ಬಾಡಿಗೆ ಮನೆಯವರಿಗೂ ಉಚಿತ ವಿದ್ಯುತ್ ಸೌಲಭ್ಯ : ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ

ಬಾಡಿಗೆ ಮನೆಯವರಿಗೂ ಉಚಿತ ವಿದ್ಯುತ್ ಸೌಲಭ್ಯ : ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ

ಬೆಂಗಳೂರು, ಜೂ. 6: ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವವರಿಗೂ ಉಚಿತ ವಿದ್ಯುತ್‌ ಸೌಲಭ್ಯ ದೊರಕಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ.

ಗೃಹಜ್ಯೋತಿ ಯೋಜನೆಯ ಮಾರ್ಗಸೂಚಿ ಪ್ರಕಟವಾದ ಬಳಿಕ, ಬಾಡಿಗೆ ಮನೆಯಲ್ಲಿರುವವರಿಗೆ ಉಚಿತ ವಿದ್ಯುತ್‌ ಸೌಲಭ್ಯ ಲಭ್ಯವಾಗುವುದಿಲ್ಲ ಎಂಬ ಗೊಂದಲಗಳು ಮನೆ ಮಾಡಿದ್ದವು. ಇದು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆಡೆ ಮಾಡಿಕೊಟ್ಟಿತ್ತು.

ಮಂಗಳವಾರ ವಿಧಾನಸೌಧದಲ್ಲಿ ಡಿ ದೇವರಾಜು ಅರಸು ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮುಖ್ಯಮಂತ್ರಿಗಳು ಸುದ್ದಿಗಾರರೊಂದಿಗೆ ಮಾತನಾಡಿದರು.

ಉದಯ ಸಾಕ್ಷಿ ನ್ಯೂಸ್

 200 ಯೂನಿಟ್‌ ಉಚಿತ ವಿದ್ಯುತ್ ಯೋಜನೆ ಬಾಡಿಗೆದಾರರಿಗೂ ಅನ್ವಯವಾಗಲಿದೆ. ಆದರೆ ವಾಣಿಜ್ಯವಾಗಿ ಬಳಕೆ ಮಾಡುವವರಿಗೆ ಉಚಿತ ವಿದ್ಯುತ್‌ ಅನ್ವಯ ಆಗಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬಿಜೆಪಿ ವಿರುದ್ದ ಟೀಕೆ: ವಿದ್ಯುತ್ ದರ ಏರಿಕೆ ವಿರುದ್ದ ಬಿಜೆಪಿ ಪಕ್ಷ ನಡೆಸುತ್ತಿರುವ ಪ್ರತಿಭಟನೆಗೆ ಸಿಎಂ ಕಿಡಿಕಾರಿದ್ದಾರೆ. ಬಿಜೆಪಿ ನಾಯಕರಿಗೆ ಯಾವುದೇ ವಿಷಯವಿಲ್ಲವಾಗಿದೆ. ಅವರು ಅಧಿಕಾರದಲ್ಲಿದ್ದಾಗ ಹೇಳಿದ ಯಾವುದೇ ಕೆಲಸ ಮಾಡಿಲಿಲ್ಲ. ಭ್ರಷ್ಟಾಚಾರ ನಡೆಸಿದರು. ಈಗ ನಮಗೆ ಪಾಠ ಹೇಳಲು ಬರುತ್ತಿದ್ದಾರೆ ಎಂದು ಟೀಕಾಪ್ರಹಾರ ನಡೆಸಿದರು.

ನಾವು ಅಧಿಕಾರಕ್ಕೆ ಬಂದ ಕೇವಲ 15 ದಿವಸದಲ್ಲಿಯೇ ರಾಜ್ಯದ ನಾಗರೀಕರಿಗೆ ನೀಡಿದ್ದ ಭರವಸೆಯಂತೆ ಎಲ್ಲ 5 ಗ್ಯಾರಂಟಿಗಳನ್ನು ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದವೆ ಎಂದು ಹೇಳಿದ್ದಾರೆ.

ಗೊಂದಲ ಮೂಡಿಸಿದ್ದ ಗೃಹ ಜ್ಯೋತಿ ಯೋಜನೆ ಮಾರ್ಗಸೂಚಿ..!

