ಬೆಂಗಳೂರು/ಶಿವಮೊಗ್ಗ, ಮೇ 29: ಸರ್ಕಾರದ 2023-24 ನೇ ಸಾಲಿನ ಶೈಕ್ಷಣಿಕ ಮಾರ್ಗಸೂಚಿಯಂತೆ, ಮೇ 31 ರ ಬುಧವಾರದಿಂದ ರಾಜ್ಯಾದ್ಯಂತ ಶಾಲೆಗಳು ಆರಂಭಗೊಳ್ಳಲಿವೆ. ಈ ಹಿನ್ನೆಲೆಯಲ್ಲಿ ಮೇ 29 ರಿಂದಲೇ ಶಾಲೆಗಳ ಆರಂಭದ ಪೂರ್ವಭಾವಿ ಸಿದ್ದತೆಗಳು ನಡೆಯಲಾರಂಭಿಸಿವೆ. ‘ಮೇ 31 ರಂದು ಮಕ್ಕಳಿಗೆ ಸಿಹಿ ವಿತರಣೆ ಮಾಡುವ ಮೂಲಕ ಶಾಲೆಗಳಿಗೆ ಬರ ಮಾಡಿಕೊಳ್ಳಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.

ಮೇ 31 ರಿಂದ ಶಾಲೆಗಳು ಆರಂಭ : ಮಕ್ಕಳಿಗೆ ಸಿಹಿ ವಿತರಣೆ ಮೂಲಕ ಸ್ವಾಗತ –  ಶಿಕ್ಷಣ ಸಚಿವ ಮಧು ಬಂಗಾರಪ್ಪ

ಬೆಂಗಳೂರು/ಶಿವಮೊಗ್ಗ, ಮೇ 29: ಸರ್ಕಾರದ 2023-24 ನೇ ಸಾಲಿನ ಶೈಕ್ಷಣಿಕ ಮಾರ್ಗಸೂಚಿಯಂತೆ, ಮೇ 31 ರ ಬುಧವಾರದಿಂದ ರಾಜ್ಯಾದ್ಯಂತ ಶಾಲೆಗಳು ಆರಂಭಗೊಳ್ಳಲಿವೆ. ಈ ಹಿನ್ನೆಲೆಯಲ್ಲಿ ಮೇ 29 ರಿಂದಲೇ ಶಾಲೆಗಳ ಆರಂಭದ ಪೂರ್ವಭಾವಿ ಸಿದ್ದತೆಗಳು ನಡೆಯಲಾರಂಭಿಸಿವೆ.

‘ಮೇ 31 ರಂದು ಮಕ್ಕಳಿಗೆ ಸಿಹಿ ವಿತರಣೆ ಮಾಡುವ ಮೂಲಕ ಶಾಲೆಗಳಿಗೆ ಬರ ಮಾಡಿಕೊಳ್ಳಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.

ಶಿಕ್ಷಣ ಸಚಿವರಾಗಿ ನಿಯೋಜನೆ ಮಾಡಲಾಗಿರುವ ಕುರಿತಂತೆ ಸರ್ಕಾರದಿಂದ ಅಧಿಕೃತ ಆದೇಶ ಹೊರಬೀಳುತ್ತಿದ್ದಂತೆ, ಸೋಮವಾರ ಮಧು ಬಂಗಾರಪ್ಪರವರು ತಮ್ಮ ಫೇಸ್’ಬುಕ್ ಖಾತೆಯಲ್ಲಿ ಶಾಲೆಗಳ ಕಾರ್ಯಾರಂಭದ ಬಗ್ಗೆ ಹಾಕಿರುವ ಮೊದಲ ಸಂದೇಶದಲ್ಲಿ ಈ ವಿಷಯ ತಿಳಿಸಿದ್ದಾರೆ.

