ಬೆಂಗಳೂರಿನಿಂದ ಶಿವಮೊಗ್ಗಕ್ಕೆ ವಿಮಾನ ಹಾರಾಟಕ್ಕೆ ಚಾಲನೆ

ಬೆಂಗಳೂರಿನಿಂದ ಶಿವಮೊಗ್ಗಕ್ಕೆ ವಿಮಾನ ಹಾರಾಟಕ್ಕೆ ಚಾಲನೆ

ಬೆಂಗಳೂರು/ಶಿವಮೊಗ್ಗ, ಆ. 31: ಬೆಂಗಳೂರಿನಿಂದ ಶಿವಮೊಗ್ಗಕ್ಕೆ ವಿಮಾನ ಹಾರಾಟಕ್ಕೆ ಮಂಗಳವಾರ ಬೆಳಿಗ್ಗೆ ವಿಧ್ಯುಕ್ತ ಚಾಲನೆ ದೊರಕಿದೆ.

ಬೆಂಗಳೂರಿನ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಶಿವಮೊಗ್ಗದ ರಾಷ್ಟ್ರಕವಿ ಕುವೆಂಪು ವಿಮಾನ ನಿಲ್ದಾಣಕ್ಕೆ ಮೊದಲ ವಿಮಾನ ಬೆಳಿಗ್ಗೆ 9.50 ಕ್ಕೆ ಪ್ರಯಾಣ ಆರಂಭಿಸಿತು. ಇಂಡೀಗೋ ಏರ್ ಲೈನ್ಸ್ ಸಂಸ್ಥೆಯ ಸಿಬ್ಬಂದಿಗಳು ಗಣ್ಯರಿಗೆ ಪುಷ್ಪಗುಚ್ಛ ನೀಡುವ ಮೂಲಕ ಸ್ವಾಗತಿಸಿದರು.

ಶಿವಮೊಗ್ಗಕ್ಕೆ ಹೊರಟ ವಿಮಾನದಲ್ಲಿ ಮೂಲಸೌಕರ್ಯ ಇಲಾಖೆ ಸಚಿವ ಎಂ.ಬಿ.ಪಾಟೀಲ್, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಮಾಜಿ ಸಚಿವ ಆರಗ ಜ್ಞಾನೇಂದ್ರ, ಶಾಸಕ ಬಿ.ವೈ.ವಿಜಯೇಂದ್ರ, ಮಾಜಿ ಶಾಸಕ ಹರತಾಳು ಹಾಲಪ್ಪ ಸೇರಿದಂತೆ ಮೊದಲಾದವರಿದ್ದರು.

ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆ ಗೃಹಲಕ್ಷ್ಮಿಗೆ ಮೈಸೂರಿನಲ್ಲಿ ಅದ್ದೂರಿ ಚಾಲನೆ ಚುನಾವಣಾ ಪ್ರಣಾಳಿಕೆಯನ್ನು ಸಮರ್ಪಕವಾಗಿ ಜಾರಿಮಾಡುವುದು ರಾಜಧರ್ಮ : ಮುಖ್ಯಮಂತ್ರಿ ಸಿದ್ದರಾಮಯ್ಯ Previous post ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆ ಗೃಹಲಕ್ಷ್ಮಿಗೆ ಮೈಸೂರಿನಲ್ಲಿ ಅದ್ದೂರಿ ಚಾಲನೆ
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಹಿಂದಿಗೆ ಆದ್ಯತೆ : ಕನ್ನಡ ಭಾಷೆ ಕಡೆಗಣನೆ - ನೆಟ್ಟಿಗರು ಗರಂ! Next post ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಹಿಂದಿಗೆ ಆದ್ಯತೆ : ಕನ್ನಡ ಭಾಷೆ ಕಡೆಗಣನೆ – ನೆಟ್ಟಿಗರು ಗರಂ!