ಆ. 27 ರಂದು ಗೃಹ ಲಕ್ಷ್ಮಿ ಯೋಜನೆ ಉದ್ಘಾಟನಾ ಸಮಾರಂಭ : ಶಿವಮೊಗ್ಗ ಡಿಸಿಯಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ

ಆ. 27 ರಂದು ಗೃಹ ಲಕ್ಷ್ಮಿ ಯೋಜನೆ ಉದ್ಘಾಟನಾ ಸಮಾರಂಭ : ಶಿವಮೊಗ್ಗ ಡಿಸಿಯಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ

ಶಿವಮೊಗ್ಗ, ಆ. 16: ‘ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2000 ರೂ. ನೀಡುವ ಗೃಹಲಕ್ಷ್ಮಿ ಯೋಜನೆಗೆ ಆ.27 ರಂದು ಮುಖ್ಯಮಂತ್ರಿಗಳು ಬೆಳಗಾವಿಯಲ್ಲಿ ಚಾಲನೆ ನೀಡುತ್ತಿದ್ದು, ಜಿಲ್ಲೆಯ ಎಲ್ಲ ಗ್ರಾ.ಪಂ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯಕ್ರಮ ಆಯೋಜಿಸಲು ಅಗತ್ಯ ಸಿದ್ದತೆ  ಮಾಡಿಕೊಳ್ಳುವಂತೆ’ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್  ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಆ. 27 ರಂದು ಗೃಹ ಲಕ್ಷ್ಮಿ ಯೋಜನೆ ಉದ್ಘಾಟನಾ ಸಮಾರಂಭ : ಶಿವಮೊಗ್ಗ ಡಿಸಿಯಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ

ಬುಧವಾರ ಶಿವಮೊಗ್ಗ ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ತಹಶೀಲ್ದಾರ್, ತಾಪಂ ಇಓ, ಸ್ಥಳೀಯ ಸಂಸ್ಥೆ ಮುಖ್ಯಸ್ಥರು, ಸಿಡಿಪಿಓಗಳೊಂದಿಗೆ ಸಭೆ ನಡೆಸಿ ಅವರು ಈ ಸೂಚನೆ ನೀಡಿದ್ದಾರೆ.

ಮುಖ್ಯಮಂತ್ರಿಗಳು ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮದ ನೇರ ಪ್ರಸಾರದ ವೀಕ್ಷಣೆ ವ್ಯವಸ್ಥೆ ಮಾಡಬೇಕು. ಗ್ರಾಪಂ ಹಾಗೂ ಸ್ಥಳೀಯ ಸಂಸ್ಥೆಗಳ ವಾರ್ಡುಗಳಲ್ಲಿ, ಎಲ್‍ಇಡಿ ಪರದೆ ಅಥವಾ ಟಿವಿ ವ್ಯವಸ್ಥೆ ಮಾಡಿಕೊಳ್ಳಬೇಕು. ಫಲಾನುಭವಿಗಳು ಮತ್ತು ಸಾರ್ವಜನಿಕರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು. ಸರ್ಕಾರಿ ಕಟ್ಟಡಗಳು ಅಥವಾ ಸಭಾ ಭವನದಲ್ಲಿ ಕಾರ್ಯಕ್ರಮ ಆಯೋಜಿಸಬೇಕು. ಅಗತ್ಯ ಮೂಲಸೌಕರ್ಯ ವ್ಯವಸ್ಥೆ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಅತಿಥಿಗಳಾಗಿ ಭಾಗವಹಿಸಲು ಕ್ರಮ ಕೈಗೊಳ್ಳಬೇಕು. ಪ್ರತಿ ಗ್ರಾ.ಪಂ ಗಳಲ್ಲಿ, ಮಹಾನಗರಪಾಲಿಕೆ ಹಾಗೂ ನಗರಸಭೆಗಳಲ್ಲಿ ಪ್ರತಿ ವಾರ್ಡುಗಳು ಹಾಗೂ ಪುರಸಭೆಗಳಲ್ಲಿ ಫಲಾನುಭವಿಗಳ ಸಂಖ್ಯೆಗನುಗುಣವಾಗಿ 3 ರಿಂದ 4 ವಾರ್ಡುಗಳಲ್ಲಿ ಕಾರ್ಯಕ್ರಮ ಆಯೋಜನೆಗೆ ಕ್ರಮವಹಿಸಬೇಕು ಎಂದು ತಿಳಿಸಿದ್ದಾರೆ.           