‘ಶಾಲೆಗಳ ಆರಂಭಕ್ಕೆ ಸಂಬಂಧಿಸಿದ ಪೂರಕ ಸಿದ್ದತೆಗಳು ಇಂದಿನಿಂದ ಆರಂಭವಾಗಲಿದೆ. ಶಾಲೆಯತ್ತ ಹೆಜ್ಜೆ ಹಾಕುತ್ತಿರುವ ಎಲ್ಲ ಮಕ್ಕಳಿಗೆ ಶುಭ ಕೋರುತ್ತೆನೆ. ಆರೋಗ್ಯಕರ ವಾತಾವರಣದಲ್ಲಿ ಖುಷಿಯ ಕಲಿಕೆ ನಿಮ್ಮದಾಗಲಿ. ಮಾದರಿ ಶಿಕ್ಷಣ ವ್ಯವಸ್ಥೆಗೆ ಶಿಕ್ಷಕರ, ಪೋಷಕರ ಹಾಗೂ ಕನ್ನಡಿಗರ ಸಹಕಾರವಿರಲಿ’ ಎಂದು ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.

One thought on “ಮೇ 31 ರಿಂದ ಶಾಲೆಗಳು ಆರಂಭ : ಮಕ್ಕಳಿಗೆ ಸಿಹಿ ವಿತರಣೆ ಮೂಲಕ ಸ್ವಾಗತ –  ಶಿಕ್ಷಣ ಸಚಿವ ಮಧು ಬಂಗಾರಪ್ಪ

  1. Work hard help poor children never show ego do field work more, success is yours. All the best 👍

    Your welwisher

Comments are closed.

ಶಿವಮೊಗ್ಗ, ಮೇ 28: ಶಿವಮೊಗ್ಗ ನಗರದ ಹೊರವಲಯ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹ (ಸೆಂಟ್ರಲ್ ಜೈಲ್) ದ ಮೇಲೆ ಕಳೆದ ಏಪ್ರಿಲ್ ತಿಂಗಳು ಎಸ್ಪಿ ನೇತೃತ್ವದ ಪೊಲೀಸ್ ತಂಡ ದಿಢೀರ್ ದಾಳಿ ನಡೆಸಿ ತಪಾಸಣೆ ನಡೆಸಿತ್ತು. ಇದೀಗ ಮತ್ತೊಮ್ಮೆ ಸೆಂಟ್ರಲ್ ಜೈಲ್ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಭಾರೀ ದೊಡ್ಡ ಸಂಖ್ಯೆಯ ಪೊಲೀಸರು, ಭಾನುವಾರ ಬೆಳಿಗ್ಗೆ ಕಾರಾಗೃಹದ ಪ್ರತಿಯೊಂದು ಸೆಲ್ ತಪಾಸಣೆ ನಡೆಸಿದ್ದಾರೆ. ಎಸ್ಪಿ ಜಿ.ಕೆ.ಮಿಥುನ್ ಕುಮಾರ್, ಎಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ ಮಾರ್ಗದರ್ಶನದಲ್ಲಿ ಪ್ರೊಬೇಷನರಿ ಐಪಿಎಸ್ ಅಧಿಕಾರಿ ಕೆ.ಬಿಂಧುಮಣಿ, ಡಿವೈಎಸ್ಪಿ ಬಾಲರಾಜ್ ನೇತೃತ್ವದಲ್ಲಿ ವಿವಿಧ ಠಾಣೆಗಳ ಇನ್ಸ್’ಪೆಕ್ಟರ್, ಪಿಎಸ್ಐ ಹಾಗೂ ಸಿಬ್ಬಂದಿಗಳ ತಂಡ ತಪಾಸಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿತ್ತು. Previous post ಶಿವಮೊಗ್ಗ ಸೆಂಟ್ರಲ್ ಜೈಲ್ ಮೇಲೆ ಮತ್ತೆ ಪೊಲೀಸ್ ರೈಡ್..!
ಮೇ 31 ರಂದು ಶಿವಮೊಗ್ಗ ನಗರದಲ್ಲಿ ಉದ್ಯೋಗ ಮೇಳ Next post ಮೇ 31 ರಂದು ಶಿವಮೊಗ್ಗ ನಗರದಲ್ಲಿ ಉದ್ಯೋಗ ಮೇಳ