
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್’ಗೆ ಶಾಸಕ ಎಸ್.ರುದ್ರೇಗೌಡ ಅಭಿನಂದನೆ
ಶಿವಮೊಗ್ಗ, ಫೆ. 2: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್, ದೇಶದ ಅಭಿವೃದ್ಧಿಗೆ ಪೂರಕವಾಗಿದೆ ಎಂದು ವಿಧಾನ ಪರಿಷತ್ ಶಾಸಕ ಎಸ್.ರುದ್ರೇಗೌಡ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸರ್ವರಿಗೂ ಸಮಭಾವ – ಸಮಬಾಳ್ವೆ, ಮಹಿಳೆಯರು, ವೃದ್ಧರು, ಉದ್ಯಮಿಗಳು, ನೌಕರರು, ಉದ್ಯೋಗಿಗಳು, ರೈತರು, ಮೀನುಗಾರರು ಎಲ್ಲರಿಗೂ ಕೇಂದ್ರ ಬಜೆಟ್‌ನಲ್ಲಿ ಕೊಡುಗೆಗಳನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.
ವಿಶೇಷವಾಗಿ ಬಜೆಟ್ ನಲ್ಲಿ ಕರ್ನಾಟಕ ರಾಜ್ಯದ ಪ್ರಮುಖ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಅನುದಾನವನ್ನು ರೈತರ ಪರವಾಗಿ ಮೀಸಲಿಟ್ಟಿರುವುದು ಅಭಿನಂದನೀಯ ಎಂದು ಹೇಳಿದ್ದಾರೆ
ಜನಸ್ನೇಹಿ ಬಜೆಟ್ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಹಾಗೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ, ಸಮಸ್ತ ಕರ್ನಾಟಕ ಜನತೆಯ ಪರವಾಗಿ ಧನ್ಯವಾದ ಅರ್ಪಿಸುವುದಾಗಿ ಎಸ್.ರುದ್ರೇಗೌಡ ಅವರು ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ನೀಡಿದ್ದಾರೆ.