
ಬೆಂಗಳೂರಿನಲ್ಲಿ ಕೆಎಎಸ್ ಅಧಿಕಾರಿಗಳ ಸಂಘದ ಶತಮಾನೋತ್ಸವ ಸಮಾರಂಭ
ಬೆಂಗಳೂರು, ಆ. 9: ಕರ್ನಾಟಕ ಆಡಳಿತ ಸೇವೆ (ಕೆಎಎಸ್) ಅಧಿಕಾರಿಗಳ ಸಂಘದ ಶತಮಾನೋತ್ಸವ ಸಮಾರಂಭವು ಬುಧವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಲಾಗಿತ್ತು.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಮಾರಂಭ ಉದ್ಘಾಟಿಸಿದರು. ಸಂಘದ ಹೆಚ್ಚುವರಿ ಕೊಠಡಿಗಳ ನಿರ್ಮಾಣ ಮತ್ತು ನವೀಕರಣ ಕಾಮಗಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಂಕುಸ್ಥಾಪನೆ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಕೃಷ್ಣ ಭೈರೇಗೌಡ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತ ಡಾ.ಇ.ವಿ. ರಮಣರೆಡ್ಡಿ,

ಕೆ.ಎ.ಎಸ್. ಅಧಿಕಾರಿಗಳ ಸಂಘದ ಅಧ್ಯಕ್ಷ ರವಿ ತಿರ್ಲಾಪೂರ, ಡಾ. ನಾಗೇಂದ್ರ ಎಫ್ ಹೊನ್ನಳ್ಳಿ ಸೇರಿದಂತೆ ಇತರೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಶತಮಾನೋತ್ಸವ: 1919 ರಲ್ಲಿ ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘ ಸ್ಥಾಪಿಸಲಾಗಿತ್ತು. 2019 ಕ್ಕೆ ಸಂಘವು 100 ವರ್ಷ ಪೂರೈಸಿತ್ತು. ಆದರೆ ಕೋವಿಡ್ ಕಾರಣದಿಂದ ಶತಮಾನೋತ್ಸವ ಸಮಾರಂಭ ಮುಂದೂಡಲಾಗಿತ್ತು.