
ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿಗಳ ವಿತರಣೆ
ಶಿವಮೊಗ್ಗ, ಜು. 19: ಶಿವಮೊಗ್ಗ ನಗರದ ಹೊರವಲಯ ಸೋಮಿನಕೊಪ್ಪದಲ್ಲಿರುವ, ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಬುಧವಾರ ಶೈಕ್ಷಣಿಕ ಸಾಮಗ್ರಿಗಳ ವಿತರಣೆ ಮಾಡಲಾಯಿತು.
ಶೈಕ್ಷಣಿಕ ಸಾಮಗ್ರಿಗಳ ವಿತರಣೆ ವೇಳೆ ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯರಾದ ಕಿರಣ್ ವಾಜಿ, ಉರ್ದು ಭಾಷಾ ಶಿಕ್ಷಕರಾದ ಮೊಹಮ್ಮದ್ ಜಹೀರ್ ಅಬ್ಬಾಸ್, ಸಮಾಜ ವಿಜ್ಞಾನ ಶಿಕ್ಷಕರಾದ ಎನ್.ನಾಗರಾಜ್, ಆಂಗ್ಲ ಭಾಷಾ ಶಿಕ್ಷಕಿ ಆಯೇಷಾ ಅಮ್ರೀನ್,
ಕನ್ನಡ ಭಾಷಾ ಶಿಕ್ಷಕಿ ರೇಣುಕಾ ಎಸ್., ಗಣಿತ ಶಾಸ್ತ್ರ ಶಿಕ್ಷಕಿ ನಿರ್ಮಲಬಾಯಿ ಎಸ್., ವಿಜ್ಞಾನ ಶಿಕ್ಷಕಿ ನೀತು ಡಿ.ಜಿ., ಹಿಂದಿ ಭಾಷಾ ಶಿಕ್ಷಕಿ ಸ್ವಪ್ನ ಎನ್.ಎಸ್. ಅವರು ಉಪಸ್ಥಿತರಿದ್ದರು.
ನೆರವಿನಹಸ್ತ: ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಡಿ ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಸರ್ಕಾರಿ ಶಾಲೆ ಕಾರ್ಯನಿರ್ವಹಣೆ ಮಾಡುತ್ತಿದೆ. 6 ರಿಂದ 10 ನೇ ತರಗತಿಯವರೆಗೆ ವಿದ್ಯಾರ್ಥಿಗಳು ಅಭ್ಯಾಸ ನಡೆಸುತ್ತಿದ್ದಾರೆ.
ಪ್ರತಿ ವರ್ಷ ಇಲಾಖೆಯು ಎಲ್ಲ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಅಗತ್ಯವಾದ ಪಠ್ಯ ಪುಸ್ತಕ ಮಾತ್ರವಲ್ಲದೆ ಬ್ಯಾಗ್, ನೋಟ್ ಬುಕ್, ಪೆನ್, ಪೆನ್ಸಿಲ್, ಸಮವಸ್ತ್ರ ಸೇರಿದಂತೆ ಶೈಕ್ಷಣಿಕ ವರ್ಷಕ್ಕೆ ಅಗತ್ಯವಾದ ಶೈಕ್ಷಣಿಕ ಪರಿಕರಗಳನ್ನು ಉಚಿತವಾಗಿ ವಿತರಿಸುತ್ತಿದೆ.

More Stories
shimoga | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಏ. 18 ರ ತರಕಾರಿ ಬೆಲೆಗಳ ವಿವರ
ಶಿವಮೊಗ್ಗ (shivamogga), ಏ. 18: ಶಿವಮೊಗ್ಗದ ವಿನೋಬನಗರ ಎಪಿಎಂಸಿ ಸಗಟು ತರಕಾರಿ ಮಾರುಕಟ್ಟೆ ಪ್ರಾಂಗಣದಲ್ಲಿನ, ಏ. 18 ರಂದು ವಿವಿಧ ತರಕಾರಿಗಳ ಸಗಟು (wholesale) ಮಾರಾಟದ ದರಗಳ...