಿಗೆ ಮರಳಲಿದೆ. ಒಂದು ವೇಳೆ ಮಳೆಯಾಗದಿದ್ದರೆ,  ಮುಂದಿನ ದಿನಗಳಲ್ಲಿ ಶಿವಮೊಗ್ಗ ನಗರದ ಕುಡಿಯುವ ನೀರಿನ ಸಮಸ್ಯೆ ಮತ್ತಷ್ಟು ಉಲ್ಬಣಿಸಲಿದೆ. ಎರಡ್ಮೂರು ದಿನಕ್ಕೊಮ್ಮೆ ನೀರು ಪೂರೈಕೆ ಮಾಡುವಂತಹ ಸ್ಥಿತಿ ನಿರ್ಮಾಣವಾಗುವ ಸಾಧ್ಯತೆಯೂ ಅಲ್ಲಗಳೆಯುವಂತಿಲ್ಲ’ ಎಂದು ಜಲಮಂಡಳಿ ಮೂಲಗಳು ಹೇಳುತ್ತವೆ.

ತಲೆನೋವು: ಹಲವು ಬಡಾವಣೆಗಳಲ್ಲಿ ಸಮರ್ಪಕವಾಗಿ ನೀರು ಪೂರೈಕೆಯಾಗುತ್ತಿಲ್ಲ. ಕುಡಿಯುವ ನೀರು ಪೂರೈಕೆಯಲ್ಲಿನ ವ್ಯತ್ಯಯ ಸರಿಪಡಿಸುವಂತೆ ನಾಗರೀಕರು ಒತ್ತಾಯಿಸಲಾರಂಭಿಸಿದ್ದಾರೆ. ಇದು ಸ್ಥಳೀಯ ಜನಪ್ರತಿನಿಧಿಗಳಿಗೆ ಹಾಗೂ ಜಲ ಮಂಡಳಿ ಅಧಿಕಾರಿಗಳಿಗೆ ದೊಡ್ಡ ತಲೆನೋವಾಗಿ ಪರಿಣಮಿಸಲಾರಂಭಿಸಿದೆ.

ಸಂಪೂರ್ಣ ಅಸ್ತವ್ಯಸ್ತವಾಗಿರುವ 24*7 ಯೋಜನೆ..!

ಶಿವಮೊಗ್ಗ ನಗರದ ಜನಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ನೀರು ಬಳಕೆ ಪ್ರಮಾಣವೂ ಏರಿಕೆಯಾಗುತ್ತಿದೆ. ಆದರೆ ಇದಕ್ಕನುಗುಣವಾಗಿ ನೀರು ಪೂರೈಕೆ ವ್ಯವಸ್ಥೆಯಲ್ಲಿ ಸುಧಾರಣೆಗಳು ಕಂಡುಬರುತ್ತಿಲ್ಲ. ಸದ್ಯ ಶಿವಮೊಗ್ಗ ನಗರದಲ್ಲಿ ಅನುಷ್ಠಾನವಾಗುತ್ತಿರುವ 24*7 ಯೋಜನೆ ಅನುಷ್ಠಾನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಸಂಪೂರ್ಣ ಅಸ್ತವ್ಯಸ್ತವಾಗಿರುವ 24*7 ಯೋಜನೆ..!
ಶಿವಮೊಗ್ಗ ನಗರದ ಜನಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ನೀರು ಬಳಕೆ ಪ್ರಮಾಣವೂ ಏರಿಕೆಯಾಗುತ್ತಿದೆ. ಆದರೆ ಇದಕ್ಕನುಗುಣವಾಗಿ ನೀರು ಪೂರೈಕೆ ವ್ಯವಸ್ಥೆಯಲ್ಲಿ ಸುಧಾರಣೆಗಳು ಕಂಡುಬರುತ್ತಿಲ್ಲ. ಸದ್ಯ ಶಿವಮೊಗ್ಗ ನಗರದಲ್ಲಿ ಅನುಷ್ಠಾನವಾಗುತ್ತಿರುವ 24*7 ಯೋಜನೆ ಅನುಷ್ಠಾನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇನ್ನೂ ಹಲವೆಡೆ ಕಾಮಗಾರಿ ಪೂರ್ಣಗೊಂಡಿಲ್ಲ. ಆಮೇ ವೇಗದಲ್ಲಿ ಸಾಗುತ್ತಿದೆ. ಹೊಸ ಟ್ಯಾಂಕ್ ಗಳಿಗೆ ಸಂಪರ್ಕ ಕಲ್ಪಿಸಿ ನೀರು ಪೂರೈಕೆ ಕೆಲಸವಾಗುತ್ತಿಲ್ಲ. ಹಳೇಯ ವ್ಯವಸ್ಥೆಯಲ್ಲಿ ವ್ಯರ್ಥವಾಗುತ್ತಿರುವ ನೀರಿಗೆ ಕಡಿವಾಣ ಬಿದ್ದಿಲ್ಲ. ಇದರಿಂದ ವರ್ಷದಿಂದ ವರ್ಷಕ್ಕೆ ನೀರಿನ ಹಾಹಾಕಾರ ಪ್ರಮಾಣ ಹೆಚ್ಚಾಗಲಾರಂಭಿಸಿದೆ ಎಂದು ಪ್ರಜ್ಞಾವಂತ ನಾಗರೀಕರು ದೂರುತ್ತಾರೆ.

