ಎಲ್ಲ ಅಂಗಡಿ – ವಾಣಿಜ್ಯ ಸಂಸ್ಥೆಗಳ ನೋಂದಣಿ ಕಡ್ಡಾಯ : ಕಾರ್ಮಿಕ ಇಲಾಖೆ ಪ್ರಕಟಣೆ

ಶಿವಮೊಗ್ಗ, ಆ. 3:  ಶಿವಮೊಗ್ಗ ಜಿಲ್ಲೆಯ ಎಲ್ಲ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ-1961 ಕಲಂ 4(1), (3) ಹಾಗೂ ನಿಯಮ 3 ರ ಅಡಿ ನೋಂದಣೆ ಮಾಡಿಕೊಳ್ಳುವಂತೆ  ಮಾಲೀಕರಿಗೆ  ಕಾರ್ಮಿಕ ಇಲಾಖೆ ಸೂಚನೆ ನೀಡಿದೆ.

ನೋಂದಣಿಯಾಗದ (ಕಾರ್ಮಿಕರಿರದ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು ಒಳಗೊಂಡಂತೆ) ಎಲ್ಲಾ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ.

ರಾಜ್ಯ ಸರ್ಕಾರದ http://www.ekarmika.karnatak.gov.in/ekarmika/static/home.aspx ತಂತ್ರಾಂಶದಲ್ಲಿ 15 ದಿನಗಳೊಳಗಾಗಿ ಅವಶ್ಯಕ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಿ ನೋಂದಣಿ ಪತ್ರ ಪಡೆದುಕೊಳ್ಳಬೇಕು. ತಪ್ಪಿದಲ್ಲಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಮಿಕ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. 

ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ನಿರೀಕ್ಷಕರ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-248940 ನ್ನು ಸಂಪರ್ಕಿಸುವಂತೆ ಪತ್ರಿಕಾ ಪ್ರಕಟಣೆಯಲ್ಲಿ ಕಾರ್ಮಿಕ ಇಲಾಖೆ ತಿಳಿಸಿದೆ.

Previous post ತಾಳಗುಪ್ಪ – ಹುಬ್ಬಳ್ಳಿ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಕೇಂದ್ರ ಸಚಿವರಿಗೆ ಸಂಸದರ ಮನವಿ
Next post ಪ್ರಚೋದನಾತ್ಮಕ ವೀಡಿಯೋ : ಸೋಶಿಯಲ್ ಮೀಡಿಯಾಗಳ ಮೇಲೆ ಪೊಲೀಸರ ಹದ್ದಿನ ಕಣ್ಣು – ಕಠಿಣ ಕ್ರಮದ ಎಚ್ಚರಿಕೆ!