ಶಿವಮೊಗ್ಗ, ಜೂ. 2: ಮಳೆಗಾಲ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಮಳೆ ಹಾನಿ ತಡೆಗೆ ಅಗತ್ಯ ಕ್ರಮಕೈಗೊಳ್ಳುವಂತೆ, ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಆದರೆ ಇದೀಗ ಅವರೇ ಹೊರಡಿಸಿರುವ ಆದೇಶದಿಂದ, ಮಳೆ ಹಾನಿ ಸಂಬಂಧಿತ ಕಾಮಗಾರಿಗಳ ಅನುಷ್ಠಾನಕ್ಕೆ ಅಡೆತಡೆಯಾಗಿ ಪರಿಣಮಿಸಿದೆ! ಹೌದು. ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೈಗೊಂಡಿದ್ದ ಎಲ್ಲ ಇಲಾಖೆ ಹಾಗೂ ನಿಗಮ-ಮಂಡಳಿ, ಪ್ರಾಧಿಕಾರಿಗಳ ಕಾಮಗಾರಿಗಳಿಗೆ ಸಂಬಂಧಿಸಿದ ಹಣ ಬಿಡುಗಡೆ / ಪಾವತಿ ತಡೆಹಿಡಿಯುವಂತೆ ಮತ್ತು ಪ್ರಾರಂಭವಾಗದಿರುವ ಎಲ್ಲ ಕಾಮಗಾರಿಗಳನ್ನು ತಡೆ ಹಿಡಿಯುವಂತೆ ಮುಖ್ಯಮಂತ್ರಿಗಳು ಆದೇಶ ಹೊರಡಿಸಿದ್ದರು.

ಸಿಎಂ ಆದೇಶದ ಎಫೆಕ್ಟ್ : ಮಳೆ ಹಾನಿ ತಡೆ ಕಾಮಗಾರಿ ಅನುಷ್ಠಾನಕ್ಕೆ ಅಡೆತಡೆ!

*ಅನುದಾನ ಬಿಡುಗೆಡಯಾದರೂ ಆರಂಭವಾಗದ ಶಿವಮೊಗ್ಗ ತಾಲೂಕು ಬಸವನಗಂಗೂರು ಕೆರೆ ನಾಲೆ ನಿರ್ಮಾಣ ಕೆಲಸ..!!

ವರದಿ : ಬಿ. ರೇಣುಕೇಶ್

ಶಿವಮೊಗ್ಗ, ಜೂ. 2: ಮಳೆಗಾಲ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಮಳೆ ಹಾನಿ ತಡೆಗೆ ಅಗತ್ಯ ಕ್ರಮಕೈಗೊಳ್ಳುವಂತೆ, ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಆದರೆ ಇದೀಗ ಅವರೇ ಹೊರಡಿಸಿರುವ ಆದೇಶದಿಂದ, ಮಳೆ ಹಾನಿ ಸಂಬಂಧಿತ ಕಾಮಗಾರಿಗಳ ಅನುಷ್ಠಾನಕ್ಕೆ ಅಡೆತಡೆಯಾಗಿ ಪರಿಣಮಿಸಿದೆ!

ಹೌದು. ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೈಗೊಂಡಿದ್ದ ಎಲ್ಲ ಇಲಾಖೆ ಹಾಗೂ ನಿಗಮ-ಮಂಡಳಿ, ಪ್ರಾಧಿಕಾರಗಳ ಕಾಮಗಾರಿಗಳಿಗೆ ಸಂಬಂಧಿಸಿದ ಹಣ ಬಿಡುಗಡೆ / ಪಾವತಿ ತಡೆಹಿಡಿಯುವಂತೆ ಮತ್ತು ಪ್ರಾರಂಭವಾಗದಿರುವ ಎಲ್ಲ ಕಾಮಗಾರಿಗಳನ್ನು ತಡೆ ಹಿಡಿಯುವಂತೆ ಮುಖ್ಯಮಂತ್ರಿಗಳು ಆದೇಶ ಹೊರಡಿಸಿದ್ದರು.

ಇದರ ನೇರ ಪರಿಣಾಮ, ಪ್ರತಿ ಮಳೆಗಾಲದ ವೇಳೆ ತಗ್ಗು ಪ್ರದೇಶಗಳಲ್ಲಿ ಪ್ರವಾಹ ಸ್ಥಿತಿ ಸೃಷ್ಟಿಸುವ ಶಿವಮೊಗ್ಗ ತಾಲೂಕು ಬಸವನಗಂಗೂರು ಕೆರೆ ನಾಲೆ ಅಭಿವೃದ್ದಿ ಕಾಮಗಾರಿ ಮೇಲೆ ಬೀರುವಂತಾಗಿದೆ!

