
ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಯುವಕನ ಕೊಲೆ : ಆರೋಪಿ ಬಂಧನ!
ಶಿವಮೊಗ್ಗ, ಜೂ. 14: ವೈಯಕ್ತಿಕ ವೈಷಮ್ಯದ ಹಿನ್ನೆಲೆಯಲ್ಲಿ, ಯುವಕನೋರ್ವನ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ನಗರದ ಇಲಿಯಾಜ್ ನಗರದಲ್ಲಿ ಬುಧವಾರ ರಾತ್ರಿ ನಡೆದಿದೆ.
ಆಸೀಫ್ (25) ಕೊಲೆಗೀಡಾದ ಯುವಕ ಎಂದು ಗುರುತಿಸಲಾಗಿದೆ. ಜಬೀ (25) ಆರೋಪಿಯಾಗಿದ್ದಾನೆ. ಈತನನ್ನು ದೊಡ್ಡಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆಸೀಫ್ ಹತ್ಯೆಗೆ ವೈಯಕ್ತಿಕ ದ್ವೇಷ ಕಾರಣವಾಗಿದೆ ಎಂದು ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ಅವರು ಮಾಹಿತಿ ನೀಡಿದ್ದಾರೆ.
ಹೆಚ್ಚಿನ ವಿವರಗಳು ಇನ್ನಷ್ಟೆ ತಿಳಿದುಬರಬೇಕಾಗಿದೆ. ಘಟನಾ ಸ್ಥಳಕ್ಕೆ ದೊಡ್ಡಪೇಟೆ ಠಾಣೆ ಪೊಲೀಸರು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ.
More Stories
shimoga | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಏ. 18 ರ ತರಕಾರಿ ಬೆಲೆಗಳ ವಿವರ
ಶಿವಮೊಗ್ಗ (shivamogga), ಏ. 18: ಶಿವಮೊಗ್ಗದ ವಿನೋಬನಗರ ಎಪಿಎಂಸಿ ಸಗಟು ತರಕಾರಿ ಮಾರುಕಟ್ಟೆ ಪ್ರಾಂಗಣದಲ್ಲಿನ, ಏ. 18 ರಂದು ವಿವಿಧ ತರಕಾರಿಗಳ ಸಗಟು (wholesale) ಮಾರಾಟದ ದರಗಳ...