
ಪ್ಲಾಸ್ಟಿಕ್ ರಾಷ್ಟ್ರ ಧ್ವಜ ಬಳಕೆ ನಿಷೇಧ
ಶಿವಮೊಗ್ಗ, ಆ. 11: ಭಾರತ ಸರ್ಕಾರದ ಗೃಹ ಮಂತ್ರಾಲಯದ ಆದೇಶದ ಅನುಸಾರ, ಪ್ಲಾಸ್ಟಿಕ್‍ನಿಂದ ತಯಾರಿಸಿದ ರಾಷ್ಟ್ರ ಧ್ವಜ ಬಳಕೆ ನಿಷೇಧಿಸಲಾಗಿದೆ ಎಂದು ಕರ್ನಾಟ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ತಿಳಿಸಿದೆ.
ರಾಷ್ಟ್ರೀಯ ಗೌರವ ಕಾಯ್ದೆ 1971 ಮತ್ತು ಭಾರತ ಧ್ವಜ ಸಂಹಿತೆ 2002 ರ ಅಡಿ ಈ ಆದೇಶ ಹೊರಡಿಸಲಾಗಿದೆ. ಎಲ್ಲಾ ಸರ್ಕಾರಿ, ಖಾಸಗಿ ಸಂಸ್ಥೆಗಳು ಹಾಗೂ ಸಾರ್ವಜನಿಕರು ಪ್ರಮುಖ ರಾಷ್ಟ್ರೀಯ, ಸಾಂಸ್ಕೃತಿಕ ಮತ್ತು ಕ್ರೀಡಾಕೂಟಗಳು
ಹಾಗೂ ಸ್ವಾತಂತ್ರ್ಯ ದಿನಾಚರಣೆಯಂದು ನಿಷೇಧಿತ ಪ್ಲಾಸ್ಟಿಕ್ ಧ್ವಜವನ್ನು ಬಳಸದಂತೆ ಕರ್ನಾಟ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಶಿಲ್ಪ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.