ಆ. 27 ರಂದು ಗೃಹ ಲಕ್ಷ್ಮಿ ಯೋಜನೆ ಉದ್ಘಾಟನಾ ಸಮಾರಂಭ : ಶಿವಮೊಗ್ಗ ಡಿಸಿಯಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ

ತಾಲ್ಲೂಕು ಪಂಚಾಯ್ತಿ ಹಾಗೂ ಗ್ರಾ.ಪಂಗಳಲ್ಲಿ ಕಾರ್ಯಕ್ರಮದ ಮೇಲ್ವಿಚಾರಣೆಗಾಗಿ ಈಗಲೇ ನೋಡಲ್ ಅಧಿಕಾರಿಗಳನ್ನು ನಿಯೋಜಿಸಬೇಕು. ನೋಡಲ್ ಅಧಿಕಾರಿಗಳು ಕಾರ್ಯಕ್ರಮದ ಸಿದ್ದತೆಗಳನ್ನು ಗಮನಿಸಿ ವರದಿ ಸಲ್ಲಿಸಬೇಕೆಂದರು.

ಜಿ.ಪಂ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ಮಾತನಾಡಿ, ಆ.27 ರ ಈ ಕಾರ್ಯಕ್ರಮದ ಕುರಿತು ಜಿ.ಪಂ ಯೋಜನಾ ನಿರ್ದೇಶಕರು ಗ್ರಾಪಂವಾರು ಉಸ್ತುವಾರಿ ನೋಡಿಕೊಳ್ಳಬೇಕು. ಹೊಸನಗರ, ತೀರ್ಥಹಳ್ಳಿ, ಸಾಗರಗಳಲ್ಲಿ ಏನಾದರೂ ನೆಟವರ್ಕ್ ಸಮಸ್ಯೆಗಳಿದ್ದರೆ ಸರಿಪಡಿಸಿಕೊಂಡು ಈಗಿನಿಂದಲೇ ಸಿದ್ದತೆ ಆರಂಭಿಸಬೇಕು ಹಾಗೂ ಎಲ್ಲ ತಾಲ್ಲೂಕುಗಳ ಸಿಡಿಪಿಓ ಗಳು ಕಾರ್ಯಕ್ರಮದ ತಯಾರಿ ಕುರಿತು ಮೇಲ್ವಿಚಾರಣೆ ನಡೆಸಿ ಈ ಬಗ್ಗೆ ವರದಿ ಸಲ್ಲಿಸಬೇಕು. ಪ್ರತಿ ಗ್ರಾ.ಪಂ ಯಲ್ಲಿ ಫಲಾನುಭವಿಗಳು, ಸ್ವಸಹಾಯ ಸಂಘಗಳ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಸಾರ್ವಜನಿಕರು ಕಾರ್ಯಕ್ರಮಕ್ಕೆ ಹಾಜರಾಗುವಂತೆ ಕ್ರಮ ವಹಿಸಬೇಕೆಂದು ಸೂಚಿಸಿದರು.

ಸಭೆಯಲ್ಲಿ ತಹಶೀಲ್ದಾರ್ ನಾಗರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಸಂತೋಷಕುಮಾರ್, ಸಿಡಿಪಿಓ ಚಂದ್ರಪ್ಪ, ತಾಲ್ಲೂಕುಗಳ ತಹಶೀಲ್ದಾರರು, ಇಓ, ಸಿಡಿಪಿಓ, ಸ್ಥಳೀಯ ಸಂಸ್ಥೆ ಮುಖ್ಯಸ್ಥರು ಹಾಜರಿದ್ದರು.

