ವಿದ್ಯುತ್ ದರ ಏರಿಕೆ ವಿರುದ್ದ ಬಿಜೆಪಿ ಪ್ರತಿಭಟನೆ : ಮೆಸ್ಕಾಂ ಕಚೇರಿ ಮೇಲೆ ಕಲ್ಲು ತೂರಾಟ!

ವಿದ್ಯುತ್ ದರ  ಏರಿಕೆ : ಮೆಸ್ಕಾಂ ಕಚೇರಿ ಮೇಲೆ ಕಲ್ಲು ತೂರಾಟ!

ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಶಿವಮೊಗ್ಗ, ಜೂ. 14: ವಿದ್ಯುತ್ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ,  ಬುಧವಾರ ಶಿವಮೊಗ್ಗ ನಗರದ ಮೆಸ್ಕಾಂ ಮುಖ್ಯ ಕಚೇರಿಗೆ ಬಿಜೆಪಿ ಪಕ್ಷ ಮುತ್ತಿಗೆ ಹಾಕಲು ಯತ್ನಿಸಿತು. ಈ ವೇಳೆ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ನೋಟೀಸ್ ಬೋರ್ಡ್ ನ ಗಾಜ ಒಡೆದು ಹಾಕಿದ ಘಟನೆ ಕೂಡ ನಡೆದಿದೆ.  

ಇದರಿಂದ ಕಚೇರಿ ಆವರಣದಲ್ಲಿ ಕೆಲ ಸಮಯ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ತಕ್ಷಣವೇ ಪೊಲೀಸರು ಕಲ್ಲು ತೂರಾಟ ನಡೆಸಿದ ಕಾರ್ಯಕರ್ತನು ಸೇರಿದಂತೆ ಸ್ಥಳದಲ್ಲಿ ಪ್ರತಿಭಟನೆ ನಡೆಸುತ್ತಿದ್ದವರನ್ನು ವಶಕ್ಕೆ ಪಡೆದು ಕರೆದೊಯ್ದರು.

ಇದಕ್ಕೂ ಮುನ್ನ ಕಚೇರಿ ಮುಂಭಾಗದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಂತರ ಏಕಾಏಕಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದರು. ಪೊಲೀಸರು ಹಾಕಿದ್ದ ಬ್ಯಾರಿಕೇಡ್ ನೂಕಿ ಕಾರ್ಯಕರ್ತರು ಕಚೇರಿಯೊಳಗೆ ಪ್ರವೇಶಿಸಲು ಯತ್ನಿಸಿದರು.

ಪ್ರತಿಭಟನಾಕಾರರ ನಿಯಂತ್ರಣಕ್ಕೆ ಪೊಲೀಸರು ಹರಸಾಹಸ ನಡೆಸಿದರು. ಪ್ರತಿಭಟನೆಯಲ್ಲಿ ಶಾಸಕರಾದ ಚನ್ನಬಸಪ್ಪ, ಡಿ.ಎಸ್.ಅರುಣ್ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

ಹಿಂಪಡೆಯಲು ಆಗ್ರಹ: ದಿಢೀರ್ ಆಗಿ ರಾಜ್ಯ ಸರ್ಕಾರ ವಿದ್ಯುತ್ ದರದಲ್ಲಿ ಭಾರೀ ಹೆಚ್ಚಳ ಮಾಡಿದೆ. ಹಿಂದೆಂದೂ ಕಂಡುಕೇಳರಿಯದ ರೀತಿಯಲ್ಲಿ ದರ ಏರಿಸಿ ಗದಾಪ್ರಹಾರ ನಡೆಸಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಉಚಿತ ವಿದ್ಯುತ್ ನೀಡುವುದಾಗಿ ಹೇಳಿದ ಕಾಂಗ್ರೆಸ್ ಸರ್ಕಾರ, ಇದೀಗ ವಿದ್ಯುತ್ ದರ ಏರಿಕೆ ಮಾಡಿ ರಾಜ್ಯದ ನಾಗರೀಕರಿಗೆ ದ್ರೋಹ ಬಗೆದಿದೆ. ತಕ್ಷಣವೇ ವಿದ್ಯುತ್ ಪರಿಷ್ಕರಣೆ ಆದೇಶ ಹಿಂಪಡೆಯಬೇಕು ಎಂದು ಬಿಜೆಪಿ ಪಕ್ಷ ಆಗ್ರಹಿಸಿದೆ.

ನೆನೆಗುದಿಗೆ ಬಿದ್ದಿದ್ದ ಶಿವಮೊಗ್ಗ ಹೊರ ವರ್ತುಲ ರಸ್ತೆ 2 ನೇ ಹಂತ : ಅನುಷ್ಠಾನದ ಭರವಸೆ ನೀಡಿದ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ! Previous post ನೆನೆಗುದಿಗೆ ಬಿದ್ದಿದ್ದ ಶಿವಮೊಗ್ಗ ಹೊರ ವರ್ತುಲ ರಸ್ತೆ 2 ನೇ ಹಂತ : ಅನುಷ್ಠಾನದ ಭರವಸೆ ನೀಡಿದ ಕೇಂದ್ರ ಭೂ ಸಾರಿಗೆ ಸಚಿವ ಗಡ್ಕರಿ!
ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಯುವಕನ ಕೊಲೆ : ಆರೋಪಿ ಬಂಧನ! Next post ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಯುವಕನ ಕೊಲೆ : ಆರೋಪಿ ಬಂಧನ!