
ಸುಲಿಗೆ ಪ್ರಕರಣ – ಮೂವರು ಅಪ್ರಾಪ್ತರ ಬಂಧನ : 23 ಮೊಬೈಲ್ ಪೋನ್ ವಶ!
ಶಿವಮೊಗ್ಗ, ಜೂ. 2: ಶಿವಮೊಗ್ಗ ನಗರದ ವಿವಿಧೆಡೆ ಸುಲಿಗೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದ ಮೇರೆಗೆ, ತುಂಗಾ ನಗರ ಠಾಣೆ ಪೊಲೀಸರು ಮೂವರು ಅಪ್ರಾಪ್ತ ವಯಸ್ಸಿನ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರಿಂದ 3.25 ಲಕ್ಷ ರೂ. ಮೌಲ್ಯದ ವಿವಿಧ ಕಂಪೆನಿಯ 23 ಮೊಬೈಲ್ ಫೋನ್ ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿ ಚಕ್ರ ವಾಹನ ವಶಕ್ಕೆ ಪಡೆದುಕೊಂಡಿದ್ದಾರೆ.

ಎಸ್ಪಿ ಜಿ.ಕೆ.ಮಿಥುನ್ ಕುಮಾರ್, ಎಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ, ಡಿವೈಎಸ್ಪಿ ಬಾಲರಾಜ್ ಮಾರ್ಗದರ್ಶನದಲ್ಲಿ ಇನ್ಸ್’ಪೆಕ್ಟರ್ ಮಂಜುನಾಥ್, ಸಬ್ ಇನ್ಸ್ಪೆಪೆಕ್ಟರ್ ರಾಜುರೆ್ಡಿ, ಕುಮಾರ್ ಕುರಗುಂದ,
ಎಎಸ್ಐ ಮನೋಹರ್, ಸಿಬ್ಬಂದಿಗಳಾದ ಹೆಚ್.ಸಿ. ಕಿರಣ್ ಮೊರೆ, ಅರುಣ್ ಕುಮಾರ್, ಮೋಹನ್ ಕುಮಾರ್, ಸಿಪಿಸಿಗಳಾದ ನಾಗಪ್ಪ ಅಡಿವೆಪ್ಪನವರ್, ಹರೀಶ್ ನಾಯ್ಕ್, ಲಂಕೇಶ್ ಕುಮಾರ್, ಕಾಂತರಾಜ್, ಅರಿಹಂತ ಶಿರಹಟ್ಟಿ, ಹರೀಶ್ ರವರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಸುಲಿಗೆ: ಇತ್ತೀಚೆಗೆ ಬೈಕ್ ನಲ್ಲಿ ಆಗಮಿಸಿದ ಮೂವರು ಆರೋಪಿಗಳು, ಗೋಪಾಳಗೌಡ ಬಡಾವಣೆ ಚಂದನ ಪಾರ್ಕ್ ಬಳಿ ಪಾದಚಾರಿಯೋರ್ವರ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದರು. ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ತನಿಖೆ ವೇಳೆ ಅಪ್ರಾಪ್ತ ವಯಸ್ಸಿನ ಮೂವರು ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ವಿಚಾರಣೆ ವೇಳೆ ತುಂಗಾನಗರ, ದೊಡ್ಡಪೇಟೆ ಹಾಗೂ ವಿನೋಬನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ತಲಾ ಒಂದೊಂದು ಸುಲಿಗೆ ಪ್ರಕರಣದಲ್ಲಿ ಭಾಗಿಯಾಗಿದ್ದು ಬೆಳಕಿಗೆ ಬಂದಿದೆ.