ಇನ್ನೂ ಹಲವೆಡೆ ಕಾಮಗಾರಿ ಪೂರ್ಣಗೊಂಡಿಲ್ಲ. ಆಮೇ ವೇಗದಲ್ಲಿ ಸಾಗುತ್ತಿದೆ. ಹೊಸ ಟ್ಯಾಂಕ್ ಗಳಿಗೆ ಸಂಪರ್ಕ ಕಲ್ಪಿಸಿ ನೀರು ಪೂರೈಕೆ ಕೆಲಸವಾಗುತ್ತಿಲ್ಲ. ಹಳೇಯ ವ್ಯವಸ್ಥೆಯಲ್ಲಿ ವ್ಯರ್ಥವಾಗುತ್ತಿರುವ ನೀರಿಗೆ ಕಡಿವಾಣ ಬಿದ್ದಿಲ್ಲ. ಇದರಿಂದ ವರ್ಷದಿಂದ ವರ್ಷಕ್ಕೆ ನೀರಿನ ಹಾಹಾಕಾರ ಪ್ರಮಾಣ ಹೆಚ್ಚಾಗಲಾರಂಭಿಸಿದೆ ಎಂದು ಪ್ರಜ್ಞಾವಂತ ನಾಗರೀಕರು ದೂರುತ್ತಾರೆ.

ಅಗತ್ಯವಿದೆ ಹೊಸ ಪಂಪ್ ಹೌಸ್

ಶಿವಮೊಗ್ಗ ನಗರದ ಜನಸಂಖ್ಯೆ, ನೀರಿನ ಬಳಕೆಗೆ ಅನುಗುಣವಾಗಿ ನೀರು ಶುದ್ದೀಕರಣ ಘಟಕ ಮೇಲ್ದರ್ಜೆಗೇರಿಸುವ ಅಗತ್ಯವಿದೆ. ಜೊತೆಗೆ ತುಂಗಾ ಜಲಾಶಯದಿಂದ ಶುದ್ದೀಕರಣಕ್ಕೆ ಘಟಕಕ್ಕೆ ನೀರು ಪೂರೈಕೆ ಮಾಡುವ

