ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟದ ವಿರುದ್ದ ಕಠಿಣ ಕ್ರಮ ಕಾನೂನುಬಾಹಿರ ಕೃತ್ಯಗಳ ಬಗ್ಗೆ ಮಾಹಿತಿ ನೀಡಲಿರುವ ಯುವ ಪಡೆ ಶಿವಮೊಗ್ಗ ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ಹೇಳಿಕೆ

‘ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟದ ವಿರುದ್ದ ಕಠಿಣ ಕ್ರಮ’ : ಶಿವಮೊಗ್ಗ ಎಸ್ಪಿ ಜಿ.ಕೆ.ಮಿಥುನ್ ಕುಮಾರ್

ಸಾಗರ, ಜು.19: ‘ಹಳ್ಳಿಗಳಲ್ಲಿ ಕಾನೂನುಬಾಹಿರವಾಗಿ ಮದ್ಯ ಮಾರಾಟ ಮಾಡುವವರ ವಿರುದ್ದ ಕಠಿಣ ಕ್ರಮ ಜರುಗಿಸಲಾಗುವುದು’ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಸಾಗರ ತಾಲೂಕಿನ ಆನಂದಪುರದ ಸೀತಾರಾಮ ಕಲ್ಯಾಣ ಮಂಟಪದಲ್ಲಿ ಜು. 18 ರಂದು ಪೊಲೀಸ್ ಇಲಾಖೆಯಿಂದ ಆಯೋಜಿಸಿದ್ದ ಜನ ಸಂಪರ್ಕ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಶಿವಮೊಗ್ಗ ಎಸ್ಪಿ ಜಿ.ಕೆ.ಮಿಥುನ್ ಕುಮಾರ್

ಜಿಲ್ಲೆಯ ಪ್ರತಿಯೊಂದು ಹಳ್ಳಿಗಳಲ್ಲಿಯೂ, ಯುವಕರನ್ನೊಳಗೊಂಡ ಯುವ ಪಡೆ ರಚಿಸಲಾಗಿದೆ. ಸದರಿ ಪಡೆಯು ಗ್ರಾಮಗಳಲ್ಲಿ ನಡೆಯುವ ಕಾನೂನುಬಾಹಿರ ಚಟುವಟಿಕೆಗಳ ಬಗ್ಗೆ ಪೊಲೀಸ್ ಇಲಾಖೆಗೆ ಮಾಹಿತಿ ನೀಡಲಿದೆ. ಜೊತೆಗೆ ಆಯಾ ಗ್ರಾಮಗಳಲ್ಲಿ ನೆರವಿನ ಅಗತ್ಯವಿರುವವರಿಗೆ ಸಹಕಾರ ನೀಡಲಿದೆ ಎಂದು ತಿಳಿಸಿದ್ದಾರೆ.

ಈಗಾಗಲೇ ಪೊಲೀಸ್ ಇಲಾಖೆಯು, ಸಾರ್ವಜನಿಕರಲ್ಲಿ ಸಂಚಾರಿ ನಿಯಮಗಳ ಪಾಲನೆ ಕುರಿತಂತೆ ನಿರಂತರವಾಗಿ ಜಾಗೃತಿ ಮೂಡಿಸುವ ಕಾರ್ಯ ನಡೆಸಿಕೊಂಡು ಬರುತ್ತಿದೆ. ಆನಂದಪುರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಪೊಲೀಸ್ ಇಲಾಖೆ ಅಗತ್ಯ ಕ್ರಮಕೈಗೊಳ್ಳಲಿದೆ ಎಂದರು.

ಸಾಗರ ತಾಲೂಕಿನ ಆನಂದಪುರದ ಸೀತಾರಾಮ ಕಲ್ಯಾಣ ಮಂಟಪದಲ್ಲಿ ಜು. 18 ರಂದು ಪೊಲೀಸ್ ಇಲಾಖೆಯಿಂದ ಆಯೋಜಿಸಿದ್ದ ಜನ ಸಂಪರ್ಕ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕಾನೂನು ರೀತ್ಯ ಯಾರೇ ಪೊಲೀಸ್ ಠಾಣೆಗೆ ಆಗಮಿಸಿ ದೂರು ನೀಡಿದಾಗ ಅದನ್ನು ದಾಖಲಿಸಿಕೊಳ್ಳಲಾಗುತ್ತದೆ. ನಂತರ ಪ್ರಕರಣದ ತನಿಖೆಯ ವೇಳೆ ಕಂಡುಬರುವ ಅಂಶಗಳ ಆಧಾರದ ಮೇಲೆ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ದಾಖಲಿಸಲಾಗುತ್ತದೆ ಎಂದು ದೂರಿಗೆ ಪ್ರತಿದೂರು ದಾಖಲಾಗುತ್ತಿರುವ ಕುರಿತಂತೆ ಸಾರ್ವಜನಿಕರ ಪ್ರಶ್ನೆಗಳಿಗೆ ಜಿಲ್ಲಾ ರಕ್ಷಣಾಧಿಕಾರಿಗಳು ಪ್ರತಿಕ್ರಿಯೆ ನೀಡಿದ್ದಾರೆ.

ಸಭೆಯಲ್ಲಿ ಸಾಗರ ಉಪ ವಿಭಾಗದ ಹಿರಿಯ ಸಹಾಯಕ ಪೊಲೀಸ್ ಅಧೀಕ್ಷಕ ರೋಹನ್ ಜಗದೀಶ್, ಸಾಗರ ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್’ಪೆಕ್ಟರ್ ಪ್ರವೀಣ್, ಆನಂದಪುರ ಪೊಲೀಸ್ ಠಾಣೆ ಸಬ್ ಇನ್ಸ್’ಪೆಕ್ಟರ್ ಯುವರಾಜ್ ಉಪಸ್ಥಿತರಿದ್ದರು.

ಸಭೆಯಲ್ಲಿ ಸಾಗರ ಉಪ ವಿಭಾಗದ ಹಿರಿಯ ಸಹಾಯಕ ಪೊಲೀಸ್ ಅಧೀಕ್ಷಕ ರೋಹನ್ ಜಗದೀಶ್, ಸಾಗರ ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್’ಪೆಕ್ಟರ್ ಪ್ರವೀಣ್, ಆನಂದಪುರ ಪೊಲೀಸ್ ಠಾಣೆ ಸಬ್ ಇನ್ಸ್’ಪೆಕ್ಟರ್ ಯುವರಾಜ್ ಉಪಸ್ಥಿತರಿದ್ದರು.

ಅರಣ್ಯ ಇಲಾಖೆ ಅಧಿಕಾರಿ ಸಿಬ್ಬಂದಿಗಳ ಕರ್ತವ್ಯಕ್ಕೆ ಅಡ್ಡಿ ಪ್ರಕರಣ : ಇಬ್ಬರಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ Previous post ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿ ಕರ್ತವ್ಯಕ್ಕೆ ಅಡ್ಡಿ ಪ್ರಕರಣ : ಇಬ್ಬರಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ
ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿಗಳ ವಿತರಣೆ Next post ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿಗಳ ವಿತರಣೆ