ಪತ್ನಿಯ ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ!

ಪತ್ನಿಯ ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ!

ಶಿವಮೊಗ್ಗ, ಜು. 20: ಪತ್ನಿಯ ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ ಹಾಗೂ 25 ಸಾವಿರ ರೂಪಾಯಿ ದಂಡ ವಿಧಿಸಿ, ಶಿವಮೊಗ್ಗದ 1 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

ಶಿವಮೊಗ್ಗದ ಬೊಮ್ಮನಕಟ್ಟೆ ಬಡಾವಣೆ ನಿವಾಸಿ ಅಲ್ಲಾಭಕ್ಷಿ (38) ಶಿಕ್ಷೆಗೊಳಗಾದ ಪತಿ ಎಂದು ಗುರುತಿಸಲಾಗಿದೆ. ದಂಡ ಕಟ್ಟಲು ವಿಫಲವಾದಲ್ಲಿ ಹೆಚ್ಚುವರಿಯಾಗಿ 4 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಅನುಭವಿಸುವಂತೆ ನ್ಯಾಯಾಧೀಶರು ಆದೇಶಿಸಿದ್ದಾರೆ.

ಜು. 20 ರಂದು ನ್ಯಾಯಾಧೀಶರಾದ ಕೆ. ಮಾನು ಅವರು ಈ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಮಮತ ಕೆ.ಎಸ್. ಅವರು ವಾದ ಮಂಡಿಸಿದ್ದರು.

ಪ್ರಕರಣದ ಹಿನ್ನೆಲೆ: 5-1-2021 ರ ಮಧ್ಯಾಹ್ನದ ವೇಳೆ ಕೌಟಂಬಿಕ ಕಲಹದ ಹಿನ್ನೆಲೆಯಲ್ಲಿ ಅಲ್ಲಾಭಕ್ಷಿಯು ಡಿಶ್ ಕೇಬಲ್ ವೈರ್ ನಿಂದ ಪತ್ನಿಯ ಕುತ್ತಿಗೆ ಬಿಗಿದು, ಉಸಿರುಗಟ್ಟಿಸಿ ಕೊಲೆ ಮಾಡಿದ್ದ. ಈ ಕುರಿತಂತೆ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇನ್ಸ್’ಪೆಕ್ಟರ್ ರವಿ ಎನ್.ಎಸ್. ಅವರು ಪ್ರಕರಣದ ತನಿಖೆ ನಡೆಸಿದ್ದರು. ಅಲ್ಲಾಭಕ್ಷಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದರು. ನಂತರ ನ್ಯಾಯಾಲಯಕ್ಕೆ ಆರೋಪಪಟ್ಟಿ ದಾಖಲಿಸಿದ್ದರು.

ಕೃಷಿ – ತೋಟಗಾರಿಕೆ ವಿವಿ ; ಕುವೆಂಪು ವಿವಿಯ ಗೌರವ ಡಾಕ್ಟರೇಟ್ ಪುರಸ್ಕೃತರ ಪಟ್ಟಿ ಪ್ರಕಟ Previous post ಕೃಷಿ – ತೋಟಗಾರಿಕೆ ವಿವಿ ; ಕುವೆಂಪು ವಿವಿಯ ಗೌರವ ಡಾಕ್ಟರೇಟ್ ಪುರಸ್ಕೃತರ ಪಟ್ಟಿ ಪ್ರಕಟ
ಭದ್ರಾವತಿ : ಪತ್ನಿ ಮನೆ ಎದುರಲ್ಲಿಯೇ ಭೀಕರವಾಗಿ ಹತ್ಯೆಗೀಡಾದ ರೌಡಿ ಶೀಟರ್! Next post ಭದ್ರಾವತಿ : ಪತ್ನಿ ಮನೆ ಎದುರಲ್ಲಿಯೇ ಭೀಕರವಾಗಿ ಹತ್ಯೆಗೀಡಾದ ರೌಡಿ ಶೀಟರ್!