ಬೆಳ್ಳಂಬೆಳಿಗ್ಗೆ ಸರ್ಕಾರಿ ಶಾಲೆ ಕಾಂಪೌಂಡ್ ಧ್ವಂಸ!

ಶಿವಮೊಗ್ಗ, ಜ. 16: ಶಿವಮೊಗ್ಗ ತಾಲೂಕಿನ ಹುಣಸೋಡು ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಕಾಂಪೌಂಡ್ ನ್ನು, ಸೋಮವಾರ ಮುಂಜಾನೆ ಧ್ವಂಸಗೊಳಿಸಿರುವ ಘಟನೆ ನಡೆದಿದೆ!

ಜಾಗದ ವಿವಾದದ ಹಿನ್ನೆಲೆಯಲ್ಲಿ, ವ್ಯಕ್ತಿಯೋರ್ವರು ಶಿವಮೊಗ್ಗ ನಗರದಿಂದ ಕಾರ್ಮಿಕರನ್ನು ಕರೆತಂದು ಮುಂಜಾನೆ ನಾಲ್ಕು ಗಂಟೆ ಸುಮಾರಿಗೆ ಶಾಲೆಯ ಕಾಂಪೌಂಡ್ ಧ್ವಂಸಗೊಳಿಸಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಕೆಲ ಗ್ರಾಮಸ್ಥರು, ಕಾಂಪೌಂಡ್ ತೆರವಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತಂತೆ ಪೊಲೀಸರಿಗೆ, ಗ್ರಾಮ ಪಂಚಾಯ್ತಿ ಆಡಳಿತ ಹಾಗೂ ಶಿಕ್ಷಣ ಇಲಾಖೆಗೆ ಮಾಹಿತಿ ರವಾನಿಸಿದ್ದಾರೆ. ಸ್ಥಳಕ್ಕೆ ಸ್ಥಳೀಯ ಗ್ರಾಮ ಪಂಚಾಯ್ತಿ ಸದಸ್ಯರು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ.

Previous post ಸನ್‌ಪ್ಯೂರ್‌ನಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ
Next post ಹೆಚ್.ಡಿ.ಕುಮಾರಸ್ವಾಮಿ ಜೊತೆ ರೈತರ ಆನ್’ಲೈನ್ ಸಂವಾದ