ಮಹಾತ್ಮ ಗಾಂಧೀಜಿ ಪ್ರತಿಮೆ ಧ್ವಂಸ : ದೇಶ ವಿರೋಧಿ ಕೃತ್ಯ – ಸಿಎಂ ಸಿದ್ದರಾಮಯ್ಯ ಆಕ್ರೋಶ

ಮಹಾತ್ಮ ಗಾಂಧೀಜಿ ಪ್ರತಿಮೆ ಧ್ವಂಸ : ದೇಶ ವಿರೋಧಿ ಕೃತ್ಯ – ಸಿಎಂ ಆಕ್ರೋಶ

ಬೆಂಗಳೂರು / ಶಿವಮೊಗ್ಗ, ಆ. 21: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಹೊಳೆಹೊನ್ನೂರು ಪಟ್ಟಣದಲ್ಲಿ, ಮಹಾತ್ಮ ಗಾಂಧೀಜಿ ಅವರ ಪ್ರತಿಮೆ ಧ್ವಂಸಗೊಳಿಸಿದ ದುಷ್ಕರ್ಮಿಗಳ ಕೃತ್ಯವನ್ನು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರವಾಗಿ ಖಂಡಿಸಿದ್ದಾರೆ.

‘ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆ ಧ್ವಂಸಗೊಳಿಸಿದ ದೇಶ ವಿರೋಧಿ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೆನೆ. ಈ ನೆಲದ ಸ್ವಾತಂತ್ರ್ಯ ಚಳುವಳಿ ಹಿನ್ನೆಲೆ, ಸಂವಿಧಾನ ಮತ್ತು ಕಾನೂನಿನ ಬಗೆಗೆ ಗೌರವ ಇಲ್ಲದವರು ಮಾತ್ರ ಇಂತಹ ಹೀನ ಕೃತ್ಯ ಎಸಗಲು ಸಾಧ್ಯ’ ಎಂದು ಸಿಎಂ ತಿಳಿಸಿದ್ದಾರೆ.

ಈ ಕುರಿತಂತೆ ಸೋಮವಾರ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ‘ಈ ಕುಕೃತ್ಯದ ಹಿಂದೆ ಯಾರೇ ಇರಲಿ ಅವರನ್ನು ಹಿಡಿದು ಕಾನೂನಿನ ಪ್ರಕಾರ ಕಠಿಣ ಶಿಕ್ಷೆಗೊಳಪಡಿಸಲಾಗುವುದು’ ಎಂದು ಸ್ಪಷ್ಟಪಡಿಸಿದ್ದಾರೆ.

‘ಯಾರೊಬ್ಬರು ಈ ಬಗ್ಗೆ ಉದ್ವೇಗಕ್ಕೆ ಒಳಗಾಗಿ ಕಾನೂನು ಕೈಗೆತ್ತಿಕೊಳ್ಳಬಾರದು. ಶಾಂತಿ, ಸುವ್ಯವಸ್ಥೆ ಕಾಪಾಡಲು ಸಹಕರಿಸಬೇಕು’ ಎಂದು ನಾಗರೀಕರಿಗೆ ಸಿಎಂ ಮನವಿ ಮಾಡಿದ್ದಾರೆ.

ಮಹಾತ್ಮ ಗಾಂಧೀಜಿ ಪ್ರತಿಮೆ ಧ್ವಂಸಗೊಳಿಸಿದ ದುಷ್ಕರ್ಮಿಗಳು : ನಾಗರೀಕರ ಪ್ರತಿಭಟನೆ : ಕಠಿಣ ಕ್ರಮಕ್ಕೆ ಆಗ್ರಹ! Previous post ಮಹಾತ್ಮ ಗಾಂಧೀಜಿ ಪ್ರತಿಮೆ ಧ್ವಂಸಗೊಳಿಸಿದ ದುಷ್ಕರ್ಮಿಗಳು!
Next post ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ರಚನೆಗೆ ಸಿಎಂ ಸಮ್ಮತಿ