
ಭದ್ರಾವತಿ – ಶಿವಮೊಗ್ಗದಲ್ಲಿ ಬೈಕ್ ಕಳವು : ಓರ್ವನ ಬಂಧನ
ಭದ್ರಾವತಿ / ಶಿವಮೊಗ್ಗ, ಜೂ. 25: ಬೈಕ್ ಕಳವು ಮಾಡಿದ್ದ ಆರೋಪದ ಮೇರೆಗೆ, ಭದ್ರಾವತಿ ಹಳೇನಗರ ಠಾಣೆ ಪೊಲೀಸರು ಓರ್ವನನ್ನು ಬಂಧಿಸಿದ ಘಟನೆ ನಡೆದಿದೆ. ಶಿವಮೊಗ್ಗ ತಾಲೂಕಿನ ಬೆಳಲಕಟ್ಟೆ ಗ್ರಾಮದ ಪ್ರಭು ಯಾನೆ ಕೋಳಿ (28) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿಯಿಂದ 80 ಸಾವಿರ ರೂ. ಮೌಲ್ಯದ ಎರಡು ಬೈಕ್ ಗಳನ್ನು ವಶಕ್ಕೆ ಪಡೆಯಲಾಗಿದೆ.
15-6-2023 ರಂದು ಭದ್ರಾವತಿ ಪಟ್ಟಣದ ಹಳೇನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಟಿವಿಎಸ್ ವಿಕ್ಟರ್ ಬೈಕ್ ವೊಂದನ್ನು ಕಳವು ಮಾಡಲಾಗಿತ್ತು. ಈ ಸಂಬಂಧ ಬೈಕ್ ಮಾಲೀಕರು ಪೊಲೀಸರಿಗೆ ದೂರು ನೀಡಿದ್ದರು.
ಪ್ರಕರಣದ ತನಿಖೆ ಆರಂಭಿಸಿದ್ದ ಪೊಲೀಸರು ಆರೋಪಿ ಪ್ರಭುವನ್ನು ಬಂಧಿಸಿದ್ದರು. ವಿಚಾರಣೆ ವೇಳೆ ಆರೋಪಿಯು ಹಳೇನಗರ ಪೊಲೀಸ್ ಠಾಣಾ ವ್ಯಾಪ್ತಿ ಹಾಗೂ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಲಾ ಒಂದೊಂದು ಬೈಕ್ ಕಳವು ಕೃತ್ಯಗಳಲ್ಲಿ ಭಾಗಿಯಾಗಿದ್ದು ಬೆಳಕಿಗೆ ಬಂದಿತ್ತು.
ಭದ್ರಾವತಿ ಉಪ ವಿಭಾಗದ ಹಿರಿಯ ಸಹಾಯಕ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ ದಯಾಮ, ಸರ್ಕಲ್ ಇನ್ಸ್’ಪೆಕ್ಟರ್ ರಾಘವೇಂದ್ರ ಕಾಂಡಿಕೆ ಮಾರ್ಗದರ್ಶನದಲ್ಲಿ ಇನ್ಸ್’ಪೆಕ್ಟರ್ ಶರಣಪ್ಪ ಹಂಡ್ರುಗಲ್ ನೇತೃತ್ವದ ಪೊಲೀಸ್ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
More Stories
shimoga | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಏ. 18 ರ ತರಕಾರಿ ಬೆಲೆಗಳ ವಿವರ
ಶಿವಮೊಗ್ಗ (shivamogga), ಏ. 18: ಶಿವಮೊಗ್ಗದ ವಿನೋಬನಗರ ಎಪಿಎಂಸಿ ಸಗಟು ತರಕಾರಿ ಮಾರುಕಟ್ಟೆ ಪ್ರಾಂಗಣದಲ್ಲಿನ, ಏ. 18 ರಂದು ವಿವಿಧ ತರಕಾರಿಗಳ ಸಗಟು (wholesale) ಮಾರಾಟದ ದರಗಳ...