ಅಗತ್ಯವಿದೆ ಹೊಸ ಪಂಪ್ ಹೌಸ್ 
*** ಶಿವಮೊಗ್ಗ ನಗರದ ಜನಸಂಖ್ಯೆ, ನೀರಿನ ಬಳಕೆಗೆ ಅನುಗುಣವಾಗಿ ನೀರು ಶುದ್ದೀಕರಣ ಘಟಕ ಮೇಲ್ದರ್ಜೆಗೇರಿಸುವ ಅಗತ್ಯವಿದೆ. ಜೊತೆಗೆ ತುಂಗಾ ಜಲಾಶಯದಿಂದ ಶುದ್ದೀಕರಣಕ್ಕೆ ಘಟಕಕ್ಕೆ ನೀರು ಪೂರೈಕೆ ಮಾಡುವ ವ್ಯವಸ್ಥೆಯಲ್ಲಿಯೂ ಆಮೂಲಾಗ್ರ ಸುಧಾರಣೆಯಾಗಬೇಕಾಗಿದೆ. ಹೆಚ್ಚಿನ ಸಾಮರ್ಥ್ಯದ ಮೋಟಾರ್ ಅಳವಡಿಕೆ, ನವೀನ ತಂತ್ರಜ್ಞಾನಗಳ ಅಳವಡಿಕೆ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಆದ್ಯ ಗಮನಹರಿಸಬೇಕಾಗಿದೆ ಎಂದು ಪ್ರಜ್ಞಾವಂತ ನಾಗರೀಕರು ಆಗ್ರಹಿಸುತ್ತಾರೆ.

ವ್ಯವಸ್ಥೆಯಲ್ಲಿಯೂ ಆಮೂಲಾಗ್ರ ಸುಧಾರಣೆಯಾಗಬೇಕಾಗಿದೆ. ಹೆಚ್ಚಿನ ಸಾಮರ್ಥ್ಯದ ಮೋಟಾರ್ ಅಳವಡಿಕೆ, ನವೀನ ತಂತ್ರಜ್ಞಾನಗಳ ಅಳವಡಿಕೆ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಆದ್ಯ ಗಮನಹರಿಸಬೇಕಾಗಿದೆ ಎಂದು ಪ್ರಜ್ಞಾವಂತ ನಾಗರೀಕರು ಆಗ್ರಹಿಸುತ್ತಾರೆ.

One thought on “ತುಂಗಾ ಡ್ಯಾಂನಲ್ಲಿ ಕಡಿಮೆಯಾಗುತ್ತಿರುವ ನೀರಿನ ಸಂಗ್ರಹ : ಶಿವಮೊಗ್ಗದಲ್ಲಿ ಕುಡಿಯುವ ನೀರಿಗೆ ಶುರುವಾಗಿದೆ ಹಾಹಾಕಾರ!

  1. ತುಂಗಾ ಡ್ಯಾಮ್ನಲ್ಲಿ ಬೋಟಿಂಗ್ ಶುರು ಮಾಡಿದ್ದು ಕುಡಿಯುವ ನೀರು ಹಾಳಾಗುತ್ತಿದೆ

Comments are closed.

ಶಿವಮೊಗ್ಗ, ಮೇ 25: ಶಿವಮೊಗ್ಗ ನಗರದ ಫ್ಯಾಮಿಲಿ ಸಲೂನ್ – ಸ್ಪಾ ಕೇಂದ್ರದಲ್ಲಿ ನಡೆಯುತ್ತಿದ್ದ, ಹೈಟೆಕ್ ವೇಶ್ಯಾವಾಟಿಕೆ ದಂಧೆ ಬಯಲಿಗೆ ಬಂದಿದೆ. ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇರೆಗೆ, ಪತಿ-ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. 6 ಯುವತಿಯರನ್ನು ರಕ್ಷಿಸಿದ್ದಾರೆ. ಕುವೆಂಪು ರಸ್ತೆಯ ಕಟ್ಟಡವೊಂದರಲ್ಲಿ ನಡೆಯುತ್ತಿದ್ದ, ಫ್ಯಾಮಿಲಿ ಸಲೂನ್ ಮತ್ತು ಸ್ಪಾ ಕೇಂದ್ರದ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಖಚಿತ ವರ್ತಮಾನದ ಮೇರೆಗೆ ಪೊಲೀಸರು ಮೇ 24 ರಂದು ಈ ಕಾರ್ಯಾಚರಣೆ ನಡೆಸಿದ್ದಾರೆ. Previous post ಫ್ಯಾಮಿಲಿ ಸಲೂನ್ – ಸ್ಪಾದಲ್ಲಿ ವೇಶ್ಯಾವಾಟಿಕೆ ದಂಧೆ : ದಂಪತಿ ಅರೆಸ್ಟ್ – 6 ಯುವತಿಯರ ರಕ್ಷಣೆ!
ಶಿವಮೊಗ್ಗ, ಮೇ 25: ರೈಲ್ವೆ ಎಂಜಿನ್ ಹಾಗೂ ಬೋಗಿ ನಡುವೆ ಸಂಪರ್ಕದ ಕೊಂಡಿ ಕಳಚಿ, ಬೋಗಿಗಳನ್ನು ಬಿಟ್ಟು ಎಂಜಿನ್ ಮುಂದಕ್ಕೆ ಚಲಿಸಿದ ವಿಲಕ್ಷಣ ಘಟನೆ, ಭದ್ರಾವತಿ ತಾಲೂಕು ಕಡದಕಟ್ಟೆ ರೈಲ್ವೆ ಲೆವೆಲ್ ಕ್ರಾಸಿಂಗ್ ಸಮೀಪದ ಬಿಳಕಿ ಪ್ರದೇಶದ ಬಳಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ತಾಳಗುಪ್ಪ – ಬೆಂಗಳೂರು ನಡುವೆ ಸಂಚರಿಸುವ ಇಂಟರ್ ಸಿಟಿ ಎಕ್ಸ್’ಪ್ರೆಸ್ ರೈಲು, ಎಂಜಿನ್ – ಬೋಗಿಗಳ ನಡುವೆ ಸಂಪರ್ಕ ಕಳೆದುಕೊಂಡ ರೈಲಾಗಿದೆ. ಈ ಘಟನೆಯಿಂದ ಕೆಲ ಸಮಯ ಪ್ರಯಾಣಿಕರು ಗೊಂದಲಕ್ಕೊಳಗಾಗಿದ್ದರು. ತಾಳಗುಪ್ಪದಿಂದ ಶಿವಮೊಗ್ಗ ಮುಖ್ಯ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ್ದ ಸದರಿ ರೈಲು, ಬೆಳಿಗ್ಗೆ 7 ಗಂಟೆ 5 ನಿಮಿಷಕ್ಕೆ ಭದ್ರಾವತಿ ನಿಲ್ದಾಣದತ್ತ ಪ್ರಯಾಣ ಬೆಳೆಸಿತ್ತು. ಬಿಳಕಿ ಸಮೀಪ ಏಕಾಏಕಿ ರೈಲ್ವೆ ಎಂಜಿನ್ ಬೋಗಿಗಳ ಬಿಟ್ಟು ಮುಂದಕ್ಕೆ ಚಲಿಸಿದೆ. ಕೊಂಚ ದೂರ ಕ್ರಮಿಸಿದ ನಂತರ ಎಂಜಿನ್ ನನ್ನು, ಲೋಕೋ ಪೈಲೆಟ್ ನಿಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. Next post ರೈಲ್ವೆ ಎಂಜಿನ್ – ಬೋಗಿಗಳ ನಡುವೆ ತಪ್ಪಿದ ಸಂಪರ್ಕ..! ಬೋಗಿಗಳನ್ನೇ ಬಿಟ್ಟು ಮುಂದಕ್ಕೆ ಚಲಿಸಿದ ರೈಲ್ವೆ ಎಂಜಿನ್..!!