ಬಾಲಕಿಗೆ ಲೈಂಗಿಕ ಕಿರುಕುಳ : 10 ವರ್ಷ ಕಠಿಣ ಜೈಲು ಶಿಕ್ಷೆ – 1.50 ಲಕ್ಷ ರೂ. ದಂಡ

ಬಾಲಕಿಗೆ ಲೈಂಗಿಕ ಕಿರುಕುಳ : 10 ವರ್ಷ ಕಠಿಣ ಜೈಲು ಶಿಕ್ಷೆ – 1.50 ಲಕ್ಷ ರೂ. ದಂಡ

ಶಿವಮೊಗ್ಗ, ಜು. 15: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 1.50 ಲಕ್ಷ ರೂ. ದಂಡ ವಿಧಿಸಿ, ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯ – II (POCSO)  ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

ಭದ್ರಾವತಿ ತಾಲೂಕಿನ 22 ವರ್ಷದ ವ್ಯಕ್ತಿಯೇ ಶಿಕ್ಷೆಗೊಳಗಾದವ. ದಂಡ ಕಟ್ಟಲು ವಿಫಲವಾದಲ್ಲಿ ಹೆಚ್ಚುವರಿಯಾಗಿ 6 ತಿಂಗಳ ಕಾಲ ಸಾದಾ ಜೈಲು ಶಿಕ್ಷೆ ಅನುಭವಿಸುವಂತೆ ನ್ಯಾಯಾಧೀಶರು ಜು. 14 ರಂದು ನೀಡಿದ ತೀರ್ಪಿನಲ್ಲಿ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಹರಿಪ್ರಸಾದ್ ಅವರು ವಾದ ಮಂಡಿಸಿದ್ದರು.

ಪ್ರಕರಣದ ಹಿನ್ನಲೆ: 2022 ನೇ ಸಾಲಿನಲ್ಲಿ ಶಿಕ್ಷೆಗೊಳಗಾದ ವ್ಯಕ್ತಿಯು,17 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ  ಕುರಿತಂತೆ ನೊಂದ ಬಾಲಕಿಯು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಇದರ ಆಧಾರದ ಮೇಲೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದರು.  

ಈ ಸಂಬಂಧ ಭದ್ರಾವತಿ ಪೊಲೀಸ್ ಉಪ ವಿಭಾಗದ ಹಿರಿಯ ಸಹಾಯಕ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮ ಅವರು ಪ್ರಕರಣದ ತನಿಖೆ ನಡೆಸಿದ್ದರು. ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಶಿವಮೊಗ್ಗ ವಿಮಾನ ನಿಲ್ದಾಣ ಕಾರ್ಯಾಚರಣೆ ಕುರಿತಂತೆ ಡಿಸಿಯಿಂದ ಮಹತ್ವದ ಸಭೆ ಆ.11 ರಿಂದ 78 ಆಸನದ ಎಟಿಆರ್-72 ಇಂಡಿಗೋ ವಿಮಾನ ಸಂಚಾರ Previous post ಶಿವಮೊಗ್ಗ ವಿಮಾನ ನಿಲ್ದಾಣ ಕಾರ್ಯಾಚರಣೆ ಕುರಿತಂತೆ ಡಿಸಿಯಿಂದ ಮಹತ್ವದ ಸಭೆ
ಶಿವಮೊಗ್ಗ : ಗಾಂಜಾ ಮಾರಾಟ - ಇಬ್ಬರು ಯುವಕರ ಬಂಧನ ತೀರ್ಥಹಳ್ಳಿ : ಶಾಲಾ ಮೈದಾನದಲ್ಲಿ ಇಸ್ಪೀಟ್ ಜೂಜು - 10 ಜನರು ವಶಕ್ಕೆ ಶಿವಮೊಗ್ಗ – ಭದ್ರಾವತಿಯ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರ ಪಥ ಸಂಚಲನ Next post ಶಿವಮೊಗ್ಗ : ಗಾಂಜಾ ಮಾರಾಟ – ಇಬ್ಬರು ಯುವಕರ ಬಂಧನ