
ಸರ್ಕಾರಿ ಗೋಡೌನ್ ಬಳಿ ಇಸ್ಪೀಟ್ ಜೂಜಾಟ : 6 ಜನರು ವಶಕ್ಕೆ
ಶಿವಮೊಗ್ಗ, ಜು. 10: ಶಿವಮೊಗ್ಗ ನಗರದ ಎಪಿಎಂಸಿ ಆವರಣದಲ್ಲಿರುವ ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಮುಂಭಾಗ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದವರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ.
ಖಚಿತ ವರ್ತಮಾನದ ಮೇರೆಗೆ ವಿನೋಬನಗರ ಠಾಣೆ ಪೊಲೀಸರು ಭಾನುವಾರ ಸಂಜೆ ಈ ಕಾರ್ಯಾಚರಣೆ ನಡೆಸಿದ್ದಾರೆ. ಸಬ್ ಇನ್ಸ್’ಪೆಕ್ಟರ್ ಸುನೀಲ್ ಬಿ.ಸಿ. ಮತ್ತವರ ಸಿಬ್ಬಂದಿಗಳು ದಾಳಿಯಲ್ಲಿ ಭಾಗಿಯಾಗಿದ್ದರು.
ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ಆರು ಜನರನ್ನು ದಸ್ತಗಿರಿ ಮಾಡಲಾಗಿದೆ. ಇವರಿಂದ ಜೂಜಾಟಕ್ಕೆ ಬಳಸಿದ್ದ 11,320 ನಗದು, ಇಸ್ಪೀಟ್ ಕಾರ್ಡ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More Stories
shimoga | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಏ. 18 ರ ತರಕಾರಿ ಬೆಲೆಗಳ ವಿವರ
ಶಿವಮೊಗ್ಗ (shivamogga), ಏ. 18: ಶಿವಮೊಗ್ಗದ ವಿನೋಬನಗರ ಎಪಿಎಂಸಿ ಸಗಟು ತರಕಾರಿ ಮಾರುಕಟ್ಟೆ ಪ್ರಾಂಗಣದಲ್ಲಿನ, ಏ. 18 ರಂದು ವಿವಿಧ ತರಕಾರಿಗಳ ಸಗಟು (wholesale) ಮಾರಾಟದ ದರಗಳ...