ಬಸವನಗಂಗೂರು ಕೆರೆಯ ಕೋಡಿ ನೀರು ಹರಿದು ಹೋಗುವ ಕಾಲುವೆ ಭಾರೀ ಪ್ರಮಾಣದಲ್ಲಿ ಒತ್ತುವರಿಯಾಗಿದೆ. ಕೆರೆಯ ಎರಡೂ ಬದಿ ಕಾಲುವೆಯೇ ಕಣ್ಮರೆಯಾಗಿದೆ. ಇದರಿಂದ ಕೆರೆ ಭರ್ತಿಯಾದ ವೇಳೆ, ತಗ್ಗು ಪ್ರದೇಶದಲ್ಲಿರುವ ಜನವಸತಿ ಪ್ರದೇಶಗಳಿಗೆ ಕೋಡಿ ನೀರು ನುಗ್ಗುತ್ತಿದೆ. ಇದರಿಂದ ನಾಗರೀಕರು ತೀವ್ರ ತೊಂದರೆ ಎದುರಿಸುವಂತಾಗಿದೆ.

ಹಣ ಬಿಡುಗಡೆ: ಸರಾಗವಾಗಿ ಕೆರೆ ನೀರು ಹರಿದು ಹೋಗುವಂತೆ ಮಾಡುವ ಮೂಲಕ, ನಾಗರೀಕರಿಗೆ ಆಗುತ್ತಿರುವ ಅನಾನುಕೂಲ ತಪ್ಪಿಸಲು ಕಳೆದ ವರ್ಷ 50 ಲಕ್ಷ ರೂ. ಮಂಜೂರಾಗಿತ್ತು. ಕಾಮಗಾರಿಗೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆ ಕೂಡ ಪೂರ್ಣಗೊಂಡಿದೆ. ಬೇಸಿಗೆ ಅವಧಿಯಲ್ಲಿ ಕಾಮಗಾರಿ ನಡೆಸುವುದಾಗಿ ಸಣ್ಣ ನೀರಾವರಿ ಇಲಾಖೆ ತಿಳಿಸಿತ್ತಾದರೂ ಕೆಲಸ ಆರಂಭವಾಗಿರಲಿಲ್ಲ.

ಸಿಎಂ ಆದೇಶ: ಈ ನಡುವೆ ಮುಖ್ಯಮಂತ್ರಿಗಳು ಹೊರಡಿಸಿರುವ ಆದೇಶ ಮುಂದಿಟ್ಟುಕೊಂಡು, ಸಣ್ಣ ನೀರಾವರಿ ಇಲಾಖೆ ಕಾಮಗಾರಿ ಆರಂಭಕ್ಕೆ ಮೀನಮೇಷ ಎಣಿಸುತ್ತಿದೆ. ಸಂಬಂಧಿಸಿದ ಇಲಾಖೆ ಸಚಿವರು, ಹಿರಿಯ ಅಧಿಕಾರಿಗಳ ಅನುಮತಿ ದೊರಕಿದ ನಂತರ ಕಾಮಗಾರಿ ಆರಂಭಿಸುವುದಾಗಿ ಹೇಳಲಾರಂಭಿಸಿದೆ.

ಇದರಿಂದ ಪ್ರಸ್ತುತ ಮಳೆಗಾಲದ ವೇಳೆ ಬಸವನಗಂಗೂರು ಕೆರೆ ಭರ್ತಿಯಾದರೇ, ಮತ್ತೆ ತಗ್ಗು ಪ್ರದೇಶದಲ್ಲಿರುವ ಜನವಸತಿ ಪ್ರದೇಶಗಳು ಜಲಾವೃತವಾಗುತ್ತವೆ. ಇದರಿಂದ ನಾಗರೀಕರು ತೀವ್ರ ತೊಂದರೆ ಎದುರಿಸುವಂತಾಗುತ್ತದೆ.

ಈ ಹಿನ್ನಲೆಯಲ್ಲಿ ತಕ್ಷಣವೇ ಮುಖ್ಯಮಂತ್ರಿಗಳು, ಇಲಾಖೆ ಸಚಿವರು, ಹಿರಿಯ ಅಧಿಕಾರಿಗಳು, ಜಿಲ್ಲಾಧಿಕಾರಿಗಳು ಇತ್ತ ಚಿತ್ತ ಹರಿಸಬೇಕಾಗಿದೆ. ಕಾಲಮಿತಿಯೊಳಗೆ ಕಾಮಗಾರಿ ಅನುಷ್ಠಾನಕ್ಕೆ ಆದ್ಯ ಗಮನಹರಿಸಬೇಕಾಗಿದೆ. ಈ ಮೂಲಕ ನಾಗರೀಕರಿಗೆ ಅನುಕೂಲ ಕಲ್ಪಿಸಿಕೊಡಬೇಕಾಗಿದೆ ಎಂದು ಕೆರೆ ನೀರಿನಿಂದ ಜಲಾವೃತ ಸಮಸ್ಯೆ ಎದುರಿಸುತ್ತಿರುವ ತಗ್ಗು ಪ್ರದೇಶದ ನಾಗರೀಕರು ಆಗ್ರಹಿಸುತ್ತಾರೆ.

ಶಿವಮೊಗ್ಗ, ಜೂ. 1: ಗ್ರಾಮೀಣ ಪ್ರದೇಶಗಳಲ್ಲಿ ಪೊಲೀಸ್ ಇಲಾಖೆಗೆ ಗಸ್ತು ನಿರ್ವಹಣೆಗೆ ನೆರವಾಗಲು ಹಾಗೂ ಅಕ್ರಮ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಲು, ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯು, ಪ್ರತಿ ಗ್ರಾಮಗಳಲ್ಲಿ ಆಯ್ದ ಯುವಕರನ್ನೊಳಗೊಂಡ ‘ಯುವ ಪಡೆ’ ರಚನೆಗೆ ಮುಂದಾಗಿದೆ. ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ರವರೇ ಈ ವಿನೂತನ ‘ಯುವ ಪಡೆ’ ರಚನೆಯ ಸೂತ್ರಧಾರರಾಗಿದ್ದಾರೆ. ಪೊಲೀಸ್ ಇಲಾಖೆಯನ್ನು ಮತ್ತಷ್ಟು ಜನ ಸ್ನೇಹಿಯಾಗಿಸಲು ಹಾಗೂ ಕಾನೂನು-ಸುವ್ಯವಸ್ಥೆಯ ಪರಿಣಾಮಕಾರಿ ನಿರ್ವಹಣೆಗೆಗೆ ಹೊಸ ಕ್ರಮಕ್ಕೆ ಮುಂದಾಗಿದ್ದಾರೆ. ಎಸ್ಪಿ ಹೇಳಿದ್ದೇನು?: ‘ಹಳ್ಳಿಗಳಲ್ಲಿ 20 ರಿಂದ 30 ಜನರನ್ನೊಳಗೊಂಡ ಯುವಕರ ಪಡೆ ರಚಿಸಲಾಗುವುದು. ಈ ಪಡೆಯು ಗಸ್ತು ನಿರ್ವಹಣೆ ಹಾಗೂ ಗ್ರಾಮಗಳಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳ ಬಗ್ಗೆ ಪೊಲೀಸ್ ಇಲಾಖೆಗೆ ಮಾಹಿತಿ ನೀಡಲಿದೆ’ ಎಂದು ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ. Previous post ಗಸ್ತು – ಅಕ್ರಮ ಚಟುವಟಿಕೆಗಳ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲು ಹಳ್ಳಿಗಳಲ್ಲಿ ಅಸ್ತಿತ್ವಕ್ಕೆ ಬರಲಿದೆ ಯುವ ಪಡೆ..!
ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಿರ್ಜನ ಪ್ರದೇಶಗಳಲ್ಲಿ, ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ 22 ಜನರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಜೂ. 1 ರ ರಾತ್ರಿ ನಡೆದಿದೆ. ಠಾಣಾ ವ್ಯಾಪ್ತಿಯ ಕಾಶೀಪುರ, ಆಲ್ಕೋಳ, ಗಾಡಿಕೊಪ್ಪ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. Next post ನಿರ್ಜನ ಪ್ರದೇಶಗಳಲ್ಲಿ ಅನುಮಾನಾಸ್ಪದ ವರ್ತನೆ : 22 ಜನರು ಪೊಲೀಸ್ ವಶಕ್ಕೆ