‘ಕಾಂಗ್ರೆಸ್ ಪಕ್ಷ ನೀಡಿದ್ದ ಭರವಸೆಯಂತೆ, ನಿರುದ್ಯೋಗಿ ಯುವಕರಿಗೆ ಕೆಲವೇ ದಿನಗಳಲ್ಲಿ ನಿರುದ್ಯೋಗ ಭತ್ಯೆ ನೀಡುವ ಪ್ರಕ್ರಿಯೆ ಪ್ರಾರಂಭವಾಗಲಿದೆ’ ಎಂದು ಯುವ ಕಾಂಗ್ರೆಸ್ ರಾಜ್ಯ ಮುಖಂಡ ಮೃಣಾಲ್ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಶಿವಮೊಗ್ಗ ನಗರದ ಜಿಲ್ಲಾ ಎನ್.ಎಸ್.ಯು.ಐ. ಕಚೇರಿಗೆ ಮಂಗಳವಾರ ಭೇಟಿ ನೀಡಿದ್ದ ವೇಳೆ ಕಾರ್ಯಕರ್ತನುದ್ದೇಶಿಸಿ ಅವರು ಮಾತನಾಡಿದರು.

ಕೆಲವೇ ದಿನಗಳಲ್ಲಿ ‘ನಿರುದ್ಯೋಗ ಭತ್ಯೆ’ ಘೋಷಣೆ ಜಾರಿ – ಯುವ ಕಾಂಗ್ರೆಸ್‍ ರಾಜ್ಯ ಮುಖಂಡ ಮೃಣಾಲ್ ಹೆಬ್ಬಾಳ್ಕರ್

ಶಿವಮೊಗ್ಗ, ಮೇ 30: ‘ಕಾಂಗ್ರೆಸ್ ಪಕ್ಷ ನೀಡಿದ್ದ ಭರವಸೆಯಂತೆ, ನಿರುದ್ಯೋಗಿ ಯುವಕರಿಗೆ ಕೆಲವೇ ದಿನಗಳಲ್ಲಿ ನಿರುದ್ಯೋಗ ಭತ್ಯೆ ನೀಡುವ ಪ್ರಕ್ರಿಯೆ ಪ್ರಾರಂಭವಾಗಲಿದೆ’ ಎಂದು ಯುವ ಕಾಂಗ್ರೆಸ್‍ ರಾಜ್ಯ ಮುಖಂಡ ಮೃಣಾಲ್ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಶಿವಮೊಗ್ಗ ನಗರದ ಜಿಲ್ಲಾ ಎನ್.ಎಸ್.ಯು.ಐ. ಕಚೇರಿಗೆ ಮಂಗಳವಾರ ಭೇಟಿ ನೀಡಿದ್ದ ವೇಳೆ ಕಾರ್ಯಕರ್ತನುದ್ದೇಶಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ್ದ ಗ್ಯಾರಂಟಿಯಂತೆ, ಕೆಲವೇ ದಿನಗಳಲ್ಲಿ ಪದವೀಧರರಿಗೆ ನಿರುದ್ಯೋಗ ಭತ್ಯೆ ನೀಡಲಾಗುವುದು. ಇದರಿಂದ ಯುವ ಸಮೂಹ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಅನುಕೂಲವಾಗಲಿದೆ ಎಂದರು.

ಕೇಂದ್ರ ಸರ್ಕಾರದ ದುರಾಡಳಿತ ನೋಡಿ, ಯುವಕರು ಕಾಂಗ್ರೆಸ್ ಪರ ವಾಲುತ್ತಿದ್ದಾರೆ. ಇದು ಹರ್ಷದ ಸಂಗತಿ. ಮುಂದಿನ ದಿನಗಳಲ್ಲಿ ಇನ್ನಷ್ಟು ಯುವಕರು ಕಾಂಗ್ರೆಸ್ ಪರವಾಗಿ ಸಂಘಟಿತರಾಗಲಿದ್ದಾರೆ. ಈ ನಿಟ್ಟಿನಲ್ಲಿ ಎನ್.ಎಸ್.ಯು.ಐ. ಕಾರ್ಯಕರ್ತರು ಶ್ರಮಿಸಬೇಕು ಎಂದು ಕರೆ ನೀಡಿದರು.

ಕಾಂಗ್ರೆಸ್ ಎಂದಿಗೂ ಜನಪರ, ಬಡವರ ಪರ ಸರ್ಕಾರ, ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರ ಜನರಿಗೆ ನೀಡಿದ್ದ ಎಲ್ಲಾ ಭರವಸೆಗಳನ್ನೂ ಈಡೇರಿಸಲಿದೆ. ರಾಜ್ಯದಲ್ಲಿ ಹೆಚ್ಚು ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಕೆಲಸ ಮಾಡುವ ವಿಶ್ವಾಸವಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಎನ್.ಎಸ್.ಯು.ಐ. ಜಿಲ್ಲಾಧ್ಯಕ್ಷ ವಿಜಯ, ಗ್ರಾಮಾಂತರ ಅಧ್ಯಕ್ಷ ಹರ್ಷಿತ್, ಜಿಲ್ಲಾ ಪ್ರಮುಖರಾದ ಎಸ್.ಪಿ. ದಿನೇಶ್, ವಿಶ್ವನಾಥ್ ಕಾಶಿ, ಸೌತ್ ಬ್ಲಾಕ್ ಕಾಂಗ್ರೆಸ್‍ನ ಅಧ್ಯಕ್ಷ ಕಲೀಮ್ ಪಾಷ, ಯುವ ಕಾಂಗ್ರೆಸ್‍ನ ರಾಜ್ಯ ಪ್ರಧಾನ ಕಾರ್ಯದರ್ಶಿ ಚೇತನ್, ಯುವ ಮುಖಂಡ ಮಧುಸೂದನ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ಇದೇ ಸಂದರ್ಭದಲ್ಲಿ ಮೃಣಾಲ್ ಹೆಬ್ಬಾಳ್ಕರ್ ಅವರನ್ನು ಜಿಲ್ಲಾ ಎನ್.ಎಸ್.ಯು.ಐ.ನಿಂದ ಸನ್ಮಾನಿಸಿಸಲಾಯಿತು.

Previous post ಶಿವಮೊಗ್ಗ ಜಿಲ್ಲೆಯ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ
ಶಿವಮೊಗ್ಗ, ಮೇ 30: ಮನೆಯೊಂದರಲ್ಲಿ ನಡೆದಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಪ್ರಕರಣವೊಂದನ್ನು, ಶಿವಮೊಗ್ಗದ ತುಂಗಾನಗರ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದಾರೆ. ಕಳವು ಆರೋಪದ ಮೇರೆಗೆ ಮನೆಯ ಸೊಸೆ ಹಾಗೂ ಯುವಕನೋರ್ವನನ್ನು ಬಂಧಿಸಿದ್ದಾರೆ! ಹೇಮಾವತಿ ಆರ್ (23) ಹಾಗೂ ಸತೀಶ್ (22) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ. ಇವರಿಂದ 4.30 ಲಕ್ಷ ರೂ. ಮೌಲ್ಯದ 90 ಗ್ರಾಂ ತೂಕದ ಬಂಗಾರದ ಆಭರಣ ಹಾಗೂ 2050 ನಗದನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. Next post ಚಿನ್ನಾಭರಣ ಕಳವು ಮಾಡಿದ್ದ ಸೊಸೆ ಸೇರಿದಂತೆ ಇಬ್ಬರು ಅರೆಸ್ಟ್..!