
ಚಿತ್ರದುರ್ಗ : ಕಲುಷಿತ ನೀರು ಸೇವನೆ ಪ್ರಕರಣ – ತನಿಖೆಗೆ ಸಿಎಂ ಆದೇಶ
ಬೆಂಗಳೂರು / ಚಿತ್ರದುರ್ಗ, ಆ. 2: ಚಿತ್ರದುರ್ಗದ ಕವಾಡಿಗರ ಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿರುವ ಘಟನೆ ಕುರಿತು ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥ ಅಧಿಕಾರಿಯನ್ನು ಕೂಡಲೇ ಅಮಾನತು ಮಾಡುವಂತೆಯೂ ಸಿಎಂ ಸೂಚನೆ ನೀಡಿದ್ದಾರೆ.
ಚಿತ್ರದುರ್ಗ ಜಿಲ್ಲಾಧಿಕಾರಿ ಜೊತೆ ದೂರವಾಣಿ ಮೂಲಕ ಮಾತನಾಡಿ ಘಟನೆಯ ಸಂಪೂರ್ಣ ಮಾಹಿತಿ ಪಡೆದುಕೊಂಡಿರುವ ಮುಖ್ಯಮಂತ್ರಿಗಳು, ಘಟನೆಗೆ ಯಾರೇ ಕಾರಣರಾಗಿದ್ದರೂ ಕ್ರಮ ಜರುಗಿಸುವಂತೆ ಸೂಚಿಸಿದ್ದಾರೆ.
ಮೂರಕ್ಕೇರಿಕೆ : ಚಿತ್ರದುರ್ಗದ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡವರ ಸಂಖ್ಯೆ 78 ಕ್ಕೇರಿದೆ. ಈ ನಡುವೆ ದಾವಣಗೆರೆಯ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕನೋರ್ವ ಮೃತಪಟ್ಟಿದ್ದು, ಇದರಿಂದ ಮೃತರ ಸಂಖ್ಯೆ ಮೂರಕ್ಕೇರಿದಂತಾಗಿದೆ.