ಮಹಾತ್ಮ ಗಾಂಧೀಜಿ ಪ್ರತಿಮೆ ಧ್ವಂಸಗೊಳಿಸಿದ ದುಷ್ಕರ್ಮಿಗಳು : ನಾಗರೀಕರ ಪ್ರತಿಭಟನೆ : ಕಠಿಣ ಕ್ರಮಕ್ಕೆ ಆಗ್ರಹ!

ಮಹಾತ್ಮ ಗಾಂಧೀಜಿ ಪ್ರತಿಮೆ ಧ್ವಂಸಗೊಳಿಸಿದ ದುಷ್ಕರ್ಮಿಗಳು!

ಶಿವಮೊಗ್ಗ, ಆ. 21: ಅಪರಿಚಿತ ದುಷ್ಕರ್ಮಿಗಳು ಮಹಾತ್ಮ ಗಾಂಧೀಜಿ ಅವರ ಪ್ರತಿಮೆ ಧ್ವಂಸಗೊಳಿಸಿರುವ ಘಟನೆ, ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಹೊಳೆಹೊನ್ನೂರು ಪಟ್ಟಣದಲ್ಲಿ ತಡರಾತ್ರಿ ನಡೆದಿದ್ದು, ಸೋಮವಾರ ಮುಂಜಾನೆ ಕೃತ್ಯ ಬೆಳಕಿಗೆ ಬಂದಿದೆ.

ಹೊಳೆಹೊನ್ನೂರು ಪಟ್ಟಣದ ಮಹಾತ್ಮ ಗಾಂಧೀಜಿ ವೃತ್ತದಲ್ಲಿದ್ದ ರಾಷ್ಟ್ರಪಿತನ ಪ್ರತಿಮೆ ಧ್ವಂಸಗೊಳಿಸಲಾಗಿದೆ. ಬೈಕ್ ನಲ್ಲಿ ಆಗಮಿಸಿದ ಇಬ್ಬರು ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗಿದ್ದು, ಈ ಕುರಿತಂತೆ ಇನ್ನಷ್ಟೆ ಹೆಚ್ಚಿನ ವಿವರಗಳು ತಿಳಿದುಬರಬೇಕಾಗಿದೆ.

ಮಹಾತ್ಮ ಗಾಂಧೀಜಿ ಪ್ರತಿಮೆ ಧ್ವಂಸಗೊಳಿಸಿದ ದುಷ್ಕರ್ಮಿಗಳು!

ಗಾಂಧೀಜಿ ಪ್ರತಿಮೆಯ ಧ್ವಂಸ ವಿಷಯ ತಿಳಿಯುತ್ತಿದ್ದಂತೆ ಸೋಮವಾರ ಬೆಳಿಗ್ಗೆ ಸ್ಥಳೀಯ ನೂರಾರು ನಾಗರೀಕರು, ಗಾಂಧೀಜಿ ವೃತ್ತದಲ್ಲಿ ಜಮಾಯಿಸಿ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಾತ್ಮ ಗಾಂಧೀಜಿ ಪ್ರತಿಮೆ ಧ್ವಂಸಗೊಳಿಸಿದ ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ಅವರ ವಿರುದ್ದ ಕಠಿಣ ಕ್ರಮ ಜರುಗಿಸಬೇಕು ಎಂದು ಪೊಲೀಸರಿಗೆ ಒತ್ತಾಯಿಸಿದ್ದಾರೆ. ಉದ್ರಿಕ್ತ ಪ್ರತಿಭಟನಾಕಾರರ ಮನವೊಲಿಕೆಗೆ ಪೊಲೀಸರು ಹರಸಾಹಸ ನಡೆಸುವಂತಾಯಿತು.

ಮಹಾತ್ಮ ಗಾಂಧೀಜಿ ಪ್ರತಿಮೆ ಧ್ವಂಸಗೊಳಿಸಿದ ದುಷ್ಕರ್ಮಿಗಳು!

ಮುನ್ನೆಚ್ಚರಿಕೆ ಕ್ರಮವಾಗಿ ಗಾಂಧೀಜಿ ವೃತ್ತ ಸೇರಿದಂತೆ ಪಟ್ಟಣದ ಆಯಕಟ್ಟಿನ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಮತ್ತೊಂದೆಡೆ ಹೊಳೆಹೊನ್ನೂರು ಠಾಣೆ ಪೊಲೀಸರು ದುಷ್ಕರ್ಮಿಗಳ ಪತ್ತೆಗೆ ಕ್ರಮಕೈಗೊಂಡಿದ್ದಾರೆ.

*ಉಳುವವನೇ ಭೂಮಿ ಒಡೆಯ ಎನ್ನುವುದನ್ನು ಬಿಜೆಪಿ ಉಲ್ಟಾ ಮಾಡಿದೆ : ಉಳ್ಳವನೇ ಭೂಮಿ ಒಡೆಯ ನನ್ನಾಗಿಸಿದೆ – ಸಿಎಂ ಸಿದ್ದರಾಮಯ್ಯ ಕಾಗೋಡು ತಿಮ್ಮಪ್ಪ ಅವರಿಗೆ ದೇವರಾಜ ಅರಸು ಪ್ರಶಸ್ತಿ ಪ್ರದಾನ Previous post ‘ಉಳುವವನೇ ಭೂಮಿ ಒಡೆಯ ಎನ್ನುವುದನ್ನು ಬಿಜೆಪಿ ಉಲ್ಟಾ ಮಾಡಿದೆ ; ಉಳ್ಳವನೇ ಭೂಮಿ ಒಡೆಯನನ್ನಾಗಿಸಿದೆ’ – ಸಿಎಂ ಸಿದ್ದರಾಮಯ್ಯ ಟೀಕೆ 
ಮಹಾತ್ಮ ಗಾಂಧೀಜಿ ಪ್ರತಿಮೆ ಧ್ವಂಸ : ದೇಶ ವಿರೋಧಿ ಕೃತ್ಯ – ಸಿಎಂ ಸಿದ್ದರಾಮಯ್ಯ ಆಕ್ರೋಶ Next post ಮಹಾತ್ಮ ಗಾಂಧೀಜಿ ಪ್ರತಿಮೆ ಧ್ವಂಸ : ದೇಶ ವಿರೋಧಿ ಕೃತ್ಯ – ಸಿಎಂ ಆಕ್ರೋಶ