ಕರ್ಕಶ ಹಾರ್ನ್ : ವಾಹನ ಚಾಲಕರ ವಿರುದ್ದ ಕೇಸ್!

ವಾಹನಗಳಲ್ಲಿ ಕರ್ಕಶ ಹಾರ್ನ್ ಅಳವಡಿಸಿಕೊಂಡರೆ ಬೀಳುತ್ತೆ ಕೇಸ್..!

ಶಿವಮೊಗ್ಗ, ಜೂ. 15: ವಾಹನಗಳಲ್ಲಿ ಕರ್ಕಶ ಶಬ್ದ ಹೊರಹೊಮ್ಮಿಸುವ ಹಾರ್ನ್ ಅಳವಡಿಸಿಕೊಂಡು ಶಬ್ದ ಮಾಲಿನ್ಯ ಉಂಟು ಮಾಡುವುದರ ಜೊತೆಗೆ, ನಾಗರೀಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ವಾಹನ ಚಾಲಕರ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಲಾರಂಭಿಸಿದ್ದಾರೆ.

ಶಿವಮೊಗ್ಗದಲ್ಲಿ ಟ್ರಾಫಿಕ್ ಇನ್ಸ್’ಪೆಕ್ಟರ್ ಸಂತೋಷ್ ಕುಮಾರ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ 39 ವಾಹನಗಳನ್ನು ವಶಕ್ಕೆ ಪಡೆದು ಕೇಸ್ ದಾಖಲಿಸಿಕೊಳ್ಳಲಾಗಿದೆ.

ಸೊರಬ ತಾಲೂಕು ಆನವಟ್ಟಿಯಲ್ಲಿ ಇನ್ಸ್’ಪೆಕ್ಟರ್ ರಾಜಶೇಖರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಸಂಚಾರಿ ನಿಯಮಗಳ ಉಲ್ಲಂಘನೆ ಸೇರಿದಂತೆ ಒಟ್ಟಾರೆ 60 ಪ್ರಕರಣಗಳನ್ನು ದಾಖಲಿಸಲಾಗಿದೆ.

ಎಸ್.ಪಿ. ಜಿ.ಕೆ.ಮಿಥುನ್ ಕುಮಾರ್ ಅವರ ಸೂಚನೆ ಮೇರೆಗೆ ಈ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ.

ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಯುವಕನ ಕೊಲೆ : ಆರೋಪಿ ಬಂಧನ! Previous post ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಯುವಕನ ಕೊಲೆ : ಆರೋಪಿ ಬಂಧನ!
ಬಾಲಕಿ ಅನುಮಾನಾಸ್ಪದ ಸಾವು ಪ್ರಕರಣ : ತನಿಖಾ ಸಮಿತಿ ರಚನೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸಭೆ ಸೂಚನೆ ‘ವಸತಿ ಶಾಲೆಯ ಮಾನ್ಯತೆ ರದ್ದು’ : ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಮಾಹಿತಿ Next post ಬಾಲಕಿ ಅನುಮಾನಾಸ್ಪದ ಸಾವು ಪ್ರಕರಣ : ತನಿಖಾ ಸಮಿತಿ ರಚನೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸೂಚನೆ