
ಶಿವಮೊಗ್ಗ : ಅಬ್ಬಲಗೆರೆ ಗ್ರಾಪಂ ಅಧ್ಯಕ್ಷ – ಉಪಾಧ್ಯಕ್ಷರ ಆಯ್ಕೆ
ಶಿವಮೊಗ್ಗ, ಆ. 9: ಶಿವಮೊಗ್ಗ ತಾಲೂಕು ಅಬ್ಬಲಗೆರೆ ಗ್ರಾಮ ಪಂಚಾಯ್ತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಇತ್ತೀಚೆಗೆ ಚುನಾವಣೆ ನಡೆಯಿತು.
ಅಧ್ಯಕ್ಷರಾಗಿ ಬಸವನಗಂಗೂರು ಗ್ರಾಮದ ಸದಸ್ಯೆ ದೇವಮ್ಮ ವಿಜಯಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಅಬ್ಬಲಗೆರೆ ಗ್ರಾಮದ ಸದಸ್ಯ ಎಂ. ಅಣ್ಣಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರಾದ ಕಾಂತರಾಜ್ ಅವರು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಈ ಸಂದರ್ಭದಲ್ಲಿ ಗ್ರಾಪಂ ಪಿಡಿಓ ಶಿವಕುಮಾರ್, ಕಾರ್ಯದರ್ಶಿ ಯೋಗೇಶ್ ಸೇರಿದಂತೆ ಗ್ರಾಪಂ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ನೂತನ ಅಧ್ಯಕ್ಷ – ಉಪಾಧ್ಯಕ್ಷರಿಗೆ ಇತರೆ ಗ್ರಾಪಂ ಸದಸ್ಯರು ಹಾಗೂ ಸ್ಥಳೀಯ ಮುಖಂಡರು ಪುಷ್ಪಗುಚ್ಛ ನೀಡಿ ಅಭಿನಂದಿಸಿದರು.

ಸಮರ್ಥ ನಿರ್ವಹಣೆ: ‘ತಮ್ಮ ಅಧಿಕಾರಾವಧಿಯಲ್ಲಿ ಗ್ರಾಮಸ್ಥರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಸ್ಪಂದನೆ ಮಾಡುತ್ತೆನೆ. ಅತ್ಯಂತ ಸಮರ್ಥವಾಗಿ ಕಾರ್ಯಭಾರ ನಿರ್ವಹಣೆ ಮಾಡುವುದಾಗಿ’ ನೂತನ ಗ್ರಾಪಂ ಅಧ್ಯಕ್ಷೆ ದೇವಮ್ಮ ಅವರು ತಿಳಿಸಿದ್ದಾರೆ.