
ಶಿವಮೊಗ್ಗ ಜಿಲ್ಲಾ ವಾರ್ತಾ – ಪ್ರಚಾರ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಶಫಿ ಸಾದುದ್ಧೀನ್ ವರ್ಗಾವಣೆ
ಶಿವಮೊಗ್ಗ, ಜೂ. 5: ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಪ್ರಚಾರ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಶಫಿ ಸಾದುದ್ದೀನ್ ಅವರನ್ನು, ವಾರ್ತಾ ಇಲಾಖೆಯ ಬೆಂಗಳೂರು ಕೇಂದ್ರ ಕಚೇರಿಗೆ ವರ್ಗಾವಣೆಗೊಳಿಸಲಾಗಿದೆ.
ಶಫಿ ಸಾದುದ್ದೀನ್ ಅವರು ಕಳೆದ 6 ವರ್ಷಗಳಿಂದ ಶಿವಮೊಗ್ಗದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದ್ದರು. ಸರಳ, ಸಜ್ಜನ, ಪ್ರಾಮಾಣಿಕ ವ್ಯಕ್ತಿತ್ವದವರಾಗಿದ್ದರು. ಯಾವುದೇ ಗೊಂದಲ, ಗಡಿಬಿಡಿಗೆ ಆಸ್ಪದವಾಗದಂತೆ ತಮ್ಮ ಕರ್ತವ್ಯ ನಿರ್ವಹಣೆ ಮಾಡಿಕೊಂಡು ಬಂದಿದ್ದರು.
ಸರ್ಕಾರಿ ಕಾರ್ಯಕ್ರಮ – ಸಭೆಗಳ ಕುರಿತಂತೆ ಮಾಧ್ಯಮಗಳಿಗೆ ಅವರು ಕಳುಹಿಸುತ್ತಿದ್ದ ವರದಿಗಳ ನಿರೂಪಣಾ ಶೈಲಿಯು ಪತ್ರಕರ್ತ ವಲಯದ ಮೆಚ್ಚುಗೆಗೆ ಪಾತ್ರವಾಗಿತ್ತು.
ಶಫಿ ಸಾದುದ್ದೀನ್ ಅವರ ವರ್ಗಾವಣೆಯಿಂದ ತೆರವಾಗಿರುವ ಸ್ಥಾನಕ್ಕೆ ಇನ್ನಷ್ಟೆ ವಾರ್ತಾಧಿಕಾರಿಗಳ ನಿಯೋಜನೆಯಾಗಬೇಕಾಗಿದೆ. ಕಚೇರಿಯ ಸಹಾಯಕ ವಾರ್ತಾಧಿಕಾರಿ ಮಾರುತಿ ಅವರಿಗೆ ಪ್ರಭಾರ ವಾರ್ತಾಧಿಕಾರಿ ಜವಾಬ್ದಾರಿ ವಹಿಸಲಾಗಿದೆ.