ಶಿವಮೊಗ್ಗ : ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ ಜೂ. 09: ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದ ವಿವಿಧ ವಿಭಾಗಗಳಲ್ಲಿ ಖಾಲಿಯಿರುವ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ, ಗುತ್ತಿಗೆ ಆಧಾರಿತ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಪಶುವೈದ್ಯಕೀಯ ಶರೀರ ಕ್ರಿಯಾ ಮತ್ತು ಜೀವ ರಸಾಯನ ಶಾಸ್ತ್ರ ವಿಭಾಗ, ಜಾನುವಾರು ಉತ್ಪಾದನಾ ನಿರ್ವಹಣೆ ಶಾಸ್ತ್ರ ವಿಭಾಗ, ಪಶುವೈದ್ಯಕೀಯ ಔಷಧ ಹಾಗೂ ವಿಷಶಾಸ್ತ್ರ ವಿಭಾಗ, ಪಶುವೈದ್ಯಕೀಯ ಸಾರ್ವಜನಿಕ ಆರೋಗ್ಯ ಮತ್ತು ಸಮುದಾಯ ರೋಗ ಅಧ್ಯಯನ ಶಾಸ್ತ್ರ ವಿಭಾಗ,

ಜಾನುವಾರು ಉತ್ಪನ್ನಗಳ ತಾಂತ್ರಿಕತೆ ವಿಭಾಗ, ಪಶುವೈದ್ಯಕೀಯ ಸ್ತ್ರೀರೋಗ ಮತ್ತು ಪ್ರಸೂತಿ ಶಾಸ್ತ್ರ ವಿಭಾಗ, ಪಶುವೈದ್ಯಕೀಯ ಶಸ್ತ್ರ ಚಿಕಿತ್ಸೆ ಮತ್ತು ಕ್ಷ-ಕಿರಣ ಶಾಸ್ತ್ರ ವಿಭಾಗ, ದೈಹಿಕ ಶಿಕ್ಷಣ ವಿಭಾಗ,

ಪಶುವೈದ್ಯಕೀಯ ಸಂಕೀರ್ಣ ಶಾಸ್ತ್ರ (ಪಶುವೈದ್ಯಕೀಯ ಸ್ತ್ರೀರೋಗ ಮತ್ತು ಪ್ರಸೂತಿ ಶಾಸ್ತ್ರ, ಪಶುವೈದ್ಯಕೀಯ ಶಸ್ತ್ರ ಚಿಕಿತ್ಸೆ ಮತ್ತು ಕ್ಷ-ಕಿರಣ ಶಾಸ್ತ್ರ ಪಶುವೈದ್ಯಕೀಯ ಚಿಕಿತ್ಸಾ ಶಾಸ್ತ್ರ, ಚಿಕಿತ್ಸಾ ರೋಗಶಾಸ್ತ್ರ/ಸೂಕ್ಷ್ಮಜೀವಾಣು ಶಾಸ್ತ್ರ/ ಪರೋಪಜೀವ ಶಾಸ್ತ್ರ/ ಜೀವರಸಾಯನ ಶಾಸ್ತ್ರ) ವಿಭಾಗಗಳಲ್ಲಿ ನೇಮಕ ಮಾಡಿಕೊಳ್ಳಲು ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ನಿಯಮಾವಳಿಯಂತೆ ಹಾಗೂ ಮಾರ್ಗಸೂಚಿಯಂತೆ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ  ಭಾಗವಹಿಸಬಹುದಾಗಿದೆ.

ಆಸಕ್ತರು ದಿನಾಂಕ: 16/06/2023ರಂದು ಬೆಳಿಗ್ಗೆ 11.00 ಕ್ಕೆ ಶಿವಮೊಗ್ಗದ ವಿನೋಬನಗರ ಪಶುವೈದ್ಯಕೀಯ ಮಹಾ ವಿದ್ಯಾಲಯ ಡೀನ್ ಕಚೇರಿಯಲ್ಲಿ ಸಂದರ್ಶನದಲ್ಲಿ ಹಾಜರಾಗಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾಲಯದ ಜಾಲತಾಣ www.kvafsu.edu.in ಹಾಗೂ ದೂ.ಸಂ.: 08182-200872 ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಶಿರಾಳಕೊಪ್ಪ ಪೊಲೀಸರ ಕಾರ್ಯಾಚರಣೆ - ಬೈಕ್ ಕಳ್ಳನ ಬಂಧನ : ಮೂರು ಪ್ರಕರಣ ಬೆಳಕಿಗೆ! Previous post ಶಿರಾಳಕೊಪ್ಪ ಪೊಲೀಸರ ಕಾರ್ಯಾಚರಣೆ – ಬೈಕ್ ಕಳ್ಳನ ಬಂಧನ : ಮೂರು ಪ್ರಕರಣ ಬೆಳಕಿಗೆ!
ದೇವಾಲಯದಲ್ಲಿ ಕಳ್ಳತನ : 6 ವರ್ಷ ಕಠಿಣ ಜೈಲು ಶಿಕ್ಷೆ! Next post ದೇವಾಲಯದಲ್ಲಿ ಕಳ್ಳತನ : 6 ವರ್ಷ ಕಠಿಣ ಜೈಲು ಶಿಕ್ಷೆ!