ಪ್ರತಿ ಮನೆಗೆ ಗರಿಷ್ಠ 200 ಯೂನಿಟ್‌ವರೆಗೆ ಉಚಿತ ವಿದ್ಯುತ್‌ ನೀಡುವ ‘ಗೃಹ ಜ್ಯೋತಿ’ ಯೋಜನೆಗೆ ಸಂಬಂಧಿಸಿದಂತೆ ಸರಕಾರ ಮಾರ್ಗಸೂಚಿ ಪ್ರಕಟಿಸಿತ್ತು.

ಬಾಡಿಗೆ ಮನೆಯವರಿಗೂ ಉಚಿತ ವಿದ್ಯುತ್ ಸೌಲಭ್ಯ : ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ

ಗೃಹ ವಿದ್ಯುತ್‌ ಬಳಕೆದಾರರ ಹೆಸರಿನಲ್ಲಿಒಂದಕ್ಕಿಂತ ಹೆಚ್ಚು ಸ್ಥಾವರ (ಮೀಟರ್) ಗಳಿದ್ದರೆ ಒಂದು ಸ್ಥಾವರಕ್ಕೆ ಮಾತ್ರ ಈ ಯೋಜನೆ ಅನ್ವಯವಾಗಲಿದೆ ಎಂದು ಹೇಳಲಾಗಿತ್ತು. ಇದರಿಂದ ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿರುವವರಿಗೆ ಗೃಹ ಜ್ಯೋತಿ ಯೋಜನೆ ಸೌಲಭ್ಯ ಲಭ್ಯವಾಗದಿರುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿತ್ತು.  

ಶಿವಮೊಗ್ಗ, ಜೂ. 6: ‘ದಕ್ಷಿಣ ಆಫ್ರಿಕಾದ ಜೋರ್ಡಾನ್ ದೇಶ ಹಾಗೂ ಉತ್ತರ ಭಾರತದಿಂದ ಶಿವಮೊಗ್ಗಕ್ಕೆ ಆಗಮಿಸಿದ್ದ 9 ಜನರಲ್ಲಿ ಮಲೇರಿಯಾ ರೋಗ ಪತ್ತೆಯಾಗಿತ್ತು. ಇವರಿಗೆ ಸೂಕ್ತ ಚಿಕಿತ್ಸೆ ನೀಡಲಾಗಿದೆ’ ಎಂದು ಆರೋಗ್ಯ ಇಲಾಖೆಯ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಗುಡುದಪ್ಪ ಕಸಬಿ ಅವರು ತಿಳಿಸಿದ್ದಾರೆ. ‘ದಕ್ಷಿಣ ಆಫ್ರಿಕಾದಲ್ಲಿ ಮಲೇರಿಯಾ ರೋಗ ಹೆಚ್ಚಿದೆ. ಕಳೆದ ಮೇ ತಿಂಗಳಲ್ಲಿ ಜೋರ್ಡಾನ್ ದೇಶದಿಂದ ಹಿಂದಿರುಗಿದ್ದ ಹಕ್ಕಿಪಿಕ್ಕಿ ಸಮುದಾಯದ 106 ಜನರ ಆರೋಗ್ಯ ತಪಾಸಣೆಗೊಳಪಡಿಸಲಾಗಿತ್ತು. ಈ ವೇಳೆ ಮೂವರು ಪುರುಷರಲ್ಲಿ ರೋಗ ಪತ್ತೆಯಾಗಿತ್ತು. ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಗಿತ್ತು. ಸದ್ಯ ಅವರೆಲ್ಲರೂ ಗುಣಮುಖರಾಗಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ. Previous post ಸೂಡಾನ್ ದೇಶ, ಉತ್ತರ ಭಾರತದಿಂದ ಶಿವಮೊಗ್ಗಕ್ಕೆ ಆಗಮಿಸಿದ್ದ 9 ಜನರಲ್ಲಿ ಮಲೇರಿಯಾ ರೋಗ ಪತ್ತೆ!
17 ವರ್ಷದ ಬಾಲಕಿಗೆ ಮೇಲೆ ದೌರ್ಜನ್ಯ : 21 ವರ್ಷದ ಯುವಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ! Next post 17 ವರ್ಷದ ಬಾಲಕಿಗೆ ದೌರ್ಜನ್ಯ : 21 ವರ್ಷದ ಯುವಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ!