
ಶಿವಮೊಗ್ಗ ಜಿಲ್ಲೆಯ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ
ಶಿವಮೊಗ್ಗ, ಮೇ 30: 2023-24 ನೇ ಸಾಲಿಗೆ ಶಿವಮೊಗ್ಗ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಹಾಗೂ ಶಿಕ್ಷಣ ಇಲಾಖೆಯ ಮಾರ್ಗಸೂಚಿ ಹಾಗೂ ವಿದ್ಯಾರ್ಹತೆಗಳನ್ವಯ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಶ್ರೀ ನಾರಾಯಣ ಗುರು/ಅಟಲ್ ಬಿಹಾರಿ ವಾಜಪೇಯಿ/ಶ್ರೀಮತಿ ಇಂದಿರಾ ಗಾಂಧಿ/ಡಾ||ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಲ್ಲಿ ಖಾಲಿ ಇರುವ ವಿಷಯವಾರು ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನೇರವಾಗಿ ಆಯಾ ವಸತಿ ಶಾಲೆಗೆ ಜೂ.05 ರೊಳಗಾಗಿ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಸೂಚಿಸಿದೆ. ಅತಿಥಿ ಶಿಕ್ಷಕರಿಗೆ ಮಾಸಿಕ ಗೌರವಧನ ಸರ್ಕಾರದಿಂದ ರೂ.16650/- ನಿಗದಿಯಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಶಿವಮೊಗ್ಗ ಹಾಗೂ ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಶ್ರೀ ನಾರಾಯಣ ಗುರು/ಅಟಲ್ ಬಿಹಾರಿ ವಾಜಪೇಯಿ/ಶ್ರೀಮತಿ ಇಂದಿರಾ ಗಾಂಧಿ/ಡಾ||ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಲ್ಲಿ ಕಚೇರಿ ವೇಳೆ ಸಂಪರ್ಕಿಸಬಹುದೆಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.