ಶಿವಮೊಗ್ಗ : ಅಂತಿಮ ಹಂತಕ್ಕೆರೈಲ್ವೆ ಫ್ಲೈ ಓವರ್ ಕಾಮಗಾರಿ Previous post ಶಿವಮೊಗ್ಗ – ಅಂತಿಮ ಹಂತಕ್ಕೆ ಫ್ಲೈ ಓವರ್ ಕಾಮಗಾರಿ : ಉದ್ಘಾಟನೆ ಯಾವಾಗ..?
ಇನ್ಸ್ಪೆಕ್ಟರ್ ಆದ 8 ವರ್ಷದ ಬಾಲಕ : ಪುಟಾಣಿಯ ಆಸೆ ಈಡೇರಿಸಿದ ಶಿವಮೊಗ್ಗ ಪೊಲೀಸ್ ಇಲಾಖೆ! ಶಿವಮೊಗ್ಗ, ಆ. 16: ದೊಡ್ಡವನಾದ ಮೇಲೆ ಪೊಲೀಸ್ ಅಧಿಕಾರಿಯಾಗಬೇಕೆಂಬ ಅದಮ್ಯ ಆಸೆ ಹೊಂದಿದ್ದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ 8 ವರ್ಷದ ಬಾಲಕನ ಕೋರಿಕೆಯನ್ನು, ಶಿವಮೊಗ್ಗ ಪೊಲೀಸ್ ಇಲಾಖೆ ಈಡೇರಿಸಿದೆ..! ಪುಟಾಣಿಯ ಆಸೆಯಂತೆ ಆತನನ್ನು ಪೊಲೀಸ್ ಠಾಣೆಗೆ ಕರೆಯಿಸಿ, ಪೊಲೀಸ್ ಅಧಿಕಾರಿಯಾಗುವ ಅವಕಾಶ ಕಲ್ಪಿಸಿದೆ. ಈ ಮೂಲಕ ಬಾಲಕನ ಬದುಕಿಗೆ ಹೊಸ ಚೈತನ್ಯ ತುಂಬುವ ಹೃದಯ ಸ್ಪರ್ಶಿ ಕಾರ್ಯ ನಡೆಸಿದೆ. ಹೌದು. ಮೂಲತಃ ಶಿವಮೊಗ್ಗದವರಾದ ಪ್ರಸ್ತುತ ಬಾಳೆಹೊನ್ನೂರಿನಲ್ಲಿ ನೆಲೆಸಿರುವ ತಬ್ರೇಜ್ ಖಾನ್ ಎಂಬುವರ ಪುತ್ರ ಆಜಾನ್ ಖಾನ್ ಪೊಲೀಸ್ ಅಧಿಕಾರಿಯಾಗಿ ಕಾರ್ಯಾಭಾರ ನಿರ್ವಹಿಸಿದ ಪುಟಾಣಿಯಾಗಿದ್ದಾನೆ. ಬುಧವಾರ ಸಂಜೆ ದೊಡ್ಡಪೇಟೆ ಪೊಲೀಸ್ ಠಾಣೆಗೆ ಪೊಲೀಸ್ ಅಧಿಕಾರಿ ಬಟ್ಟೆ ತೊಟ್ಟು ಆಗಮಿಸಿದ ಬಾಲಕನನ್ನು ಸ್ವತಃ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಎಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ ಸೇರಿದಂತೆ ಹಿರಿಯ ಅಧಿಕಾರಿಗಳು ಠಾಣೆ ಮುಂಭಾಗ ಆತ್ಮೀಯ ಸ್ವಾಗತ ನೀಡಿದರು. ಠಾಣೆಯ ಇನ್ಸ್’ಪೆಕ್ಟರ್ ಕುರ್ಚಿಯಲ್ಲಿ ಕುಳಿತ ಆಜಾನ್ ಖಾನ್ ಪೊಲೀಸ್ ಅಧಿಕಾರಿ – ಸಿಬ್ಬಂದಿಗಳಿಗೆ ಕೆಲಸ ಕಾರ್ಯಗಳ ಕುರಿತಂತೆ ಸಲಹೆ ಸೂಚನೆ ನೀಡಿದ. ಪೊಲೀಸ್ ಅಧಿಕಾರಿಯಾಗುವ ತನ್ನ ಆಸೆ ಈಡೇರಿದ್ದಕ್ಕೆ ಬಾಲಕ ಸಂತಸಗೊಂಡಿದ್ದ. ನಗುನಗುತ್ತಲೆ ತನ್ನ ಸಂತಸ ಹಂಚಿಕೊಂಡ. Next post ಇನ್ಸ್‌ಪೆಕ್ಟರ್ ಆದ 8 ವರ್ಷದ ಬಾಲಕ : ಪುಟಾಣಿಯ ಆಸೆ ಈಡೇರಿಸಿದ ಶಿವಮೊಗ್ಗ ಪೊಲೀಸ್ ಇಲಾಖೆ!